ರಾಹುಲ್‌ಗೆ ದೇಸಿ ಮಟನ್ ಉಣಬಡಿಸಿದ ಲಾಲು ಯಾದವ್: ಬಿಹಾರ ಶೈಲಿಯ ನಾನ್‌ವೆಜ್ ಮಾಡುವುದು ಹೇಗೆಂದು ತಿಳಿಸಿದ ಆರ್‌ಜೆಡಿ ನಾಯಕ
ನವದೆಹಲಿ, ಆಗಸ್ಟ್ 05: ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯೊಡ್ಡಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಅವರಿಗೆ ಎರಡು ವರ್ಷಗಳ ಕಾಲ ಶಿಕ್ಷೆಯಾಗಿತ್ತು. ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಈಗ ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ಮರುಸ್ಥಾಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ರಾಹುಲ್ ಗಾಂಧಿಯನ್ನು ಅಭಿನಂದಿಸಿದ್ದಾರೆ. ದೆಹಲಿಯಲ್ಲಿ ಮನೆಗೆ ಕರೆಸಿ ದೇಶಿ ಮಟನ್ ಅನ್ನು ಉಣಬಡಿಸಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಕೆಲವೇ ಗಂಟೆಗಳಲ್ಲಿ ರಾಹುಲ್ ಗಾಂಧಿ ಅವರು ಆರ್‌ಜೆಡಿ ನಾಯಕ ಲಾಲು ಯಾದವ್ ಅವರ ಪುತ್ರಿ ಹಾಗೂ ಸಂಸದೆ ಮೀಸಾ ಭಾರತಿ ಅವರ ಮನೆಗೆ ಭೇಟಿ ನೀಡಿದರು.

ತಮ್ಮ ಪುತ್ರಿಯ ಮನೆಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ನೀಲಿಬಣ್ಣದ ಹೂವುಗಳ ಪುಷ್ಪಗುಚ್ಛವನ್ನು ನೀಡುವ ಮೂಲಕ ಲಾಲು ಯಾದವ್ ಸ್ವಾಗತಿಸಿದರು. ಈ ವೇಳೆ, ಸಂಸದೆ ಮೀಸಾ ಭಾರತಿ ಹಾಗೂ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಉಪಸ್ಥಿತರಿದ್ದರು.
ದೆಹಲಿ ನಿವಾಸದಲ್ಲಿ ನಡೆದ ಈ ಸಭೆಯು ಮಹತ್ವದ್ದಾಗಿದೆ. ಕಾರಣ, ಹೊಸದಾಗಿ ರೂಪುಗೊಂಡಿರುವ ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ'ದ ಮುಂದಿನ ಸಭೆಯ ಈ ತಿಂಗಳ ಕೊನೆಯಲ್ಲಿ ನಡೆಯಲಿದೆ. ಇದನ್ನು ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಆಯೋಜಿಸಲಾಗಿದೆ.

ಭೋಜನಕೂಟದ ವೇಳೆ ರಾಹುಲ್ ಗಾಂಧಿ ಮತ್ತು ಲಾಲು ಯಾದವ್ ರಾಜಕೀಯದ ಬಗ್ಗೆ ಹೆಚ್ಚು ಚರ್ಚೆ ನಡೆಸಿದ್ದಾರೆ. ಆದರೆ, ಊಟದ ಸಮಯದಲ್ಲಿ ಲಾಲು ಯಾದವ್ ಅವರು ಬಿಹಾರದ ಆಹಾರ ಪದ್ಧತಿ ಬಗ್ಗೆ ಮಾತನಾಡಿದ್ದಾರೆ.
ಲಾಲು ಯಾದವ್ ಅವರು ಬಿಹಾರದಿಂದ ದೇಸಿ ಮಟನ್ ಮತ್ತು ಮಸಾಲೆಗಳನ್ನು ತರಲು ವ್ಯವಸ್ಥೆ ಮಾಡಿದ್ದರು ಎನ್ನಲಾಗಿದೆ. ಬಿಹಾರದ ವಿಶೇಷ ಶೈಲಿಯಲ್ಲಿ ಮಟನ್ ಅನ್ನು ಹೇಗೆ ತಯಾರಿಸುತ್ತಾರೆ ಎಂಬುದನ್ನು ರಾಹುಲ್ ಗಾಂಧಿ ಅವರಿಗೆ ಹೇಳಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಶಿಷ್ಟವಾದ ಅಡುಗೆ ಶೈಲಿ ಮತ್ತು ರುಚಿಗೆ ಬಿಹಾರದ ಚಂಪಾರಣ್ ಮಟನ್ ಹೆಸರುವಾಸಿಯಾಗಿದೆ. ಇದೇ ವೇಳೆ, ರಾಹುಲ್ ಗಾಂಧಿ ಅವರು ಲಾಲು ಯಾದವ್ ಅವರ ಆರೋಗ್ಯದ ಬಗ್ಗೆಯೂ ವಿಚಾರಿಸಿದರು ಎನ್ನಲಾಗಿದೆ.
ರಾಹುಲ್ ಗಾಂಧಿ ಅವರು ಕಳೆದ ಲೋಕಸಭಾ ಚುನಾವಣೆ ವೇಳೆ 'ಮೋದಿ ಉಪನಾಮ' ಕುರಿತು ಮಾತನಾಡಿದ್ದರು. ಕೋಲಾರದಲ್ಲಿ ಮಾಡಿದ ಭಾಷಣದ ಸಂದರ್ಭದಲ್ಲಿ ಲಲಿತ್ ಮೋದಿ, ನೀರವ್ ಮೋದಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಹೆಸರುಗಳನ್ನು ಉಲ್ಲೇಖಿಸಿದ್ದರು.
ಮೋದಿ ಉಪನಾಮೆ ಹೊಂದಿರುವವರೇ ಏಕೆ ಕಳ್ಳರಾಗಿರುತ್ತಾರೆ ಎಂದು ಪ್ರಶ್ನಿಸಿದ್ದರು. ಈ ವಿಚಾರವಾಗಿ ಗುಜರಾತಿನ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಅವರು ಸ್ಥಳೀಯ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದರು. ಇದನ್ನು ವಿಚಾರಿಸಿದ ನ್ಯಾಯಾಲಯ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಕಾಲ ಶಿಕ್ಷೆ ವಿಧಿಸಿತು.
ಇದನ್ನು ಪ್ರಶ್ನಿಸಿ ಗುಜರಾತ್ ಹೈಕೋರ್ಟ್‌ನಲ್ಲಿ ರಾಹುಲ್ ಅರ್ಜಿ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಗುಜರಾತ್ ಹೈಕೋರ್ಟ್ ಸ್ಥಳೀಯ ನ್ಯಾಯಾಲಯದ ತೀರ್ಪುನ್ನು ಎತ್ತಿಹಿಡಿಯಿತು. ಇದನ್ನು ಪ್ರಶ್ನಿಸಿ ರಾಹುಲ್ ಅವರು ಸುಪ್ರೀಂ ಕೋರ್ಟ್ ಮೋರೆ ಹೋದರು. ಶುಕ್ರವಾರ ಸುಪ್ರೀಂ ಕೋರ್ಟ್ ಗುಜರಾತ್ ಹೈಕೋರ್ಟ್‌ನ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಅವರ ಸಂಸದ ಸ್ಥಾನ ಮರುಸ್ಥಾಪನೆ ಆದಂತಾಗಿದೆ. ಅವರು ಈಗ ನಡೆಯುತ್ತಿರುವ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ











Click it and Unblock the Notifications