ಕೋಲ್ಕತ್ತಾ ವೈದ್ಯೆ ಅತ್ಯಾಚಾರ ಪ್ರಕರಣ: ನಾಳೆ ದೇಶಾದ್ಯಾಂತ ವೈದ್ಯರ ಪ್ರತಿಭಟನೆ- ಬಂದ್‌ಗೆ ಕರೆ
ಕೋಲ್ಕತ್ತಾ ಆಗಸ್ಟ್ 16: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದ ವೈದ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ದೇಶಾದ್ಯಂತ ಪ್ರತಿಭಟನೆ ನಡೆಯಲಿದ್ದು ಬಂದ್‌ಗೆ ಕರೆ ನೀಡಲಾಗಿದೆ. ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ಟ್ರೈನಿ ವೈದ್ಯೆಯ ಅಮಾನುಷ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸದ್ಯ ಉಗ್ರ ಸ್ವರೂಪ ಪಡೆದುಕೊಂಡಿದೆ.
ಶನಿವಾರ (ಆಗಸ್ಟ್ 17) ದೇಶಾದ್ಯಂತ ಖಾಸಗಿ ವೈದ್ಯಕೀಯ ಸಂಸ್ಥೆಗಳು ಬಂದ್‌ಗೆ IMA ನಿರ್ಧಾರ ಮಾಡಿದೆ. ಅಲ್ಲದೆ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೆ ಇಂದು ಸಂಜೆ ರ್‍ಯಾಲಿಯಲ್ಲಿ ಭಾಗವಹಿಸಿದ್ದಾರೆ. ತನಿಖಾಧಿಕಾರಿಗಳಿಗೆ ಗಡುವು ಕೂಡ ನೀಡಲಾಗಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಒಗ್ಗಟ್ಟು ಪ್ರದರ್ಶಿಸಿ, ವೈದ್ಯರು ಮತ್ತು ವಿವಿಧ ವೈದ್ಯಕೀಯ ಸಂಸ್ಥೆಗಳ ಪ್ರತಿನಿಧಿಗಳು ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ಘೋಷಿಸಿದ್ದಾರೆ. ಈ ಪ್ರಕರಣದಲ್ಲಿ 19 ಜನರನ್ನು ಮಾತ್ರ ಬಂಧಿಸಲಾಗಿದೆ.
Press Release - 2, Dated 15.08.2024 pic.twitter.com/LcWQtRmK9x
— Indian Medical Association (@IMAIndiaOrg) August 15, 2024
ಪ್ರಕರಣವನ್ನು ಖಂಡಿಸಿ ತಿರುನಾಳ್ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (SCTIMST), ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ (RCC), ಡೆಂಟಲ್ ಪಿಜಿ ಅಸೋಸಿಯೇಷನ್, ಹೌಸ್ ಸರ್ಜನ್ಸ್ ಅಸೋಸಿಯೇಷನ್ ಮತ್ತು ಕೇರಳದ ವಿವಿಧ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿ ಸಂಘಗಳ ಸಹಯೋಗದೊಂದಿಗೆ ಕೇರಳ ವೈದ್ಯಕೀಯ ಸ್ನಾತಕೋತ್ತರ ಸಂಘ (KMPGA) 24 ಗಂಟೆಗಳ ಮುಷ್ಕರಕ್ಕೆ ಕರೆ ನೀಡಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಯ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣದ ಬಗ್ಗೆ ಕೋಲ್ಕತ್ತಾ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ವೈದ್ಯರಿಗೆ ಸುರಕ್ಷಿತ ಕೆಲಸದ ವಾತಾವರಣವನ್ನು ಒದಗಿಸಲಾಗದ ಸರ್ಕಾರದ ಸಾಮರ್ಥ್ಯವನ್ನು ಪ್ರಶ್ನಿಸಿದೆ. ಆರ್‌ಜಿ ಕರ್ ಆಸ್ಪತ್ರೆಯಿಂದ ರೋಗಿಗಳನ್ನು ಸ್ಥಳಾಂತರಿಸಿ, ಆಸ್ಪತ್ರೆಯನ್ನು ಮುಚ್ಚುವುದು ಉತ್ತಮ ಎಂದು ಅದು ಹೇಳಿದೆ.
ಅಲ್ಲದೆ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾನಿರತ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಆಗಸ್ಟ್ 14ರ ಮಧ್ಯರಾತ್ರಿ ನಡೆದ ದಾಳಿಯ ಬಗ್ಗೆ ಕೋಲ್ಕತ್ತಾ ಹೈಕೋರ್ಟ್ ವಿಚಾರಣೆ ನಡೆಸಿದೆ.
ತಮ್ಮ ಸಹೋದ್ಯೋಗಿಯನ್ನು ಕಳೆದುಕೊಂಡ ನೋವು ಹಾಗೂ ಆಘಾತದ ನಡುವೆ ತಮ್ಮ ಸುರಕ್ಷತೆಗಾಗಿ ಆಗ್ರಹಿಸಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸುತ್ತಿರುವಂತೆಯೇ ಬುಧವಾರ ರಾತ್ರಿ ಗುಂಪೊಂದು ಆಸ್ಪತ್ರೆ ಮೇಲೆ ದಾಳಿ ನಡೆಸಿ ವಿಧ್ವಂಸಕ ಕೃತ್ಯ ಎಸಗಿದೆ. ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್ ಅನ್ನು ಸಂಪೂರ್ಣವಾಗಿ ನಾಶಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಡರಾತ್ರಿ ನಡೆದ ಘಟನೆಯು ಹಿಂಸಾಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಗುಂಪನ್ನು ಚೆದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿ, ಲಾಠಿ ಪ್ರಹಾರ ನಡೆಸಿದರು. ಇದು ಘಟನೆಯ ದಿಕ್ಕು ಬದಲಿಸಲು ಹಾಗೂ ಪ್ರತಿಭಟನಾನಿರತ ವೈದ್ಯರಲ್ಲಿ ಭಯ ಮೂಡಿಸಲು ಟಿಎಂಸಿ ಕಾರ್ಯಕರ್ತರು ಮಾಡಿರುವ ಕೃತ್ಯ ಎಂದು ಬಿಜೆಪಿ ಆರೋಪಿಸಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications