ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್.18ರಂದು ಲಖೀಂಪುರ್ ಖೇರಿ ಹಿಂಸಾಚಾರ ಖಂಡಿಸಿ ರಾಷ್ಟ್ರವ್ಯಾಪಿ ರೈಲುತಡೆ

|
Google Oneindia Kannada News

ಲಕ್ನೋ, ಅಕ್ಟೋಬರ್ 18: ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಸೋಮವಾರ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರವ್ಯಾಪಿ ರೈಲುತಡೆಗೆ ಕರೆ ಕೊಟ್ಟಿದೆ.

ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಲಖೀಂಪುರ್ ಖೇರಿ ಹಿಂಸಾಚಾರದಲ್ಲಿ ಮೃತ ರೈತರಿಗೆ ನ್ಯಾಯ ಸಿಗುವವರೆಗೂ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವವರೆಗೂ ಹೋರಾಟ ಮುಂದುವರಿಸುವುದಾಗಿ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಲಖೀಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾರನ್ನು ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಪೊಲೀಸರು ಅವರನ್ನು ಬಂಧಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ.

Lakhimpur Kheri Violence: Nationwide Rail Roko Protest on Oct 18 by SKM

ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ರೈಲುತಡೆ:

ಅಕ್ಟೋಬರ್ 18ರ ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಸುಮಾರು ಆರು ಗಂಟೆಗಳ ಕಾಲ ರೈಲು ಸಂಚಾರವನ್ನು ನಿಲ್ಲಿಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಘಟಕಗಳ ಕಾರ್ಯಕರ್ತರಿಗೆ ಕರೆ ನೀಡಿದೆ. ಈ ಸಂದರ್ಭದಲ್ಲಿ ರೈಲ್ವೆ ಆಸ್ತಿಗೆ ಯಾವುದೇ ರೀತಿಯ ವಿನಾಶ ಮತ್ತು ಹಾನಿಯಾಗದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ SKM ಸೂಚನೆ ನೀಡಿದೆ.

ಅಜಯ್ ಮಿಶ್ರಾ ವಜಾಗೊಳಿಸಲು ರೈತ ಮುಖಂಡರ ಆಗ್ರಹ:

ಕೇಂದ್ರ ಸಂಪುಟದಿಂದ ಅಜಯ್ ಮಿಶ್ರಾರನ್ನು ತಕ್ಷಣವೇ ವಜಾಗೊಳಿಸಬೇಕು, ಕೊಲೆ ಪಿತೂರಿ ಹಾಗೂ ಅಸಮಾನತೆ ಅಡಿಯಲ್ಲಿ ಅವರನ್ನು ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ಬಲ್ಬೀರ್ ಸಿಂಗ್ ರಾಜೇವಾ, ಯೋಗೇಂದ್ರ ಯಾದವ್ ಮತ್ತು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಆಗ್ರಹಿಸಿದ್ದಾರೆ. ಅಲ್ಲದೇ ಆಶಿಶ್ ಮಿಶ್ರಾ ಹಾಗೂ ಆತನ ಸಹಚರರಾದ ಸುಮಿತ್ ಜೈಸ್ವಾಲ್ ಮತ್ತು ಅಂಕಿತ್ ದಾಸ್ ಅನ್ನು ತಕ್ಷಣವೇ ಕೊಲೆ ಆರೋಪದಲ್ಲಿ ಬಂಧಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

ಅಕ್ಟೋಬರ್ 26ರಂದು ರೈತರ ಮಹಾಪಂಚಾಯತ್:

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 26ರಂದು ಲಕ್ನೋದಲ್ಲಿ ರೈತರ ಮಹಾಪಂಚಾಯತ್ ನಡೆಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ. ಈ ಕಿಸಾನ್ ಮಹಾಪಂಚಾಯತ್ ಸಭೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ ಸೇರಿದಂತೆ ವಿವಿಧ ರೈತ ಸಂಘಟನೆಗಳು ಸೇರಿದಂತೆ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಹುಪಾಲು ರೈತರು ಭಾಗಿಯಾಗುವಂತೆ ಕರೆ ನೀಡಲಾಗಿದೆ.

ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ಹಿನ್ನೆಲೆ:

ಕಳೆದ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಒಬ್ಬ ಪತ್ರಕರ್ತ ಸೇರಿದಂತೆ ಎಂಟು ಮಂದಿ ಪ್ರಾಣ ಬಿಟ್ಟಿದ್ದರು. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ವಿರುದ್ಧ ರೈತರ ಮೇಲೆ ಕಾರು ಹರಿಸಿದ ಆರೋಪ ಮಾಡಲಾಗಿದ್ದು, ಅಕ್ಟೋಬರ್ 9ರಂದು ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಘಟನೆ ನಡೆದ ಮರುದಿನವೇ ಆಶಿಶ್ ಮಿಶ್ರಾ ಸೇರಿದಂತೆ 14 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಇದುವರೆಗೆ 5 ಬಂಧನಗಳನ್ನು ಮಾಡಲಾಗಿದೆ. ಇದರಲ್ಲಿ ಲವಕುಶ, ಆಶಿಶ್ ಪಾಂಡೆ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಮತ್ತು ಚಾಲಕ ಶೇಖರ್ ಸೇರಿದ್ದಾರೆ. ವೈರಲ್ ವೀಡಿಯೊಗಳ ಆಧಾರದ ಮೇಲೆ ಪೊಲೀಸರು ಇದುವರೆಗೆ 20ಕ್ಕೂ ಹೆಚ್ಚು ಜನರನ್ನು ಗುರುತಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ:

"ಭಾರತದಲ್ಲಿ ದಸರಾ ಹಬ್ಬದ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹಾಗೂ ವಿವಾದಿತ ಕೃಷಿ ಕಾಯ್ದೆಗಳಿಗೆ ಬೆಂಬಲವಾಗಿ ರೈತರಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಇತರೆ ಸ್ಥಳೀಯ ನಾಯಕರ ಪ್ರತಿಕೃತಿ ದಹಿಸುವ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ಈ ಪ್ರತಿಭಟನೆಗೆ ಉತ್ತರ ಪ್ರದೇಶ ಸರ್ಕಾರ ಅನುಮತಿ ನೀಡಲಿಲ್ಲ. ಬದಲಿಗೆ ಹಲವು ರೈತ ನಾಯಕರನ್ನು ಗೃಹಬಂಧನದಲ್ಲಿರಿಸಿದರೆ, ಕೆಲವು ರೈತ ಮುಖಂಡರನ್ನು ಬಂಧಿಸಲಾಗಿದೆ," ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.

English summary
Lakhimpur Kheri Violence: Nationwide Rail Roko Protest on Oct 18 by Samyukt Kisan Morcha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X