ಖಾಸಗಿ ಮನೆಯಲ್ಲಿ ಭದ್ರತೆ ಲೋಪ: ಕೇಂದ್ರದ ವಿರುದ್ಧ ಹೈಕೋರ್ಟ್ ಮೊರೆ ಹೋದ ಸುಬ್ರಮಣಿಯನ್ ಸ್ವಾಮಿ
ದೆಹಲಿ ಅಕ್ಟೋಬರ್ 27: ಖಾಸಗಿ ವಸತಿ ನಿಲಯದಲ್ಲಿ ಭದ್ರತೆ ನೀಡುವ ವಿಚಾರದಲ್ಲಿ ಕೇಂದ್ರ ವಿಫಲವಾಗಿದೆ ಎಂದು ರಾಜ್ಯಸಭಾ ಮಾಜಿ ಸಂಸದ ಡಾ. ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸುಬ್ರಮಣಿಯನ್ ಸ್ವಾಮಿ ಅವರು ತಮ್ಮ ಸರ್ಕಾರಿ ವಸತಿಗಳನ್ನು ಅಧಿಕಾರಿಗಳಿಗೆ ಹಸ್ತಾಂತರಿಸುವಂತೆ ದೆಹಲಿ ಹೈಕೋರ್ಟ್ ಆದೇಶದ ನಂತರ ರಾಷ್ಟ್ರ ರಾಜಧಾನಿಯಲ್ಲಿನ ತಮ್ಮ ಖಾಸಗಿ ವಸತಿಗೃಹದಲ್ಲಿ ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ನೀಡಲು ಕೇಂದ್ರವು ವಿಫಲವಾಗಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಸುಬ್ರಮಣಿಯನ್ ಸ್ವಾಮಿ ಅವರು ಸಂಸದರಾಗಿದ್ದ ಅವಧಿಯಲ್ಲಿ 2016ರ ಜನವರಿಯಲ್ಲಿ ಐದು ವರ್ಷಗಳ ಕಾಲ ದೆಹಲಿಯಲ್ಲಿ ಅವರಿಗೆ ಬಂಗಲೆ ಮಂಜೂರು ಮಾಡಲಾಗಿತ್ತು. ಇದೇ ಏಪ್ರಿಲ್‌ನಲ್ಲಿ ಅವರ ರಾಜ್ಯಸಭಾ ಅಧಿಕಾರಾವಧಿ ಮುಗಿದಿದೆ. ಈ ಹಿನ್ನೆಲೆಯಲ್ಲಿ ಅವರು ಬಂಗಲೆಯನ್ನು ತೆರವು ಮಾಡಬೇಕಿತ್ತು. ಆದರೆ ಅವರು ಅವಧಿ ಮುಗಿದರೂ ಬಂದಲೆಯಲ್ಲಿ ವಾಸಿಸುತ್ತಿದ್ದರು. ಇದೀಗ ತಮಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಇದೇ ಬಂಗಲೆಯಲ್ಲಿ ಮುಂದುವರೆಯಲು ಅನುಮತಿ ನೀಡಿ ಎಂದು ಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದರು.

ಆದರೆ ಈ ವಾದದವನ್ನು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಮಾನ್ಯ ಮಾಡಲಿಲ್ಲ. ಸ್ವಾಮಿ ಅವರ ಖಾಸಗಿ ನಿವಾಸದಲ್ಲಿ ಎಲ್ಲಾ ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಮಾಡುವುದಾಗಿ ನ್ಯಾಯಾಲಯದ ಮುಂದೆ ಕೇಂದ್ರವು ಭರವಸೆ ನೀಡಿದ ನಂತರ ಅಕ್ಟೋಬರ್ 26 ರೊಳಗೆ ಸರ್ಕಾರಿ ವಸತಿಗೃಹವನ್ನು ತೊರೆಯಲು ಸ್ವಾಮಿ ಅವರು ಒಪ್ಪಿಕೊಂಡರು. ಆದರೆ ಖಾಸಗಿ ವಸತಿ ನಿಲಯಗಳಲ್ಲಿ ಭದ್ರತಾ ವ್ಯವಸ್ಥೆ ಮಾಡಲು ಕೇಂದ್ರದ ವಿಫಲವಾಗಿದೆ ಎಂದು ದೂರಿ ಸುಬ್ರಮಣಿಯನ್ ಸ್ವಾಮಿ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠದ ಮುಂದೆ ಅರ್ಜಿಯನ್ನು ಉಲ್ಲೇಖಿಸಲಾಗಿದೆ.












Click it and Unblock the Notifications