ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕೊಚ್ಚಿಯಲ್ಲಿ ಸ್ಪೈಸ್ ಜೆಟ್ ವಿಮಾನದ ತುರ್ತು ಲ್ಯಾಂಡಿಂಗ್

|
Google Oneindia Kannada News

ಕೊಚ್ಚಿ, ಡಿಸೆಂಬರ್ 02: ಸೌದಿ ಅರೇಬಿಯಾದ ಜೆಡ್ಡಾದಿಂದ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವು ಹೈಡ್ರಾಲಿಕ್ ವೈಫಲ್ಯದಿಂದಾಗಿ ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಸ್ಪೈಸ್‌ಜೆಟ್‌ನ SG-306 ವಿಮಾನವು ಕೋಝಿಕ್ಕೋಡ್‌ಗೆ ಹಾರುತ್ತಿದ್ದಾಗ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯ ಕಾಣಿಸಿಕೊಂಡಿದೆ. ಈ ಕಾರಣದಿಂದಾಗಿ ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶ ಮಾಡುವುದಕ್ಕಾಗಿ ತಿರುಗಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Breaking: ಸ್ಪೈಸ್‌ಜೆಟ್ ಸಂಸ್ಥೆಗೆ 789 ಕೋಟಿ ನಷ್ಟ; CFO ಸಂಜೀವ್ ತನೇಜಾ ರಾಜೀನಾಮೆBreaking: ಸ್ಪೈಸ್‌ಜೆಟ್ ಸಂಸ್ಥೆಗೆ 789 ಕೋಟಿ ನಷ್ಟ; CFO ಸಂಜೀವ್ ತನೇಜಾ ರಾಜೀನಾಮೆ

ಶುಕ್ರವಾರ ಸಂಜೆ 6.27ಕ್ಕೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ರಾತ್ರಿ 7.19ಕ್ಕೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ತುರ್ತು ಸ್ಥಿತಿಯನ್ನು ಹಿಂಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Kochi: SpiceJet Flight From Saudi Arabias Jeddah Makes Emergency Landing

ತುರ್ತು ಪರಿಸ್ಥಿತಿ ನಂತರ ವಾತಾವರಣ ತಿಳಿ:

ತುರ್ತು ಪರಿಸ್ಥಿತಿಯನ್ನು ಎದುರಿಸಲು ವಿಮಾನ ನಿಲ್ದಾಣವು ಸಂಪೂರ್ಣ ಸಜ್ಜಾಗಿದೆ ಎಂದು ಕೊಚ್ಚಿ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಎಸ್ ಸುಹಾಸ್ ತಿಳಿಸಿದ್ದಾರೆ. ಈ ವಿಮಾನ ನಿಲ್ದಾಣದ ಎಚ್ಚರಿಕೆಯ ರಚನೆಯನ್ನು ಸಂಪೂರ್ಣವಾಗಿ ಸಕ್ರಿಯಗೊಳಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆದ ನಂತರ, ರನ್‌ವೇಯನ್ನು ಪರಿಶೀಲಿಸಿ ನಂತರ ಸಾಮಾನ್ಯ ಕಾರ್ಯಾಚರಣೆಗೆ ಹಸ್ತಾಂತರಿಸಲಾಯಿತು.

English summary
Kochi: SpiceJet Flight From Saudi Arabia's Jeddah Makes Emergency Landing. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X