ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ. ಕಿಶನ್ ರೆಡ್ಡಿ ನೇಮಕ

ಹೈದರಾಬಾದ್, ಜುಲೈ 4: ನಿರೀಕ್ಷೆ ಮಾಡಿದಂತೆಯೇ ತೆಲಂಗಾಣ ಬಿಜೆಪಿ ಅಧ್ಯಕ್ಷರಾಗಿ ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ನೇಮಕ ಮಾಡಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ಗಂಭೀರವಾಗಿ ಚಿಂತನೆ ನಡೆಸಿತ್ತು ಈ ಬೆನ್ನಲ್ಲೇ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದೆ.

ಸೋಮವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಇಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ತೆಲಂಗಾಣದಲ್ಲಿ ಬಿಜೆಪಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಬಂಡಿ ಸಂಜಯ್ ಜಾಗಕ್ಕೆ ಕಿಶನ್ ರೆಡ್ಡಿ ಅವರನ್ನು ನೇಮಿಸಲಾಗಿದ್ದು, ಬಂಡಿ ಸಂಜಯ್ ಅವರು ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯ ಸಚಿವರಾಗಿ (MoS) ಸ್ಥಾನ ಪಡೆಯುವ ಸಾಧ್ಯತೆಯಿದೆ.

Kishan Reddy Appointed as New Telangana BJP Chief, Replacing Bandi Sanjay

ರಾಜ್ಯಾಧ್ಯಕ್ಷರ ಜೊತೆ ರಾಜ್ಯ ಬಿಜೆಪಿಯಲ್ಲಿ ಇನ್ನೂ ಹಲವು ಬದಲಾವಣೆಗಳಾಗಲಿವೆ. ಸೇರ್ಪಡೆ ಸಮಿತಿ ಅಧ್ಯಕ್ಷ ಈಟಾಲ ರಾಜೇಂದರ್ ಅವರನ್ನು ಚುನಾವಣಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸುವುದು, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಡಿ ಕೆ ಅರುಣಾ ಅವರು ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಿಶನ್ ರೆಡ್ಡಿ, ಡಾ ಕೆ ಲಕ್ಷ್ಮಣ್, ಸಂಜಯ್, ರಾಜೇಂದರ್, ಕೋಮಟಿರೆಡ್ಡಿ ರಾಜಗೋಪಾಲ್ ರೆಡ್ಡಿ, ಅರುಣಾ ಮತ್ತು ರಾಜ್ಯ ಘಟಕದ ಇತರ ಪ್ರಮುಖ ವ್ಯಕ್ತಿಗಳು ಸೇರಿದಂತೆ ಪಕ್ಷದ ಮುಖಂಡರ ನಡುವೆ ಸುದಿರ್ಘ ಚರ್ಚೆಯ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಳೆದ ನಾಲ್ಕು ತಿಂಗಳುಗಳಲ್ಲಿ, ಭಿನ್ನಮತೀಯ ನಾಯಕರ ಬೇಡಿಕೆಗಳು ಮತ್ತು ಕರ್ನಾಟಕದಲ್ಲಿ ಬಿಜೆಪಿಯ ಹೀನಾಯ ಸೋಲು ಬಿಜೆಪಿಗೆ ಹಿನ್ನಡೆ ಉಂಟುಮಾಡಿದೆ. ಸದ್ಯ ಬಿಜೆಪಿಗೆ ಸೇರ್ಪಡೆಯಾಗಲು ಇತರೆ ಪಕ್ಷಗಳ ನಾಯಕರು ಹಿಂಜರಿಯುತ್ತಿದ್ದಾರೆ. ಅಮಾನತುಗೊಂಡಿರುವ ಬಿಆರ್‌ಎಸ್ ನಾಯಕರು ಕಾಂಗ್ರೆಸ್ ಸೇರಲು ನಿರ್ಧರಿಸಿರುವುದು ಬಿಜೆಪಿ ಪಾಳಯದಲ್ಲಿ ಆತಂಕ ಮೂಡಿಸಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ರಾಜ್ಯದಲ್ಲಿ ಪಕ್ಷದ ಅಸ್ಥಿತ್ವಕ್ಕೆ ಭಾರಿ ಹೊಡೆತ ಬೀಳಲಿದೆ. ಈ ಕಾರಣಕ್ಕೆ ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ.

ಆಂಧ್ರದಲ್ಲೂ ಅಧ್ಯಕ್ಷರ ಬದಲಾವಣೆ

ತೆಲಂಗಾಣದಲ್ಲಿ ಮಾತ್ರವಲ್ಲದೆ ಆಂಧ್ರ ಪ್ರದೇಶದಲ್ಲಿ ಕೂಡ ಬಿಜೆಪಿ ಅಧ್ಯಕ್ಷರು ಬದಲಾಗಿದ್ದಾರೆ. ಮಂಗಳವಾರ ಸೋಮವೀರರಾಜುಗೆ ಕರೆ ಮಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಪಕ್ಷದ ಅಧ್ಯಕ್ಷರಾಗಿರುವ ವೀರರಾಜು ಅವರ ಅವಧಿ ಪೂರ್ಣಗೊಂಡಿದ್ದು ರಾಜೀನಾಮೆ ನೀಡಬೇಕು ಎಂದು ಸೂಚಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸೋಮು ವೀರರಾಜು ಬದಲಿಗೆ ಪುರಂದರೇಶ್ವರಿ ಅವರಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಸತ್ಯಕುಮಾರ್ ಅವರು ಅಧ್ಯಕ್ಷರಾಗಿ ನೇಮಕವಾಗುತ್ತಾರೆ ಎನ್ನಲಾಗಿತ್ತು, ಆದರೆ ಬಿಜೆಪಿ ಹೈಕಮಾಂಡ್ ಅಚ್ಚರಿಯ ನಿರ್ಧಾರ ತೆಗೆದುಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+