ಬ್ರಿಟನ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಮೊಕದ್ದಮೆ ಹೂಡುವುದಾಗಿ ಲಲಿತ್ ಮೋದಿ ಬೆದರಿಕೆ
ನವದೆಹಲಿ, ಮಾರ್ಚ್. 30: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾಜಿ ಮುಖ್ಯಸ್ಥ ಲಲಿತ್ ಮೋದಿ ಅವರು ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರನ್ನು ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಗಳ ವಿರುದ್ಧ ಬ್ರಿಟನ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವುದಾಗಿ ಘೋಷಿಸಿದ್ದಾರೆ.
ಐಪಿಎಲ್‌ನಲ್ಲಿ ಹಣಕಾಸಿನ ಅವ್ಯವಹಾರದ ಆರೋಪಗಳನ್ನು ಎದುರಿಸಿದ ನಂತರ 2010 ರಿಂದ ಲಂಡನ್‌ನಲ್ಲಿ ವಾಸಿಸುತ್ತಿರುವ ಲಲಿತ್ ಮೋದಿ ಅವರು ಗುರುವಾರ ಟ್ವಿಟರ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಅವರು ತಮ್ಮನ್ನು ತಾವು ಸಂಪೂರ್ಣವಾಗಿ ಮೂರ್ಖರಾನ್ನಾಗಿಸಿಕೊಳ್ಳುವುದನ್ನು ನೋಡಲು ಎದುರು ನೋಡುತ್ತಿದ್ದೇನೆ" ಎಂದು ಹೇಳಿದ್ದಾರೆ.

2019 ರ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಉಪನಾಮವನ್ನು ಹಂಚಿಕೊಂಡವರ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಇದಾದ ನಂತರ ರಾಹುಲ್ ಗಾಂಧಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಲಲಿತ್ ಮೋದಿ ನಿರ್ಧರಿಸಿದ್ದಾರೆ.
"ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮವನ್ನು ಹೇಗೆ ಹೊಂದಿರುತ್ತಾರೆ ?" ಎಂದು ಪ್ರಶ್ನಿಸಿ ಪ್ರಧಾನಿ ಮೋದಿಯನ್ನು ಲಲಿತ್ ಮೋದಿ ಮತ್ತು ಪರಾರಿಯಾದ ವಜ್ರ ವ್ಯಾಪಾರಿ ನೀರವ್ ಮೋದಿಯೊಂದಿಗೆ ಹೋಲಿಕೆ ಮಾಡಲಾಗಿತ್ತು. ಸೂರತ್ ನ್ಯಾಯಾಲಯದ ತೀರ್ಪಿನ ಬಳಿಕ ರಾಹುಲ್ ಗಾಂಧಿ ಅವರನ್ನು ಸಂಸತ್ತಿನ ಸದಸ್ಯತ್ವದಿಂದಲೂ ಅನರ್ಹಗೊಳಿಸಲಾಗಿದೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಲಲಿತ್ ಮೋದಿ, ನನ್ನನ್ನು ಕಾನೂನಿನ ಕೈಯಿಂದ ತಪ್ಪಿಸಿಕೊಂಡಿರುವವನು ಎಂದು ಕರೆಯಲು ಆಧಾರವೇನಿದೆ...? ನಾನು ಯಾವುದೇ ಅಪರಾಧಕ್ಕೆ ಶಿಕ್ಷೆಗೊಳಗಾಗಿಲ್ಲ ಎಂದು ಕಿಡಿಕಾರಿದ್ದಾರೆ. ತಾನು 100 ಶತಕೋಟಿ ಡಾಲರ್‌ಗಳಷ್ಟು ಹಣವನ್ನು ಗಳಿಸಿದ "ಈ ವಿಶ್ವದ ಶ್ರೇಷ್ಠ ಕ್ರೀಡಾಕೂಟ" ವನ್ನು ರಚಿಸಿದ್ದೇನೆ, ರಾಹುಲ್ ಗಾಂಧಿ ಕುಟುಂಬಕ್ಕಿಂತ ಹೆಚ್ಚಿನದನ್ನು ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ.
ತಮ್ಮ ಮೇಲೆ ಮಾಡಿರುವ ಆರೋಪಗಳನ್ನು ಸಾಬೀತುಪಡಿಸಲು ರಾಹುಲ್ ಗಾಂಧಿಗೆ ಸವಾಲು ಹಾಕಿರುವ ಅವರು, ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ಸಂಪೂರ್ಣವಾಗಿ ಮೂರ್ಖರಾಗುವುದನ್ನು ನೋಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ಹಲವಾರು ಕಾಂಗ್ರೆಸ್ ನಾಯಕರು ವಿದೇಶದಲ್ಲಿ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿರುವ ಅವರು, ಕಾಂಗ್ರೆಸ್ ನಾಯಕರ ಆಸ್ತಿಗಳ ವಿಳಾಸ ಮತ್ತು ಫೋಟೋಗಳನ್ನು ನೀಡಬಹುದು. ದೇಶವು ಕಟ್ಟುನಿಟ್ಟಾದ ಮಾನನಷ್ಟ ಕಾನೂನುಗಳನ್ನು ಜಾರಿಗೊಳಿಸಿದ ತಕ್ಷಣ ಭಾರತಕ್ಕೆ ಮರಳುತ್ತೇನೆ ಎಂದು ತಿಳಿಸಿದ್ದಾರೆ.

ಮೋದಿಯವರ ಟ್ವೀಟ್‌ಗಳಿಗೆ ಅಥವಾ ಅವರ ಕಾನೂನು ಬೆದರಿಕೆಗೆ ರಾಹುಲ್ ಗಾಂಧಿ ಇದುವರೆಗೆ ಪ್ರತಿಕ್ರಿಯಿಸಿಲ್ಲ. ರಾಹುಲ್ ಗಾಂಧಿ ಅವರ ಮೇಲಿನ ಪ್ರಕರಣ ರಾಜಕೀಯ ಪ್ರೇರಿತವಾಗಿದೆ ಮತ್ತು ಅದರ ವಿರುದ್ಧ ಅವರು ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಅವರ ಪಕ್ಷವು ಸಮರ್ಥಿಸಿಕೊಂಡಿದೆ.
ರಾಹುಲ್ ಗಾಂಧಿ ಮೇಲೆಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಾಗಲು ಮುಖ್ಯ ಕಾರಣ ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ. ಕರ್ನಾಟಕದಲ್ಲಿ ನಡೆದ ಘಟನೆ ಮೇಲೆ ದೂರು ದಾಖಲಿಸಿದ್ದರು. 2019 ರ ಲೋಕಸಭಾ ಚುನಾವಣೆಗೆ ಮುನ್ನ ಕರ್ನಾಟಕದ ಕೋಲಾರದಲ್ಲಿ ನಡೆದ ಸಾರ್ವಜನಿಕ ಮೆರವಣಿಗೆ ವೇಳೆ ರಾಹುಲ್ ಗಾಂಧಿ ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮವನ್ನು ಹೇಗೆ ಹೊಂದಿರುತ್ತಾರೆ ?" ಎಂಬ ಹೇಳಿಕೆ ನೀಡಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications