ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇವು ತಿಂದ ಲಾಲೂ ಪ್ರಸಾದ್ ಯಾದವ್ ದೋಷಿ

|
Google Oneindia Kannada News

ರಾಂಚಿ, ಡಿಸೆಂಬರ್ 23: 900 ಕೋಟಿ ರೂ.ಗಳ ಮೇವು ಹಗರಣದ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ದೋಷಿ ಎಂದು ಜಾರ್ಖಂಡ್ ನ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ.

ಜೈಲಿನಲ್ಲಿ ಲಾಲು ರಾಜ್ಯಶಾಸ್ತ್ರ ಮೇಷ್ಟ್ರು!ಜೈಲಿನಲ್ಲಿ ಲಾಲು ರಾಜ್ಯಶಾಸ್ತ್ರ ಮೇಷ್ಟ್ರು!

ಜಾರ್ಖಂಡ್ ನ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ ನ್ಯಾಯಾಧೀಶ ಶಿವಪಾಲ್ ಸಿಂಗ್ ಅವರು ತೀರ್ಪು ನೀಡಿ ಶನಿವಾರ ಆದೇಶ ಹೊರಡಿಸಿದರು. ಜನವರಿ 3ರಂದು ಶಿಕ್ಷೆ ಪ್ರಕಟವಾಗಲಿದೆ.

ಲಾಲೂ ಸೇರಿ 22 ಆರೋಪಿಗಳ ಪೈಕಿ 7 ಜನರಿಗೆ ಸಿಬಿಐ ಕೋರ್ಟ್ ಖುಲಾಸೆಗೊಳಿಸಿದೆ. ಒಟ್ಟು 6 ಪ್ರಕರಣಗಳಲ್ಲಿ ಎರಡು ಪ್ರಕರಣಕ್ಕೆ ತೀರ್ಪು ಪ್ರಕಟಿಸಿದ್ದು, ಇನ್ನುಳಿದ 4 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ.

Ranchi's Special CBI Court pronounces verdict, Lalu Prasad Yadav found guilty in Fodder Scam

ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಲಾಲೂ ಪ್ರಸಾದ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಇದರಿಂದ ಲಾಲೂ ಪ್ರಸಾದ್ ಅವರು ಈ ಬಾರಿಯ ಹೊಸ ವರ್ಷವನ್ನು ಜೈಲಿನಲ್ಲಿಯೇ ಕಳೆಯಬೇಕಾಗಿದೆ.

ಇದೇ ಪ್ರಕರಣದಲ್ಲಿ ಲಾಲು ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಅದರಲ್ಲಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿ ಸುಪ್ರೀಂ ಕೋರ್ಟ್ ನೀಡಿದ ಜಾಮೀನಿನ ಮೇಲೆ ಹೊರಬಂದಿದ್ದರು. 1996ರಲ್ಲಿ ಬೆಳಕಿಗೆ ಬಂದ ಈ ಪ್ರಕರಣದ ವಿಚಾರಣೆ ಡಿಸೆಂಬರ್ 13, 2017ಕ್ಕೆ ಅಂತ್ಯವಾಗಿತ್ತು.

ಪಶುಗಳಿಗೆ ಮೇವು ಪೂರೈಸುವುದಾಗಿ ಸುಳ್ಳು ಬಿಲ್ಲು ಸೃಷ್ಟಿಸಿ ಅಕ್ರಮವಾಗಿ ದೇವಗಡ್ ಖಜಾನೆಯಿದ 89 ಲಕ್ಷ ರು ಪಡೆದ ಆರೋಪ ಎದುರುಸುತ್ತಿದ್ದರು.

1994-1996 ರಲ್ಲಿ ಬಿಹಾರದಲ್ಲಿ ನಡೆದ ಈ ಹಗರಣದಲ್ಲಿ ಪಶುಗಳಿಗೆ ಮೇವು ಹಾಗೂ ಔಷಧಿ ಪೂರೈಸುವ ಉದ್ದೇಶದಿಂದ ಡಿಯೋದರ್(ಈಗ ಜಾರ್ಖಾಂಡ್ ರಾಜ್ಯದಲ್ಲಿದೆ) ಎಂಬ ಜಿಲ್ಲೆಯ ಸರ್ಕಾರಿ ಖಜಾನೆಯಿಂದ ಕೋಟ್ಯಂತರ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿತ್ತು.

ಆದರೆ ಈ ಹಣವನ್ನು ಮೂಲ ಉದ್ದೇಶಕ್ಕಾಗಿ ಬಳಸಿಕೊಳ್ಳದೆ ಬಿಹಾರದ ಆಗಿನ ಮುಖ್ಯಮಂತ್ರಿಯಾಗಿದ್ದ ಲಾಲೂ ಯಾದವ್ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೆ ಎಂಬುದು ಆರೋಪವಾಗಿತ್ತು.

English summary
Ranchi's Special CBI Court pronounces a verdict, Lalu Prasad Yadav found guilty in Fodder Scam. Ranchi's Special CBI Court to pronounce quantum sentence on January 3rd, 2018 for the 15 guilties including Lalu Prasad Yadav.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X