Manipur: ಭದ್ರತಾ ಪಡೆಗಳ ಜೊತೆ ಕುಕಿ ಪ್ರತಿಭಟನಾಕಾರರ ಘರ್ಷಣೆ
ಹೊಸ ವರ್ಷ ಆರಂಭವಾದ ಕೆಲವೇ ದಿನಗಳಲ್ಲಿ ಮಣಿಪುರದಲ್ಲಿ ಮತ್ತೆ ಸಂಘರ್ಷ ಶುರುವಾಗಿದೆ. ಶುಕ್ರವಾರ ಇಲ್ಲಿನ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಕುಕಿ ಬುಡಕಟ್ಟು ಜನಾಂಗದ ಪ್ರತಿಭಟನಾಕಾರರು ಕೇಂದ್ರ ಭದ್ರತಾ ಪಡೆಗಳ ಜೊತೆ ಘರ್ಷಣೆ ನಡೆಸಿದ್ದಾರೆ. ಪ್ರತಿಭಟನಾಕಾರರು ಬೆಟ್ಟಗಳ ಮೇಲೆ ನಿರ್ಮಿಸಿರುವ ಬಂಕರ್ ಗಳನ್ನು ಕಿತ್ತುಹಾಕಲು ಪ್ರಯತ್ನಿಸಿದ್ದಾರೆ.
ರಾಜಧಾನಿ ಇಂಫಾಲ್‌ನಿಂದ 45 ಕಿಲೋ ಮೀಟರ್ ದೂರದಲ್ಲಿರುವ ಕಾಂಗ್‌ಪೋಕ್ಪಿಯಲ್ಲಿರುವ ಬೆಟ್ಟದ ಪ್ರದೇಶಗಳಲ್ಲಿ ನಿಯೋಜಿಸಿರುವ ಕೇಂದ್ರೀಯ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಿ ಆರ್ಥಿಕ ದಿಗ್ಭಂಧನ ವಿಧಿಸಿದ್ದು, ಸಾರಿಗೆ ಸಂಪರ್ಕವನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ.

ಭದ್ರತಾ ಪಡೆಗಳು ಪ್ರತಿಭಟನಾಕಾರರಿಗೆ ಹಿಂದೆ ಸರಿಯುವಂತೆ ಸೂಚನೆ ಕೊಟ್ಟಿದ್ದಾರೆ. ಆದರೆ ಪ್ರತಿಭಟನಾಕಾರರು ಕಾಂಗ್‌ಪೊಕ್ಪಿ ಜಿಲ್ಲಾಧಿಕಾರಿ ಕಚೇರಿಯತ್ತ ಹೋಗಿದ್ದು ಕಟ್ಟಡದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ಆಶ್ರುವಾಯು ಪ್ರಯೋಗಿಸಿದ್ದಾರೆ. ಈ ಸಂದರ್ಭದಲ್ಲಿ ಉಂಟಾದ ಗಲಭೆಯಲ್ಲಿ ಹಲವು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಕಾಂಗ್‌ಪೊಕ್ಪಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಮನೋಜ್ ಪ್ರಭಾಕರ್ ಸೇರಿದಂತೆ ಕೆಲವು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಶಸ್ತ್ರಾಸ್ತ್ರ ಹೊಂದಿರುವ ಪ್ರತಿಭಟನಾಕಾರರು
ಹಲವು ಪ್ರತಿಭಟನಾಕಾರರ ಬಳಿಕ ಆಧುನಿಕ ಶಸ್ತ್ರಾಸ್ತ್ರಗಳು ಇದ್ದವು ಎಂದು ವರದಿಯಾಗಿದೆ. ಪ್ರತಿಭಟನಾಕಾರರ ಜೊತೆಗೆ ಹಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಹೆದ್ದಾರಿಯಲ್ಲಿ ನಿಂತಿರುವುದು ಕಂಡು ಬಂದಿದೆ ಎಂದು ಮೂಲಗಳು ತಿಳಿಸಿವೆ. ಮೇ 3. 2023ರಲ್ಲಿ ರಾಜ್ಯದಲ್ಲಿ ಜನಾಂಗೀಯ ಸಂಘರ್ಷ ಶುರುವಾಗಿದ್ದು ಕುಕಿ ಪ್ರಾಬಲ್ಯ ಹೊಂದಿರುವ ಚುರಚಂದ್‌ಪುರ ಜಿಲ್ಲೆಯಲ್ಲಿ ಘರ್ಷಣೆ ವೇಳೆಯಲ್ಲಿ ಹಲವು ನಾಗರಿಕರು ಎಕೆ ಸರಣಿಯ ರೈಫಲ್‌ಗಳನ್ನು ಹೊತ್ತೊಯ್ದಿದ್ದಾರೆ.
ಶುಕ್ರವಾರ ಮುಂಜಾನೆ, ಕುಕಿ ಬುಡಕಟ್ಟು ಜನಾಂಗದವರು ನೆಲೆಸಿರುವ ಮಣಿಪುರದ ಎಲ್ಲಾ ಪ್ರದೇಶಗಳಲ್ಲಿ ಕುಕಿ ಸಂರ್ಘಟನೆ ಆರ್ಥಿಕ ದಿಗ್ಬಂಧನ ವಿಧಿಸಿದೆ. ಪ್ರಮುಖ ರಸ್ತೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ವಾಹನಗಳ ಸಾರಿಗೆಯನ್ನು ನಿಲ್ಲಿಸಲು ಪ್ರಯತ್ನಿಸಲಾಗಿತ್ತು, ಶನಿವಾರದವರೆಗೂ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ತಿಳಿಸಿದೆ.
ಮಾಜಿ ಐಎಎಸ್ ಅಧಿಕಾರಿ ಅಜಯ್ ಕುಮಾರ್ ಭಲ್ಲಾ ಮಣಿಪುರದ ನೂತನ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡ ದಿನದಂದೇ ಕುಕಿ ಸಮುದಾದ ಹೋರಾಟಕ್ಕೆ ಕರೆನೀಡಿದೆ. ಕಾಂಗ್‌ಪೊಕ್ಪಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಮನೋಜ್ ಪ್ರಭಾಕರ್ ಹಣೆಗೆ ಗಾಯವಾಗಿದೆ ಎಂದು ತಿಳಿಸಲಾಗಿದೆ.
ಹೊಸ ವರ್ಷದ ಆರಂಭಕ್ಕೆ ಮುನ್ನ ಮುಖ್ಯಮಂತ್ರಿ ಎನ್ ಬೀರೇನ್ ಸಿಂಗ್ ರಾಜ್ಯದಲ್ಲಿ ಉಂಟಾದ ಸಂಘರ್ಷದ ಬಗ್ಗೆ ಜನರಲ್ಲಿ ಕ್ಷಮೆ ಕೇಳಿದ್ದರು. ರಾಜ್ಯದಲ್ಲಿ ಹಿಂಸಾಚಾರ ಕಡಿಮೆಯಾಗುತ್ತಿದ್ದು 2025ರಲ್ಲಿ ಶಾಂತಿ ನೆಲೆಸಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದರು. ಆದರೆ ವರ್ಷದ ಆರಂಭದಲ್ಲೇ ರಾಜ್ಯದಲ್ಲಿ ಮತ್ತೆ ಪ್ರತಿಭಟನೆ ಆರಂಭವಾಗಿದೆ.
-
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ












Click it and Unblock the Notifications