Kolkata Durga Puja Stampede: ದುರ್ಗಾ ಪೂಜಾ ಪಂಡಾಲ್‌ನಲ್ಲಿ ಕಾಲ್ತುಳಿತ; 17 ಮಂದಿ ಸಾವು, 35ಕ್ಕೂ ಹೆಚ್ಚು ಜನರಿಗೆ ಗಾಯ!
ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಭಾರೀ ಕಾಲ್ತುಳಿತ ದುರಂತ ಸಂಭವಿಸಿದೆ. ಕೋಲ್ಕತ್ತಾದ ಚೋರ್ಬಗನ್ ದುರ್ಗಾ ಪೂಜಾ ಪಂಡಾಲ್ ನಲ್ಲಿ ಶನಿವಾರ ಕಾಲ್ತುಳಿತ ಪರಿಸ್ಥಿತಿ ಉಂಟಾಗಿದ್ದು, ಜನಸಂದಣಿ ಹೆಚ್ಚಾಗಿದೆ. ಉತ್ತರ ಕೋಲ್ಕತ್ತಾದ ಚೋರ್ಬಗನ್ ಸರ್ಬೋಜನಿನ್ ದುರ್ಗಾ ಪೂಜಾ ಪಂಡಾಲ್‌ನಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತ ಪರಿಸ್ಥಿತಿಯಲ್ಲಿ ಕನಿಷ್ಠ 17 ಜನರು ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಪ್ತಮಿಯ ದಿನವಾಶ ಶನಿವಾರ ದುರ್ಗಾ ಪೂಜೆಯನ್ನು ಆಚರಿಸಲು ಈ ಪ್ರದೇಶದಲ್ಲಿ ಸಾವಿರಾರು ಜನರು ಸೇರಿದ್ದರು. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರಿಂದಾಗಿ ಈ ದುರಂತ ಸಂಭವಿಸಿದೆ.
ಭಾರೀ ಜನಸಂದಣಿ ಮತ್ತು ಈ ಪ್ರದೇದಲ್ಲಿನ ಬಿಸಿಲಿನ ವಾತಾವರಣವು ಈ ಪರಿಸ್ಥಿತಿಗೆ ಕಾರಣವಾಗಿದ್ದು, ಭಕ್ತರಲ್ಲಿ ಭೀತಿ ಮೂಡಿಸಿತ್ತು. ಜನದಟ್ಟಣೆಯ ಮಧ್ಯೆ ಪಂಡಾಲ್‌ನ ಒಂದು ಭಾಗ ಕುಸಿದಿದೆ ಎಂದು ವರದಿಯಾಗಿದೆ. ಈ ಕಾಲ್ತುಳಿತ ದುರಂತದಲ್ಲಿ ಗಾಯಾಗೊಂಡವರನ್ನು ಚಿಕಿತ್ಸೆಗಾಗಿ ಕೋಲ್ಕತ್ತಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಪರಿಸ್ಥಿತಿಯನ್ನು ನಿರ್ವಹಿಸಲು ಪಂಡಾಲ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಬಿಸಿಲು ಮತ್ತು ಜನದಟ್ಟಣೆಯಿಂದಾಗಿ ಹಲವರು ಅಸ್ವಸ್ಥರಾಗಿದ್ದಾರೆ. ಆದರೆ ಕಾಲ್ತುಳಿತದ ವದಂತಿಗಳು ಭೀತಿಯನ್ನು ಹೆಚ್ಚಿಸಿವೆ ಎಂದು ವರದಿಯಾಗಿದೆ. ಅಧಿಕಾರಿಗಳು ಮತ್ತು ಪೂಜಾ ಸಂಘಟಕರು ಜನಸಂದಣಿಯನ್ನು ನಿಯಂತ್ರಿಸಲು ಮತ್ತು ಸಂತಸ್ತ್ರರಿಗೆ ಸಹಾಯ ಮಾಡಲು ಮಧ್ಯಪ್ರವೇಶಿಸಿದರು.
ಮುಖ್ಯಮಂತ್ರಿಯಿಂದ ಪರಿಶೀಲನೆ
ಇನ್ನು ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೋಜ್ ಅಗರ್ವಾಲ್ ಅವರು ಕೋಲ್ಕತ್ತದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸ್ ಸಿಬ್ಬಂದಿ ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳು ಸಹ ಸ್ಥಳಕ್ಕೆ ತಲುಪಿದ್ದಾರೆ. ಪೂಜಾ ಆಯೋಜಕರು ಜನರನ್ನು ಸ್ಥಳಾಂತರಿಸುವಲ್ಲಿ ಮತ್ತು ಸಂತ್ರಸ್ತರಿಗೆ ವೈದ್ಯಕೀಯ ಚಿಕಿತ್ಸೆ ನೀಡುವಲ್ಲಿ ಸಹಾಯ ಮಾಡಿದ್ದಾರೆ ಎಂದು ಹೇಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸಂತಾಪ
ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಕೋಲ್ಕತ್ತಾದಲ್ಲಿ ಸಂಭವಿಸಿದ ಕಾಲ್ತುಳಿತವು ಅತ್ಯಂತ ದುಃಖಕರ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು ಮತ್ತು ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದಿದ್ದಾರೆ.
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ನಲ್ಲಿ ಘಟನೆಯ ಬಗ್ಗೆ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಿದ್ದಾರೆ. ಚೋರ್ ಬಗನ್ ಪೂಜಾ ಪಂಡಲ್‌ನಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ತಿಳಿದು ತೀವ್ರ ಆಘಾತ ಮತ್ತು ದುಃಖವಾಗಿದೆ ಎಂದಿದ್ದಾರೆ. ಮುಂದುವರಿದು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದ್ದು, ಕಷ್ಟದ ಸಮಯವನ್ನು ಭರಿಸುವ ಶಕ್ತಿ ಅವರಿಗೆ ಸಿಗಲಿ ಎಂದು ಹೇಳಿದ್ದಾರೆ.


Click it and Unblock the Notifications
