ಭರ್ಜರಿ ಶತಕ ಸಿಡಿಸಿದ ಕೆ.ಎಲ್ ರಾಹುಲ್: ಸಚಿನ್ ದಾಖಲೆ ನೆಲಸಮ
ದುಬೈ, ಸೆಪ್ಟೆಂಬರ್ 24: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ, ಕನ್ನಡಿಗ ಕೆ.ಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾನೆ.
ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ನಾಯಕ ಕೆ.ಎಲ್ ರಾಹುಲ್ ಭರ್ಜರಿ ಆಟವಾಡಿದ್ರು. ತಂಡವನ್ನ ಆರಂಭದಿಂದಲೂ ಉತ್ತಮವಾಗಿ ಮುನ್ನಡಿಸಿದ ಕೆ.ಎಲ್ ಮೈದಾನದ ಮೂಲೆ ಮೂಲೆಗೆ ಚೆಂಡಿನ ದರ್ಶನ ಮಾಡಿಸಿದರು.
ಕೇವಲ 62 ಎಸೆತಗಳಲ್ಲಿ ಶತಕ ಪೂರೈಸಿದ ಕೆ.ಎಲ್ ರಾಹುಲ್ ಇನ್ನಿಂಗ್ಸ್ನಲ್ಲಿ 7 ಭರ್ಜರಿ ಸಿಕ್ಸರ್ ಮತ್ತು 13 ಆಕರ್ಷಕ ಬೌಂಡರಿಗಳಿದ್ದವು. ರಾಹುಲ್ರ ಈ ಶತಕವು ಐಪಿಎಲ್ 13ನೇ ಆವೃತ್ತಿಯಲ್ಲಿ ಮೊದಲ ಶತಕವಾಗಿದೆ. ರಾಹುಲ್ಗೆ ಇದು ವೈಯಕ್ತಿಕವಾಗಿ ಎರಡನೇ ಐಪಿಎಲ್ ಶತಕವಾಗಿದೆ. ಅಲ್ಲದೆ ಐಪಿಎಲ್ನಲ್ಲಿ ವೇಗವಾಗಿ 2,000ರನ್ ಪೂರೈಸಿದ ಭಾರತೀಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆ ನೆಲಸಮವಾಗಿದೆ.

ಅಂತಿಮವಾಗಿ ರಾಹುಲ್ 69 ಎಸೆಗಳಲ್ಲಿ 139 ರನ್ ಸಿಡಿಸಿದ್ದು, ಐಪಿಎಲ್ನಲ್ಲಿ ನಾಯಕನಾಗಿ ಗರಿಷ್ಠ ರನ್ ಸಿಡಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದಾನೆ. ಜೊತೆಗೆ ಇನ್ನಿಂಗ್ಸ್ವೊಂದರಲ್ಲಿ ಭಾರತದ ಯಾವುದೇ ಕ್ರಿಕೆಟಿಗನ ಗರಿಷ್ಟ ರನ್ ಇದಾಗಿದೆ.
ಕೆ.ಎಲ್ ರಾಹುಲ್ ಅಜೇಯ ಶತಕದ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ 3 ವಿಕೆಟ್ ನಷ್ಟಕ್ಕೆ 206ರನ್ಗಳಿಸಿದ್ದು ಆರ್ಸಿಬಿಗೆ 207ರನ್ ಟಾರ್ಗೆಟ್ ನೀಡಿದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications