Get Updates
Get notified of breaking news, exclusive insights, and must-see stories!

Kolkata Protest: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್, ಆಶ್ರುವಾಯು; ಪಶ್ಚಿಮ ಬಂಗಾಳ ಬಂದ್‌ಗೆ ಬಿಜೆಪಿ ಕರೆ

ಕೋಲ್ಕತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ, ಪಶ್ಚಿಮ ಬಂಗಾಳದಲ್ಲಿ ಭಾರಿ ಆಕ್ರೋಶ ಹುಟ್ಟುಹಾಕಿದೆ. ಘಟನೆಯನ್ನು ಖಂಡಿಸಿ, ಮಂಗಳವಾರ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿತ್ತು, ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾಗಿದ್ದು, ಲಾಠಿ ಚಾರ್ಜ್ ಮಾಡಿದ್ದು, ಆಶ್ರುವಾಯು ಸಿಡಿಸಿದ್ದಾರೆ.

ಪೊಲೀಸರ ವರ್ತನೆಯಿಂದ ಸಿಟ್ಟಿಗೆದ್ದಿರುವ ಪಶ್ಚಿಮ ಬಂಗಾಳ ಬಿಜೆಪಿ ಬುಧವಾರ 12 ಗಂಟೆಗಳ ಕಾಲ ಮುಷ್ಕರಕ್ಕೆ ಕರೆ ಕೊಟ್ಟಿದೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿ, ಅಶ್ರುವಾಯು ಬಳಸಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಮಮತಾ ಬ್ಯಾನರ್ಜಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.

Kolkata Protests Erupt Police Deploy Water Cannons Tear Gas Against Demonstrators

ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣವನ್ನು ಖಂಡಿಸಿ ರಾಜ್ಯ ಕಾರ್ಯದರ್ಶಿ ಮತ್ತು ಸಚಿವಾಲಯಗಳಿರುವ ನಬಣ್ಣ ಭವನಕ್ಕೆ ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಮೆರವಣಿಗೆ ಮಾಡಲು ನಿರ್ಧರಿಸಿದ್ದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಅಶ್ರುವಾಯು ಶೆಲ್‌ಗಳು ಮತ್ತು ಜಲಫಿರಂಗಿಗಳನ್ನು ಬಳಸಿದ್ದು ಭಾರಿ ಆಕ್ರೋಶ ಹುಟ್ಟುಹಾಕಿದೆ. ಕೆಲವು ಪ್ರತಿಭಟನಾಕಾರರು ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಿದ್ದಾರೆ.

ಭಾರಿ ಬಂದೋಬಸ್ತ್

ಘಟನೆ ಬಗ್ಗೆ ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಪ್ರತಿಭಟನಾ ಮೆರವಣಿಗೆಗೆ ಅನುಮತಿ ನೀಡಿರಲಿಲ್ಲ, ಆದರೂ ಗಲಭೆ ಮಾಡುವ ಮೂಲಕ ರಾಜ್ಯದಲ್ಲಿ ಅಶಾಂತಿ ಸೃಷ್ಠಿಸಿ, ಹಿಂಸಾಚಾರ ನಡೆಸಲು ಪಿತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದೆ. ಪ್ರತಿಭಟನೆ ಹಿನ್ನಲೆ ನಬಣ್ಣಾ ಭವನಕ್ಕೆ ಭಾರಿ ಬಿಗಿ ಬಂದೋಬಸ್ತ್ ನೀಡಲಾಗಿತ್ತು. 6000 ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಪ್ರತಿಭಟನಾಕಾರರ ಮೇಲೆ ನಿಗಾ ಇಡಲು ಡ್ರೋನ್‌ಗಳನ್ನು ಸಹ ಬಳಸಲಾಯಿತು. ಬ್ಯಾರಿಕೇಡ್‌ಗಳನ್ನು ನೆಲಕ್ಕೆ ಬೆಸುಗೆ ಹಾಕಲಾಗಿದೆ ಮತ್ತು ಪ್ರತಿಭಟನಾಕಾರರು ಅವುಗಳ ಮೇಲೆ ಹತ್ತುವುದನ್ನು ತಪ್ಪಿಸಲು ಗ್ರೀಸ್ ಸವರಲಾಗಿತ್ತು.

ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹ

ಮಂಗಳವಾರ ಬೆಳಗ್ಗೆ ಕಾಲೇಜು ಸೌಕದಲ್ಲಿ ಸೇರಿದ ಪ್ರತಿಭಟನಾಕಾರರು ನಬಣ್ಣ ಭವನದ ಕಡೆಗೆ ಸಾಗಿತು. ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಲಾಯಿತು. ಹಲವು ವಿದ್ಯಾರ್ಥಿ ಸಂಘಟನೆಗಳು ಮತ್ತು ನಾಗರಿಕ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ನೀಡಿದವು.

ಇದು ಬಿಜೆಪಿ ಬೆಂಬಲಿತ ಪ್ರತಿಭಟನೆ ಎಂದು ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ಮಾಡುತ್ತವೆ ಎಂದು ಹೇಳಲಾಗಿತ್ತು, ಆದರೆ ರಾಜಕೀಯ ಪಕ್ಷಗಳಿಗೆ ಸೇರಿದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು ಎಂದು ಹೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+