ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷ್ಣಾ ನದಿ ಹಂಚಿಕೆ, ನ್ಯಾಯಾಧಿಕರಣದಿಂದ ಕರ್ನಾಟಕಕ್ಕೆ ರಿಲೀಫ್

ಕೃಷ್ಣಾ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬ್ರಿಜೇಶ್ ಕುಮಾರ್ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ತೀರ್ಪು ಪ್ರಕಟಿಸಿದ್ದು, ಅದರಂತೆ ತೆಲಂಗಾಣ ರಾಜ್ಯಕ್ಕೆ ಪ್ರತ್ಯೇಕವಾಗಿ ಕೃಷ್ಣಾ ನದಿ ನೀರು ಹರಿಸಬೇಕಾಗಿಲ್ಲ

By Mahesh
|
Google Oneindia Kannada News

ಬೆಂಗಳೂರು, ಅಕ್ಟೋಬರ್ 19: ಕಾವೇರಿ ನದಿ ನೀರು ಹಂಚಿಕೆ ವಿವಾದದ ವಿಚಾರಣೆ ಜಾರಿಯಲ್ಲಿರುವಾಗಲೇ ಕೃಷ್ಣಾ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ಬುಧವಾರ ತನ್ನ ತೀರ್ಪು ಪ್ರಕಟಿಸಿದೆ.

ಕೃಷ್ಣಾ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬ್ರಿಜೇಶ್ ಕುಮಾರ್ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ತೀರ್ಪು ಪ್ರಕಟಿಸಿದ್ದು, ಅದರಂತೆ ತೆಲಂಗಾಣ ರಾಜ್ಯಕ್ಕೆ ಪ್ರತ್ಯೇಕವಾಗಿ ಕೃಷ್ಣಾ ನದಿ ನೀರು ಹರಿಸಬೇಕಾಗಿಲ್ಲ ಎಂದು ಕರ್ನಾಟಕ ಹಾಗೂ ಮಹರಾಷ್ಟ್ರ ರಾಜ್ಯಗಳಿಗೆ ಸೂಚಿಸಲಾಗಿದೆ.

ಆಂಧ್ರಪ್ರದೇಶ ಇಬ್ಭಾಗವಾದ ಬಳಿಕ ಕೃಷ್ಣಾ ನದಿ ನೀರಿನಲ್ಲಿ ನಮಗೂ ಪಾಲು ಬೇಕೆಂದು ತೆಲಂಗಾಣ ಸರ್ಕಾರ ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ಬ್ರಿಜೇಶ್ ಕುಮಾರ್ ನೇತೃತ್ವದ ನ್ಯಾಯಾಧಿಕರಣ ಬುಧವಾರಕ್ಕೆ ತೀರ್ಪು ಕಾಯ್ದಿರಿಸಿತ್ತು.

Krishna Water Disputes Tribunal-verdict Relief for Karnataka

2010ರಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ಅಂತಿಮ ತೀರ್ಪು ಬಂದ ಬಳಿಕ ಆಂಧ್ರಪ್ರದೇಶ ಇನ್ನಷ್ಟು ನೀರು ಬೇಕು ಎಂದು ನ್ಯಾಯಾಧಿಕರಣದಲ್ಲಿ ಮರು ಅರ್ಜಿ ಹಾಕಿತ್ತು.

2013ರಲ್ಲಿ ನ್ಯಾಯಾಧೀಕರಣ ನೀಡಿದ ತೀರ್ಪಿನಂತೆ ಮಹಾರಾಷ್ಟಕ್ಕೆ 666 ಟಿಎಂಸಿ, ಕರ್ನಾಟಕಕ್ಕೆ 907 ಟಿಎಂಸಿ ಹಾಗೂ ಆಂಧ್ರಪ್ರದೇಶಕ್ಕೆ 1005 ಟಿಎಂಸಿ ನೀರು ಹಂಚಿಕೆಯಾಗಬೇಕೆಂದು ಆದೇಶಿಸಲಾಗಿತ್ತು.ಕರ್ನಾಟಕದ ಪಾಲಿನಲ್ಲಿ 4 ಟಿಎಂಸಿ ನೀರನ್ನು ಆಂಧ್ರಪ್ರದೇಶಕ್ಕೆ ಬಿಡುವಂತೆ ಆದೇಶ ನೀಡಿತ್ತು.

ಈಗ ಆಂಧ್ರಪ್ರದೇಶಕ್ಕೆ ಈಗ ಹಂಚಿಕೆಯಾಗಿರುವ ನೀರಿನ ಪ್ರಮಾಣದಲ್ಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ಹಂಚಿಕೊಳ್ಳಬೇಕು ಎಂದು ನ್ಯಾಯಾಧಿಕರಣ ತೀರ್ಪಿನಲ್ಲಿ ಹೇಳಿದೆ.

English summary
Relief for Karnataka as Krishna Tribunal headed by justice Brijesh kumar today(October 19)said Krishna river water allocated for united AP will be shared by Telangana & AP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X