ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಖಿಂಪುರ ಖೇರಿ ಪ್ರಕರಣ: ದೇಶಾದ್ಯಂತ ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ

|
Google Oneindia Kannada News

ಲಕ್ನೋ, ಅಕ್ಟೋಬರ್‌ 11: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾರ ಪುತ್ರ ಆಶೀಶ್‌ ಮಿಶ್ರಾ ಕೈವಾಡವಿದೆ ಎಂಬ ಆರೋಪ ಇರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಸೋಮವಾರ ದೇಶಾದಾದ್ಯಂತ ಮೌನ ಪ್ರತಿಭಟನೆ ನಡೆಸಿದೆ.

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಹಿಂಸಾಚಾರ ನಡೆದು ನಾಲ್ವರು ರೈತರು ಸೇರಿ ಎಂಟು ಮಂದಿ ಸಾವನ್ನಪ್ಪಿದ ಬಳಿಕ ಲಖಿಂಪುರ ಖೇರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಸಚಿವ ಅಜಯ್‌ ಕುಮಾರ್‌ ಮಿಶ್ರಾರ ಅಮಾನತಿಗೆ ಒತ್ತಾಯಿಸಿ ಲಕ್ನೋದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ.

ಲಖಿಂಪುರ ಗಲಭೆ, ಕೇಂದ್ರ ಸಚಿವರ ಪುತ್ರ ಪೊಲೀಸ್ ವಶಕ್ಕೆಲಖಿಂಪುರ ಗಲಭೆ, ಕೇಂದ್ರ ಸಚಿವರ ಪುತ್ರ ಪೊಲೀಸ್ ವಶಕ್ಕೆ

ರೈತ ಸಂಘ ಸಂಯುಕ್ತ ಕಿಸಾನ್‌ ಮೋರ್ಚಾವು ಈ ಹಿಂಸಾಚಾರದಿಂದ ಸಾವನ್ನಪ್ಪಿದ ರೈತರಿಗಾಗಿ ಮಂಗಳವಾರ ಅಂತಿಮ ಪ್ರಾರ್ಥನೆ ಸಲ್ಲಿಸಲು ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ರಾಜ್ಯದ ಜನರು ಅಂತಿಮ ಪ್ರಾರ್ಥನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಹಾಗೆಯೇ ಈಗಾಗಲೇ ಅಕ್ಟೋಬರ್‌ 18 ರಂದು ಸಂಯುಕ್ತ ಕಿಸಾನ್‌ ಮೋರ್ಚಾ ರಾಷ್ಟ್ರವ್ಯಾಪಿ ರೈಲು ತಡೆಯನ್ನು ಮಾಡುವುದಾಗಿ ಘೋಷಣೆ ಮಾಡಿದೆ. ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್‌ ಅಕ್ಟೋಬರ್ 18ರಂದು ರಾಷ್ಟ್ರವ್ಯಾಪಿ ರೈಲು ತಡೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Lakhimpur Kheri Case: Congress holds silent protests across country

