ಜಾರ್ಖಂಡ್ ಸಿಎಂ ಪ್ರಮಾಣವಚನ ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗಿ ಹಾಗೂ ದಿನಾಂಕ, ಸಮಯಗಳ ವಿವರ ತಿಳಿಯಿರಿ
Jharkhand Chief Minister: ಈಗಾಗಲೇ ಜಾರ್ಖಂಡ್‌ನ 81 ವಿಧಾನಸಭಾ ಸ್ಥಾನಗಳಿಗೆ ವಿಧಾನಭೆ ಚುನಾವಣೆ ನಡೆದಿದ್ದು, ಫಲಿತಾಂಶ ಕೂಡ ಲಭ್ಯವಾಗಿದೆ. ಆಡಳಿತರೂಢ ಜೆಎಂಎಂ, ಕಾಂಗ್ರೆಸ್, ಆರ್‌ಜೆಡಿ ಮೈತ್ರಿಕೂಟ ಬಹುತ ಪಡೆಯುವ ಪಡೆಯುವ ಭರ್ಜರಿ ಗೆಲುವು ಸಾಧಿಸಿದೆ. ಇನ್ನು ರಾಜ್ಯದಲ್ಲಿ ಪ್ರಮಾಣವಚನ ಕಾರ್ಯಕ್ರಮವೊಂದು ಬಾಕಿಯಿದೆ. ಹಾಗಾದರೆ ಸಮಯ, ದಿನಾಂಕಗಳ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಜಾರ್ಖಂಡ್‌ನ 81 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತದಲ್ಲಿ ಮತದಾನ ನಡೆದಿತ್ತು. ನವೆಂಬರ್ 13ರಂದು 43 ಸ್ಥಾನಗಳಿಗೆ ಮೊದಲ ಹಂತದ ಮತದಾನ & ನವೆಂಬರ್ 20ರಂದು 38 ವಿಧಾನಸಭೆ ಸ್ಥಾನಗಳಿಗೆ ಎರಡನೇ ಹಂತದ ಮತದಾನ ನಡೆದಿತ್ತು. ನವೆಂಬರ್ 23ರಂದು ಫಲಿತಾಂಶ ಹೊರಬಿದ್ದಿತ್ತು.

ರಾಜ್ಯದಲ್ಲಿ ಮತ್ತೊಮ್ಮೆ ಸತತವಾಗಿ ಆಡಳಿತಾರೂಢ ಜೆಎಂಎಂ (ಜಾರ್ಖಂಡ್ ಮುಕ್ತಿ ಮೋರ್ಚಾ), ಕಾಂಗ್ರೆಸ್, ಆರ್‌ಜೆಡಿ ಮೈತ್ರಿಕೂಟಕ್ಕೆ ಬಹುಮತ ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಇನ್ನು ಇಲ್ಲಿ ಆಡಳಿತರೂಢ ಜೆಎಂಎಂ ಪಕ್ಷದ ನಾಯಕ ಹೇಮಂತ್ ಸೊರೇನ್ ನವೆಂಬರ್ 28ರಂದು ಜಾರ್ಖಂಡ್‌ನ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ನವೆಂಬರ್ 24ರಂದು ರಾಜಭವನದಲ್ಲಿ ರಾಜ್ಯಪಾಲ ಸಂತೋಷ್ ಗಂಗ್ವಾರ್ ಅವರನ್ನು ಭೇಟಿಯಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹೇಮಂತ್ ಸೊರೇನ್, ನೂತನ ಸರ್ಕಾರ ರಚನೆಯ ಹಕ್ಕು ಮಂಡನೆ ನಾಡಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆ ಪ್ರಕ್ರಿಯೆ ಆರಂಭ ಆಗಿದೆ. ನವೆಂಬರ್ 28ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎನ್ನುವ ಮಾಹಿತಿಯನ್ನು ನೀಡಿದ್ದರು.
ಅಲ್ಲದೆ ಇದಕ್ಕೂ ಮುಂಚೆ ಪಕ್ಷದ ಕಚೇರಿಯಲ್ಲಿ ನಡೆದ ಜೆಎಂಎಂ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಹೇಮಂತ್ ಸೊರೆನ್ ಅವರನ್ನು ನೂತನ ಶಾಸಕರನ್ನಾಗಿ ಆಯ್ಕೆ ಮಾಡಲಾಯಿತು. ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಹೇಮಂತ್ ಸೊರೆನ್ ಪಕ್ಷ ಜೆಎಂಎಂ 34, ಕಾಂಗ್ರೆಸ್ 16, ಆರ್‌ಜೆಡಿ 4 ಮತ್ತು ಸಿಪಿಐಎಂಎಲ್ 2 ಸೇರಿ 81 ವಿಧಾನಸಭೆ ಸ್ಥಾನಗಳಲ್ಲಿ 56 ಸ್ಥಾನಗಳನ್ನು ಗೆಲ್ಲುವ ಮೂಲಕ ಎರಡನೇ ಅವಧಿಯಲ್ಲೂ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಕೂಟದ ಸರ್ಕಾರ ರಚಿಸಲು ಮುಂದಾಗಿದೆ.
ಹೀಗೆ ಜಾರ್ಖಂಡ್‌ನಲ್ಲಿ 81 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಎಂಎಂ ನೇತೃತ್ವದ ಇಂಡಿಯಾ ಮೈತ್ರಿಕೂಟ 56 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಹಿಡಿದಿದೆ. ಬಿಜೆಪಿ ನೇತೃತ್ವದ ಮೈತ್ರಿಕೂಟ 24 ಸ್ಥಾನಗಳನ್ನು ಗೆದ್ದಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಪಕ್ಷ 288 ಸ್ಥಾನಗಳ ಪೈಕಿ 234 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆದಿದ್ದರೆ, ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ 50 ಸ್ಥಾನಗಳನ್ನಷ್ಟೇ ಗೆದ್ದಿದೆ.












Click it and Unblock the Notifications