ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಲಖಿಂಪುರ ಖೇರಿ ಪ್ರಕರಣದ ಆರೋಪಿ ಆಶಿಶ್ ಮಿಶ್ರಾ ಜಾಮೀನು

ಲಖಿಂಪುರ ಖೇರಿ ಹಿಂಸಾಚಾರದ ಆರೋಪಿ ಆಶಿಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

|
Google Oneindia Kannada News

ನವದೆಹಲಿ, ಜನವರಿ 25: ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ, ಲಖಿಂಪುರ ಖೇರಿ ಹಿಂಸಾಚಾರದ ಆರೋಪಿ ಆಶಿಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಅಶೀಶ್‌ ಮಿಶ್ರಾ ಅವರು ಅಕ್ಟೋಬರ್ 3, 2021ರಂದು ಲಖಿಂಪುರ ಖೇರಿಯಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರನ್ನು ಕೊಂದ ಘಟನೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣವನ್ನು ಎದುರಿಸುತ್ತಿದ್ದಾರೆ.

ಅಶಿಶ್‌ ಮಿಶ್ರಾ ಅವರು ದೆಹಲಿ ಮತ್ತು ಉತ್ತರ ಪ್ರದೇಶದ ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್‌ಸಿಟಿ) ಯಲ್ಲಿ ಉಳಿಯಬಾರದು ಮತ್ತು ಜಾಮೀನಿನ ಮೇಲೆ ಬಿಡುಗಡೆಯಾದ ಒಂದು ವಾರದ ನಂತರ ಉತ್ತರ ಪ್ರದೇಶವನ್ನು ತೊರೆಯುವ ಷರತ್ತಿನ ಮೇಲೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

Lakhimpur Kheri case: Accused Ashish Mishra granted interim bail

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶ ಸರ್ಕಾರ ಕಳೆದ ವಾರ ವಿರೋಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ತಮಗೆ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನು ಆಗಿರುವ ಅಶೀಶ್‌ ಮಿಶ್ರಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಮಿಶ್ರಾ ಅವರು ಕಾರು ಹರಿಸಿದ್ದರು ಎಂಬ ವಿಡಿಯೋ ಸಿಕ್ಕಿದೆ ಆರೋಪಿಸಲಾಗಿದೆ. ಅವರನ್ನು ಅಕ್ಟೋಬರ್ 9ರಂದು ಬಂಧಿಸಲಾಯಿತು ಮತ್ತು ಫೆಬ್ರವರಿ 2022 ರಲ್ಲಿ ಜಾಮೀನು ನೀಡಲಾಯಿತು. 2022ರ ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್‌ನಿಂದ ನ್ಯಾಯಾಲಯದ ಹಿಂದಿನ ಆದೇಶವನ್ನು ರದ್ದುಗೊಳಿಸಿದ್ದರಿಂದ ಮಿಶ್ರಾ ಮತ್ತೆ ಹೈಕೋರ್ಟ್‌ಗೆ ತೆರಳಿದರು. ಅವರ ಜಾಮೀನು ಅರ್ಜಿಯನ್ನು ಹೊಸದಾಗಿ ಪರಿಗಣಿಸುವಂತೆ ಆದೇಶಿಸಿದ್ದರು.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಬುಧ-ವಾರಕ್ಕೆ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಈಗ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆಕೆ ಮಹೇಶ್ವರಿ ಅವರ ಪೀಠವು ಈ ಆದೇಶವನ್ನು ಪ್ರಕಟಿಸಿದೆ. ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶ ಸರ್ಕಾರ ಕಳೆದ ವಾರ ವಿರೋಧಿಸಿತ್ತು.

ಕಳೆದ ವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ, ಮಿಶ್ರಾ ವಿರುದ್ಧದ ಆಪಾದಿತ ಅಪರಾಧಗಳು ಗಂಭೀರ ಸ್ವರೂಪದ್ದಾಗಿದ್ದು, ಅಂತಹ ವಿಷಯಗಳಲ್ಲಿ ಜಾಮೀನು ನೀಡುವುದರಿಂದ ಸಮಾಜದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಉತ್ತರ ಪ್ರದೇಶ ಸರ್ಕಾರ ಪೀಠಕ್ಕೆ ತಿಳಿಸಿತು.

English summary
Lakhimpur Kheri case: Accused Ashish Mishra granted interim bail,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X