ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಲು ಪ್ರಸಾದ್ ಯಾದವ್ ಮೂತ್ರಪಿಂಡ ಕಸಿ ಯಶಸ್ವಿ, ಐಸಿಯುಗೆ ಶಿಫ್ಟ್

|
Google Oneindia Kannada News

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ಮೂತ್ರಪಿಂಡ ಕಸಿ ಯಶಸ್ವಿಯಾಗಿದ್ದು, ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

ಲಾಲು ಪ್ರಸಾದ್ ಯಾದವ್ ಅವರು ಸಿಂಗಾಪುರದಲ್ಲಿ ಯಶಸ್ವಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಸಿಎಂ ತೇಜಸ್ವಿ ಯಾದವ್ ಅವರು ಸೋಮವಾರ ಟ್ವೀಟ್ ಮಾಡಿದ್ದಾರೆ. ತಂದೆಗೆ ಕಿಡ್ನಿ ದಾನ ಮಾಡಿದ ಸಿಂಗಾಪುರ ಮೂಲದ ಲಾಲು ಯಾದವ್ ಪುತ್ರಿ ರೋಹಿಣಿ ಆಚಾರ್ಯ ಕೂಡ ಕಸಿ ನಂತರ ಆರೋಗ್ಯವಾಗಿದ್ದಾರೆ.

ಲಾಲು ಪ್ರಸಾದ್‌ ಯಾದವ್‌ಗೆ ಕಿಡ್ನಿ ಶಸ್ತ್ರಚಿಕಿತ್ಸೆ ಯಶಸ್ವಿ ಲಾಲು ಪ್ರಸಾದ್‌ ಯಾದವ್‌ಗೆ ಕಿಡ್ನಿ ಶಸ್ತ್ರಚಿಕಿತ್ಸೆ ಯಶಸ್ವಿ

ಬಹು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಆರ್‌ಜೆಡಿ ಅಧ್ಯಕ್ಷರಿಗೆ ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಲಾಗಿತ್ತು. ಈ ವೇಳೆ ಸಿಂಗಾಪುರ ಮೂಲದ ಅವರ ಮಗಳು ರೋಹಿಣಿ ಆಚಾರ್ಯ ನಂತರ ತನ್ನ ತಂದೆಗೆ ಹೊಸ ಜೀವನ ನೀಡಲು ಮುಂದಾದರು.

Lalu Prasad Yadav kidney transplant successful, shift to ICU

ಲಾಲು ಪ್ರಸಾದ್ ಯಾದವ್ ಅವರ ಆಪ್ತ ಸಹಾಯಕ ಭೋಲಾ ಯಾದವ್, ಅವರ ಪುತ್ರ ತೇಜಸ್ವಿ ಯಾದವ್ ಮತ್ತು ಅವರ ರಾಜಕೀಯ ಸಲಹೆಗಾರ ಸಂಜಯ್ ಯಾದವ್, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಹಿರಿಯ ಪುತ್ರಿ ಮಿಸಾ ಭಾರ್ತಿ ಸಿಂಗಾಪುರದಲ್ಲಿ ಆರ್‌ಜೆಡಿ ಮುಖ್ಯಸ್ಥರೊಂದಿಗೆ ಇದ್ದಾರೆ.

ಜಾಮೀನಿನ ಮೇಲೆ ಹೊರಗಿರುವ ಯಾದವ್, ಮೇವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಪಾಲಾಗಿದ್ದರು. ಚಿಕಿತ್ಸೆಗಾಗಿ ದೆಹಲಿ ಮತ್ತು ರಾಂಚಿಯಲ್ಲಿ ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮಧುಮೇಹ, ರಕ್ತದೊತ್ತಡ ಮತ್ತು ಮೂತ್ರಪಿಂಡದ ಸಮಸ್ಯೆಗಳು ಸೇರಿದಂತೆ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಇದರಿಂದ ತನ್ನ ತಂದೆಗೆ ಕಿಡ್ನಿ ದಾನ ಮಾಡುವ ನಿರ್ಧಾರವನ್ನು ರೋಹಿಣಿ ಪ್ರಕಟಿಸಿದರು. ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ತನ್ನ ತಂದೆಗೆ ಕಿಡ್ನಿ ದಾನ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು.

"ತಂದೆಗಾಗಿ ನಾನು ಏನು ಬೇಕಾದರೂ ಮಾಡಬಲ್ಲೆ. ಎಲ್ಲವೂ ಚೆನ್ನಾಗಿ ನಡೆಯಲಿ ಎಂದು ಪ್ರಾರ್ಥಿಸಿ ಮತ್ತು ಅಪ್ಪ ಮತ್ತೊಮ್ಮೆ ನಿಮ್ಮ ಧ್ವನಿಯನ್ನು ಎತ್ತುತ್ತಾರೆ" ಎಂದು ಅವರು ಕಳೆದ ತಿಂಗಳು ಹೇಳಿದರು.

English summary
Lalu Prasad Yadav has been shifted to ICU after successful kidney transplant.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X