Jharkhand Election 2024: ಜಾಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ಯಾವಾಗ?, ಇಲ್ಲಿದೆ ಮಾಹಿತಿ

Jharkhand Election 2024: ಈಗಾಗಲೇ ದೇಶದಲ್ಲಿ ಲೋಕಸಭೆ ಚುನಾವಣೆ ಮುಗಿದಿದೆ. ಇನ್ನು ಜಾರ್ಖಂಡ್‌ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಗೆಲುವುಗಾಗಿ ಕಾಂಗ್ರೆಸ್‌, ಬಿಜೆಪಿ ಸೇರಿದಂತೆ ಅಲ್ಲಿನ ಸ್ಥಳೀಯ ಪಕ್ಷಗಳು ಇನ್ನಿಲ್ಲದ ಪ್ರಯತ್ನಗಳನ್ನು ನಡೆಸುತ್ತಿವೆ. ಹಾಗಾದರೆ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ಯಾವಾಗ ನಡೆಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಇನ್ನು ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆಗಳು ಏಕಕಾಲದಲ್ಲಿ ನಡೆಯುಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಮತ್ತೊಂದೆಡೆ ಚುನಾವಣಾ ಆಯೋಗವು ಮುಂದಿನ ವಾರ ಎರಡೂ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಸಿದ್ಧತೆಯನ್ನು ಪರಿಶೀಲಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದಲ್ಲಿ ಆಯೋಗವು ಸೆಪ್ಟೆಂಬರ್ 23-24ರಂದು ಜಾರ್ಖಂಡ್‌ನಲ್ಲಿ ಮತ್ತು ಸೆಪ್ಟೆಂಬರ್ 27-28 ರಂದು ಮಹಾರಾಷ್ಟ್ರದಲ್ಲಿದೆ ಪರಿಶೀಲನೆ ನಡೆಸಲಿದೆ ಎಂದು ತಿಳಿದುಬಂದಿದೆ.

Know Jharkhand Assembly Election 2024 Date Information

ಈ ಹಿಂದೆ ನಡೆದ ಚುನಾವಣಾ ಸಮಯದಲ್ಲಿ ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದವು. ಆದರೆ, ಈ ಬಾರಿ ಚುನಾವಣಾ ಆಯೋಗ ಈ ಎರಡು ರಾಜ್ಯಗಳ ಚುನಾವಣೆಯನ್ನು ಪ್ರತ್ಯೇಕಿಸಿದೆ. ಕಳೆದ ಬಾರಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯನ್ನು ಸ್ವತಂತ್ರವಾಗಿ ನಡೆಸಲಾಗಿತ್ತು. ಆದರೆ ಇದೀಗ ಮಹಾರಾಷ್ಟ್ರ & ಜಾರ್ಖಂಡ್‌ನಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಮತ್ತೊಂದೆಡೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯು ನವೆಂಬರ್ 26ರಂದು ಮುಗಿಯಲಿದೆ. ಆದರೆ ಜಾರ್ಖಂಡ್‌ನ ಜನವರಿ 5 ರಂದು ಮುಕ್ತಾಯ ಆಗಲಿದೆ ಎನ್ನುವ ಮಾತುಗಳು ಕೇಳಿಬರುತ್ತುವೆ. ಈಗಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯುತ್ತಿದ್ದು, ಹರಿಯಾಣದಲ್ಲಿ ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಇನ್ನು ನವದೆಹಲಿಯ ವಿಧಾನಸಭಾ ಚುನಾವಣೆ ಫೆಬ್ರವರಿಯಲ್ಲಿ ನಡೆಯುವ ನಿರೀಕ್ಷೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮೊದಲ ಹಂತದ ಮತದಾನ ಮುಕ್ತಾಯ: ಈಗಾಗಲೇ ಜಮ್ಮು-ಕಾಶ್ಮೀರದ ವಿಧಾನಸಭೆಗೆ ಮೊದಲ ಹಂತದ ಚುನಾವಣೆ ನಡೆದಿದ್ದು, ಶೇಕಡ 59ರಷ್ಟು ಮತದಾನ ಆಗಿದೆ. 90 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಸೆಪ್ಟೆಂಬರ್‌ 18 ರಂದು ಚುನಾವಣೆ ನಡೆದಿದೆ.

2014ರಿಂದ ಜಮ್ಮು & ಕಾಶ್ಮೀರದಲ್ಲಿ ಇದು ಮೊದಲ ವಿಧಾನಸಭಾ ಚುನಾವಣೆಯಾಗಿದೆ. 2019ರಲ್ಲಿ ಹಿಂದಿನ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370ನೇ ವಿಧಿಯನ್ನು ತೆಗೆದುಹಾಕಿದ ನಂತರ ಇದು ಮೊದಲ ಚುನಾವಣೆ ಆಗಿದೆ.

370ನೇ ವಿಧಿಯನ್ನು ರದ್ದುಗೊಳಿಸಿದ ವೇಳೆ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಣೆ ಮಾಡಲಾಯಿತು. ಚುನಾವಣೆಯಲ್ಲಿ ಜಮ್ಮು-ಕಾಶ್ಮೀರದ ರಾಜ್ಯದ ಸ್ಥಾನಮಾನ ಒಂದು ಪ್ರಮುಖ ವಿಷಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+