ರೈತರ ಮೇಲೆ ಕಾರು ಹರಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಸರಾ ಹಬ್ಬದ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸ್ಥಳೀಯ ನಾಯಕರ ಪ್ರತಿಕೃತಿಯನ್ನು ಸುಟ್ಟು ಹಾಕಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಎಚ್ಚರಿಸಿದೆ. ಕೇಂದ್ರ ಸರ್ಕಾರಕ್ಕೆ ಚುರುಕು ಮುಟ್ಟಿಸುವ ಉದ್ದೇಶದಿಂದ ಅಕ್ಟೋಬರ್ 18ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೂ ರಾಷ್ಟ್ರವ್ಯಾಪಿ ರೈಲುತಡೆ ನಡೆಸಲಾಗುವುದು. ಅಕ್ಟೋಬರ್ 26ರಂದು ಲಕ್ನೋದಲ್ಲಿ ರೈತರ ಮಹಾಪಂಚಾಯತ್ ನಡೆಸಲಾಗುವುದು ಎಂದು ರೈತ ಸಂಘಟನೆಗಳ ಮುಖಂಡರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಕೇಂದ್ರ ಸಂಪುಟದಿಂದ ಅಜಯ್ ಮಿಶ್ರಾರನ್ನು ತಕ್ಷಣವೇ ವಜಾಗೊಳಿಸಬೇಕು, ಕೊಲೆ ಪಿತೂರಿ ಹಾಗೂ ಅಸಮಾನತೆ ಅಡಿಯಲ್ಲಿ ಅವರನ್ನು ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ಬಲ್ಬೀರ್ ಸಿಂಗ್ ರಾಜೇವಾ, ಯೋಗೇಂದ್ರ ಯಾದವ್ ಮತ್ತು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಆಗ್ರಹಿಸಿದ್ದಾರೆ. ಅಲ್ಲದೇ ಆಶಿಶ್ ಮಿಶ್ರಾ ಹಾಗೂ ಆತನ ಸಹಚರರಾದ ಸುಮಿತ್ ಜೈಸ್ವಾಲ್ ಮತ್ತು ಅಂಕಿತ್ ದಾಸ್ ಅನ್ನು ತಕ್ಷಣವೇ ಕೊಲೆ ಆರೋಪದಲ್ಲಿ ಬಂಧಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ. ರೈತರ ದೂರಿನ ಆಧಾರದಲ್ಲಿ ತಲೆಮರೆಸಿಕೊಂಡಿದ್ದ ಅಜಯ್‌ ಮಿಶ್ರಾರ ಪುತ್ರ ಆಶಿಶ್‌ ಮಿಶ್ರಾರನ್ನು ಬಂಧನ ಮಾಡಲಾಗಿದೆ.

ಪೊಲೀಸರ ಮುಂದೆ ಹಾಜರಾಗುವಂತೆ ಅಶಿಶ್ ಮಿಶ್ರಾಗೆ ಉತ್ತರ ಪ್ರದೇಶದ ಪೊಲೀಸರು ನೋಟಿಸ್ ನೀಡಿದ್ದರು. ವಿಚಾರಣೆಗೆ ಸಹಕಾರ ನೀಡಿದ, ಸರಿಯಾಗಿ ಸ್ಪಂದಿಸದ ಆರೋಪದಡಿಯಲ್ಲಿ ಅಶಿಶ್ ಮಿಶ್ರಾ ಬಂಧಿಸಲಾಗಿದೆ ಎಂದು ಡಿಜಿಪಿ ಉಪೇಂದ್ರ ಅಗರ್‌ವಾಲ್ ಹೇಳಿದ್ದರು. ಆ ಬಳಿಕ ನ್ಯಾಯಾಲಯವು ಆಶಿಶ್‌ ಮಿಶ್ರಾಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿತ್ತು. ಆದರೆ ಈಗ ಪೊಲೀಸರು ಮೂರು ದಿನಗಳ ಕಾಲ ಆಶಿಶ್‌ ಮಿಶ್ರಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ ನಡೆದಾಗ ಎಲ್ಲಿದ್ದರು? ಎಂಬ ಪ್ರಶ್ನೆಗೆ ಆಶಿಶ್ ಮಿಶ್ರಾ ಉತ್ತರವನ್ನು ನೀಡಿಲ್ಲ ಎಂದು ಹೇಳಲಾಗಿದೆ. ಆದರೆ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ತಮ್ಮ ಬೆಂಗಾವಲು ವಾಹನಲ್ಲಿ ಪುತ್ರ ಇರಲಿಲ್ಲ ಎಂದು ಮಾತ್ರ ಹಲವಾರು ಬಾರಿ ಹೇಳಿದ್ದಾರೆ. ಅಶಿಶ್ ಮಿಶ್ರಾ ಮೊಬೈಲ್ ಲೋಕೇಶನ್ ಹಿಂಸಾಚಾರ ನಡೆದ ಪ್ರದೇಶ ಸಮೀಪದಲ್ಲಿಯೇ ಪತ್ತೆಯಾಗಿತ್ತು. ಅಷ್ಟೇ ಅಲ್ಲದೇ ಆ ಬಳಿಕ ಆಶಿಶ್‌ ಮಿಶ್ರಾ ತಲೆಮರೆಸಿಕೊಂಡಿದ್ದರು.

(ಒನ್‌ಇಂಡಿಯಾ ಸುದ್ದಿ)

English summary
Lakhimpur Kheri Case: Congress leaders, including Priyanka Gandhi holds silent protests across country demanding the dismissal of the Union minister Ajay Mishra. Read on.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X