Get Updates
Get notified of breaking news, exclusive insights, and must-see stories!

ಕುಂಭಮೇಳದಲ್ಲಿ ಹೆಚ್ಚುತ್ತಿರುವ ಕೊರೊನಾ; ಪ್ರಧಾನಿ ಮೋದಿ ಮನವಿ

ಹರಿದ್ವಾರ, ಏಪ್ರಿಲ್ 17: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ್ದ ಹಲವು ಸಾಧುಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಕುಂಭಮೇಳ ಈಗ ಸಾಂಕೇತಿಕವಾಗಿರಬೇಕಿದೆ. ಇದು ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಸ್ವಾಮಿ ಅವದೇಶಾನಂದ ಗಿರಿ ಅವರೊಂದಿಗೆ ಮಾತನಾಡಿದ ನಂತರ ಮೋದಿ ಟ್ವೀಟ್ ಮಾಡಿದ್ದಾರೆ. ಶುಕ್ರವಾರ ಕುಂಭಮೇಳದಲ್ಲಿ ಭಾಗವಹಿಸಿದ್ದ 30 ಸಾಧುಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಇಬ್ಬರು ಮಹಾಮಂಡಲೇಶ್ವರ (ಮುಖ್ಯ ಸಾಧುಗಳು) ಸೋಂಕಿನಿಂದಾಗಿ ಮೃತಪಟ್ಟಿದ್ದರು.

ಕುಂಭಮೇಳದಲ್ಲಿ ಕೊರೊನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮೋದಿ, "ಫೋನ್ ನಲ್ಲಿ ಸ್ವಾಮಿ ಅವದೇಶಾನಂದ ಗಿರಿ ಜೀ ಅವರೊಂದಿಗೆ ಮಾತನಾಡಿದೆ. ಎಲ್ಲಾ ಸಾಧುಗಳ ಆರೋಗ್ಯದ ಕುರಿತು ವಿಚಾರಿಸಿದ್ದೇನೆ. ಸಾಧುಗಳ ಆರೋಗ್ಯ ಸುಧಾರಣೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ" ಎಂದು ಹೇಳಿದ್ದಾರೆ. ಸದ್ಯಕ್ಕೆ ಕುಂಭಮೇಳದಲ್ಲಿ ಎರಡು ಪವಿತ್ರ ಸ್ನಾನಗಳು ಸಂಪನ್ನವಾಗಿವೆ. ಇದೀಗ ದೇಶದಲ್ಲಿ ಕೊರೊನಾ ಸೋಂಕು ಮಿತಿ ಮೀರುತ್ತಿರುವುದರಿಂದ ಹಾಗೂ ಕುಂಭಮೇಳದಲ್ಲಿಯೂ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಕಾರಣ ಕುಂಭಮೇಳವನ್ನು ಸಾಂಕೇತಿಕವಾಗಿ ನಡೆಸಬೇಕೆಂದು ಎಲ್ಲರಲ್ಲಿಯೂ ಮನವಿ ಮಾಡುತ್ತಿದ್ದೇನೆ. ಇದು ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಬಲ ನೀಡಲಿದೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

Kumbh Mela Should Now Be Symbolic Says PM Modi

ಪ್ರಧಾನಿ ನರೇಂದ್ರ ಮೋದಿಯವರು ಫೋನ್ ಕರೆ ಮಾಡಿದ ನಂತರ ಕುಂಭಮೇಳಕ್ಕೆ ಬರದಂತೆ ಅವದೇಶಾನಂದ ಸ್ವಾಮೀಜಿ ಕೂಡ ಮನವಿ ಮಾಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪವಿತ್ರ ಸ್ನಾನದಲ್ಲಿ ಭಾಗವಹಿಸದಂತೆ ಕೇಳಿಕೊಂಡಿದ್ದಾರೆ.

ಕುಂಭಮೇಳ ಆರಂಭವಾದ ನಂತರ ವಾರದಲ್ಲಿ ಹರಿದ್ವಾರದಲ್ಲಿ ಸುಮಾರು 2000 ಕೊರೊನಾ ಪ್ರಕರಣಗಳು ದಾಖಲಾಗಿವೆ. ಪವಿತ್ರ ಸ್ನಾನದಲ್ಲಿ ಪಾಲ್ಗೊಂಡಿದ್ದ ಲಕ್ಷಾಂತರ ಭಕ್ತಾದಿಗಳು ಕೊರೊನಾ ನಿಯಮಾವಳಿಗಳನ್ನು ಪಾಲಿಸದಿರುವುದೂ ಕಂಡುಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+