ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಖಿಂಪುರ ಖೇರಿ ಗಲಭೆ; ಯಪಿ ಸರ್ಕಾರದ ತನಿಖೆ ಬಗ್ಗೆ ಸುಪ್ರೀಂ ಅತೃಪ್ತಿ

|
Google Oneindia Kannada News

ನವದೆಹಲಿ, ಅಕ್ಟೋಬರ್ 08; ಕಳೆದ ಭಾನುವಾರ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ 4 ರೈತರು ಸೇರಿ 8 ಜನರು ಮೃತಪಟ್ಟಿದ್ದಾರೆ. ಈ ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಸುಪ್ರೀಂಕೋರ್ಟ್ ಅತೃಪ್ತಿ ವ್ಯಕ್ತಪಡಿಸಿದೆ.

ಲಖಿಂಪುರ ಖೇರಿ ಗಲಭೆ ಬಗ್ಗೆ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ರಾಷ್ಟ್ರಮಟ್ಟದಲ್ಲಿ ಗಲಭೆ ಪ್ರಕರಣದ ಬಗ್ಗೆ ಚರ್ಚೆಯಾಗುತ್ತಿದೆ. ಶುಕ್ರವಾರ ಉತ್ತರ ಪ್ರದೇಶ ಸರ್ಕಾರ ಘಟನೆಯ ತನಿಖೆ ಬಗ್ಗೆ ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಕೆ ಮಾಡಿತು.

ಲಖಿಂಪುರ ಖೇರಿ ಹಿಂಸಾಚಾರ; ಸುಪ್ರೀಂಗೆ ವಿವರಣೆ ಕೊಟ್ಟ ಯುಪಿ ಸರ್ಕಾರ ಲಖಿಂಪುರ ಖೇರಿ ಹಿಂಸಾಚಾರ; ಸುಪ್ರೀಂಗೆ ವಿವರಣೆ ಕೊಟ್ಟ ಯುಪಿ ಸರ್ಕಾರ

ಉತ್ತರ ಪ್ರದೇಶದ ಇಬ್ಬರು ವಕೀಲರು ಹಿಂಸಾಚಾರದ ಕುರಿತು ಸುಪ್ರೀಂಕೋರ್ಟ್‌ ಉಸ್ತುವಾರಿಯಲ್ಲಿ ಸಿಬಿಐ ತನಿಖೆ ನಡೆಯಬೇಕು ಪತ್ರ ಬರೆದಿದ್ದರು. ಈ ಅರ್ಜಿಯ ವಿಚಾರಣೆಯು ನಡೆಯುತ್ತಿದೆ.

 ಲಖಿಂಪುರ ಹಿಂಸಾಚಾರ: ಮೃತರ ಕುಟುಂಬವನ್ನು ಭೇಟಿಯಾದ ರಾಹು‌ಲ್‌, ಪ್ರಿಯಾಂಕ ಲಖಿಂಪುರ ಹಿಂಸಾಚಾರ: ಮೃತರ ಕುಟುಂಬವನ್ನು ಭೇಟಿಯಾದ ರಾಹು‌ಲ್‌, ಪ್ರಿಯಾಂಕ

Lakhimpur Kheri Violence Supreme Court Not Satisfied With UP Govt Probe

ಶುಕ್ರವಾರ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದ ಪೀಠ ಗಲಭೆ ತನಿಖೆ ಕುರಿತು ಉತ್ತರ ಪ್ರದೇಶ ಸರ್ಕಾರ ಕೈಗೊಂಡ ಕ್ರಮಗಳು ತೃಪ್ತಿದಾಯಕವಾಗಿಲ್ಲ ಎಂದು ಹೇಳಿತು.

 ಲಖಿಂಪುರ ಖೇರಿ ಪರಿಸ್ಥಿತಿಯನ್ನು ರಾಹುಲ್ ಗಾಂಧಿ ತಪ್ಪಾಗಿ ಬಿಂಬಿಸುತ್ತಿದ್ದಾರೆ; ಬಿಜೆಪಿ ಲಖಿಂಪುರ ಖೇರಿ ಪರಿಸ್ಥಿತಿಯನ್ನು ರಾಹುಲ್ ಗಾಂಧಿ ತಪ್ಪಾಗಿ ಬಿಂಬಿಸುತ್ತಿದ್ದಾರೆ; ಬಿಜೆಪಿ

ಅರ್ಜಿಯ ವಿಚಾರಣೆ ವೇಳೆ ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಿರಿಯ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದರು. ರೈತರು ಗುಂಡೇಟಿನಿಂದ ಮೃತಪಟ್ಟಿದ್ದಾರೆ ಎಂಬುದಕ್ಕೆ ಯಾವುದೇ ಆಧಾರವಿಲ್ಲ. ಮರಣೋತ್ತರ ಪರೀಕ್ಷೆಯಲ್ಲಿ ಗುಂಡೇಟಿನ ಗಾಯಗಳು ಪತ್ತೆಯಾಗಿಲ್ಲ ಎಂದು ವಾದ ಮಂಡಿಸಿದರು.

ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಯಾವುದೇ ಸಂಸ್ಥೆ ತನಿಖೆ ಕೈಗೊಳ್ಳುವ ತನಕ ಗಲಭೆಯ ಸಾಕ್ಷ್ಯಗಳನ್ನು ಸುರಕ್ಷಿತವಾಗಿ ಸಂಗ್ರಹ ಮಾಡಬೇಕು ಎಂದು ಉತ್ತರ ಪ್ರದೇಶದ ಡಿಜಿಪಿಗೆ ಸೂಚನೆ ನೀಡಿದರು. 8 ಜನರ ಭೀಕರ ಹತ್ಯೆಯಾಗಿದೆ ಎಲ್ಲಾ ಆರೋಪಿಗಳ ವಿರುದ್ಧ ಕಾನೂನು ಕ್ರಮ ಆಗಬೇಕು ಎಂದರು.

ಇದೊಂದು ಸೂಕ್ಷ್ಮ ಪ್ರಕರಣವಾಗಿದೆ ಉತ್ತರ ಪ್ರದೇಶ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳಲಿದೆ ಎಂಬ ಭರವಸೆ ಇದೆ ಎಂದು ಸುಪ್ರೀಂಕೋರ್ಟ್ ಹೇಳಿತು. ಎಲ್ಲದಕ್ಕು ಸಿಬಿಐ ತನಿಖೆಯೊಂದೇ ಪರಿಹಾರವಲ್ಲ ಎಂದು ಕೋರ್ಟ್ ಹೇಳಿತು.

ನೋಟಿಸ್ ಅಂಟಿಸಿದ ಪೊಲೀಸ್; ಲಖಿಂಪುರ ಗಲಭೆಯ ಆರೋಪಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರ ಆಶಿಷ್ ಮಿಶ್ರಾ ನಾಪತ್ತೆಯಾಗಿದ್ದಾರೆ. ಉತ್ತರ ಪ್ರದೇಶ ಪೊಲೀಸರು ಲಖಿಂಪುರ ಖೇರಿಯ ನಿವಾಸಕ್ಕೆ ನೋಟಿಸ್ ಅಂಟಿಸಿದ್ದು, ಅಕ್ಟೋಬರ್ 9ರ 11 ಗಂಟೆ ಒಳಗೆ ಪೊಲೀಸರ ಮುಂದೆ ಹಾಜರಾಗಬೇಕು ಎಂದು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

notice

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಇದೊಂದು ವಿಷಾದಕರ ಘಟನೆ, ತನಿಖೆ ನಡೆಯುತ್ತಿದೆ. ರಾಜ್ಯದ ಎಲ್ಲ ವರ್ಗದವರ ರಕ್ಷಣೆ ನಮ್ಮ ಸರ್ಕಾರದ ಆದ್ಯತೆ. ಯಾವುದೇ ಒತ್ತಕ್ಕೆ ಒಳಗಾಗುವುದಿಲ್ಲ" ಎಂದು ಹೇಳಿದ್ದಾರೆ.

ಲಖಿಂಪು ಖೇರಿ ಹಿಂಸಾಚಾರದ ಗಂಭೀರತೆ, ಮಾಧ್ಯಮಗಳ ವರದಿ, ಪ್ರಕರಣವನ್ನು ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿರುವ ರೀತಿ ಮುಂತಾದವುಗಳನ್ನು ಉಲ್ಲೇಖಿಸಿ ಇಬ್ಬರು ವಕೀಲರು ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರವನ್ನು ಬರೆದಿದ್ದಾರೆ. ಘಟನೆ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.

ಭಾನುವಾರ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಇಂತಹ ಸಂದರ್ಭದಲ್ಲಿ ಕಾರ್ಯಕ್ರಮ ಮುಗಿಸಿಕೊಂಡಿ ಹೋಗುತ್ತಿದ್ದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ, ಪುತ್ರ ಆಶಿಶ್ ಇದ್ದ ಕಾರು ಪ್ರತಿಭಟನಾನಿತರ ರೈತರಿಗೆ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿದ್ದರು.

ಆಕ್ರೋಶಗೊಂಡ ರೈತರು ಬಳಿಕ ಸಚಿವರ ಬೆಂಬಲಿಗರ ಕಾರನ್ನು ಅಡ್ಡಗಟ್ಟಿದರು. ಬೆಂಕಿ ಹಚ್ಚಿದರು. ಈ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಈ ಘಟನೆ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಪ್ರತಿಪಕ್ಷಗಳು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.

English summary
Supreme Court said that it is not satisfied with the steps taken by the Uttar Pradesh government in the investigation of the Lakhimpur Kheri violence case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X