Cheetah 3 Cubs: ಕುನೋ ರಾಷ್ಟ್ರೀಯ ಉದ್ಯಾನದಲ್ಲಿ 3 ಮರಿಗೆ ಜನ್ಮಕೊಟ್ಟ ಚೀತಾ 'ಜ್ವಾಲಾ': ಫೋಟೋ
ಬೆಂಗಳೂರು, ಜನವರಿ 23: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ ಚಿರತೆಯೊಂದು ಮೂರು ಮರಿಗೆ ಜನ್ಮ ನೀಡಿದೆ. ಇತ್ತೀಚೆಗೆ 'ಆಶಾ' ಎಂಬ ಚೀತಾ ಮೂರು ಮರಿಗೆ ಜನ್ಮ ನೀಡಿತ್ತು. ಅದರ ಬೆನ್ನಲ್ಲೆ ಇದೀಗ 'ಜ್ವಾಲಾ' ಚೀತಾ ಸಹ ಮೂರು ಮರಿಗೆ ಜನ್ಮ ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಮಧ್ಯಪ್ರದೇಶದ ರಾಜ್ಯದ ಪರಿಸರ ಸಚಿವ ಭೂಪೇಂದ್ರ ಯಾದವ್ ಅಧಿಕೃತ ಮಾಹಿತಿ ನೀಡಿದ್ದಾರೆ. ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಚಿರತೆ 'ಆಶಾ' ತನ್ನ ಮರಿಗಳಿಗೆ ಜನ್ಮ ನೀಡಿದ ಕೆಲವೇ ವಾರಗಳಲ್ಲಿ 'ಜ್ವಾಲಾ' ಸಹ ಮೂರು ಮರಿಗಳಿಗೆ ಜನ್ಮ ನೀಡಿದೆ ಎಂದು ತಿಳಿಸಿದರು.

ದೇಶದ ಎಲ್ಲಾ ವನ್ಯಜೀವಿ ಮುಂಚೂಣಿ ಯೋಧರು ಮತ್ತು ವನ್ಯಜೀವಿ ಪ್ರೇಮಿಗಳಿಗೆ ಅಭಿನಂದನೆಗಳು. ಭಾರತದ ವನ್ಯಜೀವಿಗಳು ಅಭಿವೃದ್ಧಿ ಹೊಂದಲಿ ಎಂದು ಭೂಪೇಂದರ್ ಯಾದವ್ ಸಾಮಾಜಿಕ ಮಾಧ್ಯಮದಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಜತೆಗೆ ಮರಿಗಳ ವಿಡಿಯೋ ಸಹ ಶೇರ್ ಮಾಡಿದ್ದಾರೆ.
ನಾಲ್ಕು ಮರಿಗಳಲ್ಲಿ ಒಂದು ಬದುಕುಳಿದಿತ್ತು
ಮಾರ್ಚ್ 2023ರಲ್ಲಿ 'ಜ್ವಾಲಾ' ಅವರ ಹಿಂದಿನ ಹೆಸರು 'ಸಿಯಾಯಾ', ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು, ಆದರೆ ಅವುಗಳಲ್ಲಿ ಒಂದು (ಒಂದು ಹೆಣ್ಣು) ಮಾತ್ರ ಬದುಕುಳಿದರು. 1952ರಲ್ಲಿ ಭಾರತದಲ್ಲಿ ಅತೀ ವೇಗದ ಭೂ ಪ್ರಾಣಿಯಾದ ಚೀತಾವು ಅಳಿವಿನಂಚಿನಲ್ಲಿದೆ ಎಂದು ಘೋಷಿಸಲಾಯಿತು.

ಭಾರತದಲ್ಲಿ ಈ ಅಪರೂಪದ ಚೀತಾ ಸಂಖ್ಯೆ ಹೆಚ್ಚಿಸಲು, ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಎಂಟು ಚೀತಾಗಳನ್ನು ದಕ್ಷಿಣ ಆಫ್ರಿಕಾದಿಂದ ಈ ಉದ್ಯಾನಕ್ಕೆ ಸ್ಥಳಾಂತರಿಸಲಾಯಿತು.
Kuno’s new cubs!
— Bhupender Yadav (@byadavbjp) January 23, 2024
Namibian Cheetah named Jwala has given birth to three cubs. This comes just weeks after Namibian Cheetah Aasha gave birth to her cubs.
Congratulations to all wildlife frontline warriors and wildlife lovers across the country.
May Bharat’s wildlife thrive… pic.twitter.com/aasusRiXtG
2022ರಲ್ಲಿ ಭಾರತಕ್ಕೆ 8 ಚೀತಾ ಸ್ಥಳಾಂತರ
2022ರ ಸೆಪ್ಟೆಂಬರ್ 17 ರಂದು ನಮೀಬಿಯಾದಿಂದ ಐದು ಹೆಣ್ಣು ಮತ್ತು ಮೂರು ಗಂಡು ಚೀತಾಗಳನ್ನು ಕರೆತರಲಾಯಿತು. 2023ರ ಫೆಬ್ರುವರಿಯಲ್ಲಿ ಮತ್ತೆ ದಕ್ಷಿಣ ಆಫ್ರಿಕಾದಿಂದ ಇನ್ನೂ 12 ಚಿರತೆಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಯಿತು. ಕಳೆದ ವರ್ಷ ಡಿಸೆಂಬರ್‌ನಲ್ಲಿ, ನಾಲ್ಕು ಚಿರತೆಗಳನ್ನು ಕಾಡಿಗೆ ಬಿಡಲಾಗಿದೆ.
ಇದರೊಂದಿಗೆ ಕಳೆದ ವರ್ಷ ಮೇ ತಿಂಗಳಲ್ಲಿ, ಚಿರತೆಗಳ ಸಾವಿನ ಕುರಿತು ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕಾರಣಗಳು ಮತ್ತು ತೆಗೆದುಕೊಂಡ ಪರಿಹಾರ ಕ್ರಮಗಳನ್ನು ವಿವರಿಸುವ ವಿವರವಾದ ಅಫಿಡವಿಟ್ ಅನ್ನು ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು.
ಇದರ ಉತ್ತರವಾಗಿ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ಉದ್ಯಾನದಲ್ಲಿ ವಯಸ್ಕ ಚಿರತೆಗಳು ಮತ್ತು ಮರಿಗಳ ಸಾವು ಆತಂಕಕಾರಿಯಾಗಿದೆ. ಅದಕ್ಕೆ ಕಾರಣ, ಅನಾರೋಗ್ಯ, ಜೀವಂತೆ ಚೀತಾಗಳ ಮಾಹಿತಿಯನ್ನು ಸರ್ಕಾರ ಸಲ್ಲಿಸಿತ್ತು. ಇದೆಲ್ಲ ಬೆಳವಣಿಗೆ ಬಳಿಕ ಇದೀಗ ಉದ್ಯಾನದಲ್ಲಿ ಚೀತಾಗಳ ಸಂಖ್ಯೆ ಏರಿಕೆ ಆಗತೊಡಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications