• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋವ್ಯಾಕ್ಸಿನ್ ಡೆಲ್ಟಾ ರೂಪಾಂತರಿ ವಿರುದ್ಧ ಶೇ.50ರಷ್ಟು ಪರಿಣಾಮಕಾರಿ

|
Google Oneindia Kannada News

ನವದೆಹಲಿ, ನವೆಂಬರ್ 24: ಕೋವ್ಯಾಕ್ಸಿನ್ ಕೊರೊನಾ ಲಸಿಕೆ ಡೆಲ್ಟಾ ರೂಪಾಂತರಿ ವಿರುದ್ಧ ಶೇ.50ರಷ್ಟು ಪರಿಣಾಮಕಾರಿ ಎಂದು ಲ್ಯಾನ್ಸೆಟ್ ವರದಿ ಮಾಡಿದೆ.

ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರಿ ವಿರುದ್ಧ ಕೋವ್ಯಾಕ್ಸಿನ್ ಲಸಿಕೆ ಶೇ.50ರಷ್ಟು ಪರಿಣಾಮಕಾರಿಯಾಗಿದೆ, ಲಕ್ಷಣಸಹಿತ ಕೋವಿಡ್ ತಡೆಯುವಲ್ಲಿ ಕೋವ್ಯಾಕ್ಸಿನ್ ಎರಡು ಡೋಸ್‌ಗಳ ಪರಿಣಾಮಕಾರಿತ್ವ ಶೇ.77.8ರಷ್ಟಿದೆ. ಲಸಿಕೆಯ ಸುರಕ್ಷತೆ ಬಗ್ಗೆ ಯಾವುದೇ ಆತಂಕವಿಲ್ಲ ಎಂದು ವರದಿ ಹೇಳಿದೆ.

ಭಾರತದಲ್ಲಿ ಮೊದಲು 2 ಡೋಸ್ ನೀಡಿ, ಬೂಸ್ಟರ್ ಡೋಸ್ ಚಿಂತೆ ಬಿಡಿ! ಭಾರತದಲ್ಲಿ ಮೊದಲು 2 ಡೋಸ್ ನೀಡಿ, ಬೂಸ್ಟರ್ ಡೋಸ್ ಚಿಂತೆ ಬಿಡಿ!

ಹೈದರಾಬಾದ್‌ನ ಭಾರತ್ ಬಯೋಟೆಕ್ ಕಂಪನಿಯ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗಳ ಸಹಯೋಗದೊಂದಿಗೆ ಕೋವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಪಡಿಸಿತ್ತು. ಜನವರಿಯಲ್ಲಿ ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು.

ಅಧ್ಯಯನ ಸಂದರ್ಭದಲ್ಲಿ ಡೆಲ್ಟಾ ರೂಪಾಂತರವು ಭಾರತದಲ್ಲಿ ಪ್ರಬಲವಾಗಿತ್ತು, ಆ ವೇಳೆ ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಪೈಕಿ ಶೇ.80ರಷ್ಟು ಡೆಲ್ಟಾ ರೂಪಾಂತರ ಸಂಬಂಧಿತ ಪ್ರಕರಣಗಳಾಗಿದ್ದವು ಎಂದು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ವಿಶ್ವ ಆರೋಗ್ಯ ಸಂಸ್ಥೆಯು ಕೂಡ ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿತ್ತು, ಇದರೊಂದಿಗೆ ಲಸಿಕೆಗೆ ಜಾಗತಿಕ ಮನ್ನಣೆ ದೊರೆತಿತ್ತು.
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ 2714 ಸಿಬ್ಬಂದಿಯನ್ನು ಏಪ್ರಿಲ್ 15ರಿಂದ ಮೇ 15ರವರೆಗಿನ ಅವಧಿಯಲ್ಲಿ ಅಧ್ಯಯನಕ್ಕೆ ಬಳಸಿಕೊಳ್ಳಲಾಗಿತ್ತು.

ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಹಾಗೂ ವಯಸ್ಕರಿಗೆ ಬೂಸ್ಟರ್‌ ಡೋಸ್‌ ನೀಡುವ ಕುರಿತು ಕೇಂದ್ರ ಸರ್ಕಾರ ಮುಂದಿನ 2 ವಾರಗಳಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಕೋವಿಡ್‌ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಲು ರಚಿಸಲಾಗಿರುವ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯು ಮುಂದಿನ 2 ವಾರದಲ್ಲಿ ತನ್ನ ಮುಂದಿನ ಸಭೆ ಸೇರಲಿದೆ.

ಅಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಕುರಿತು ಚರ್ಚೆ ನಡೆಯಲಿದೆ. ಒಂದೊಮ್ಮೆ ಮಕ್ಕಳಿಗೆ ಲಸಿಕೆ ನೀಡಲು ಅನುಮೋದನೆ ನೀಡಿದರೆ, ವಿವಿಧ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಮಕ್ಕಳಿಗೆ ಆದ್ಯತೆಯ ಮೇರೆಗೆ ಕೋವಿಡ್‌ ಲಸಿಕೆ ನೀಡಲು ಶಿಫಾರಸು ಮಾಡಲಾಗುವುದು. ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ 2022ರ ಜನವರಿಯಿಂದ ಆರಂಭವಾಗುವ ಸಾಧ್ಯತೆ ಇದ್ದು, ಮಾಚ್‌ರ್‍ ತಿಂಗಳೊಳಗೆ ಎಲ್ಲಾ ಮಕ್ಕಳಿಗೂ ಲಸಿಕೆ ನೀಡುವ ಉದ್ದೇಶವಿದೆ ಎಂದು ಮೂಲಗಳು ತಿಳಿಸಿವೆ.

ಬೂಸ್ಟರ್‌ ಡೋಸ್‌ ಅಗತ್ಯ ಸಾಬೀತಿಗೆ ಪುರಾವೆಯಿಲ್ಲ!: ಕೋವಿಡ್‌- 19ರ ವಿರುದ್ಧ ಬೂಸ್ಟರ್‌ ಲಸಿಕೆಯ ಅಗತ್ಯವನ್ನು ಸಾಬೀತು ಪಡಿಸುವಂತಹ ಯಾವುದೇ ವೈಜ್ಞಾನಿಕ ಪುರಾವೆಗಳು ಇದುವರೆಗೆ ದೊರೆತಿಲ್ಲ. ಹೀಗಾಗಿ ಇದುವರೆಗೂ 2ನೇ ಡೋಸ್‌ ಪಡೆದುಕೊಳ್ಳದೇ ಇದ್ದವರಿಗೆ ಅದನ್ನು ವಿತರಿಸುವುದೇ ಸರ್ಕಾರದ ಆದ್ಯತೆಯಾಗಬೇಕು ಎಂದು ಐಸಿಎಂಆರ್‌ ಮಹಾ ನಿರ್ದೇಶಕ ಡಾ. ಬಲರಾಮ್‌ ಭಾರ್ಗವ ಹೇಳಿದ್ದಾರೆ.

ಈ ಕುರಿತು ಪಿಟಿಐ ಸುದ್ದಿಸಂಸ್ಥೆಗೆ ಸಂದರ್ಶನ ನೀಡಿರುವ ಭಾರ್ಗವ 'ಬೂಸ್ಟರ್‌ ಡೋಸ್‌ ವಿಷಯದಲ್ಲಿ ಸರ್ಕಾರ ಏಕಪಕ್ಷೀಯವಾಗಿ ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗದು. ಈ ಬಗ್ಗೆ ಐಸಿಎಂಆರ್‌ ಮತ್ತು ತಜ್ಞರ ಸಮಿತಿ ಶಿಫಾರಸಿನ ಬಳಿಕಷ್ಟೇ ಸರ್ಕಾರ ಮುಂದಿನ ಹೆಜ್ಜೆ ಇಡಬಹುದು. ಮೇಲಾಗಿ, ಲಸಿಕೆ ಸಂಶೋಧನೆಯಿಂದ ಹಿಡಿದು, ಲಸಿಕೆ ವಿತರಣೆಯ ಎಲ್ಲಾ ವಿಷಯದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ತಜ್ಞರ ಸಮಿತಿಗೇ ಹೆಚ್ಚಿನ ಮನ್ನಣೆ ನೀಡಿದ್ದಾರೆ. ಬೂಸ್ಟರ್‌ ಡೋಸ್‌ ವಿಷಯದಲ್ಲೂ ಅದೇ ಸಂಪ್ರದಾಯ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

12 ವರ್ಷ ಮೇಲ್ಪಟ್ಟವರಿಗೆ ಝೈಕೋವ್‌-ಡಿ ಲಸಿಕೆ! : ಸದ್ಯ ಝೈಕೋವ್‌-ಡಿ ಲಸಿಕೆಯನ್ನು 12 ವರ್ಷ ಮೇಲ್ಪಟ್ಟಎಲ್ಲಾ ಮಕ್ಕಳಿಗೂ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಮತ್ತೊಂದೆಡೆ ಕೋವ್ಯಾಕ್ಸಿನ್‌ 2 ವರ್ಷ ಮೇಲ್ಪಟ್ಟಎಲ್ಲಾ ವಯೋಮಾನದ ಮಕ್ಕಳಿಗೂ ನೀಡಬಹುದಾದ ಲಸಿಕೆ ಅಭಿವೃದ್ಧಿಪಡಿಸಿದೆ. ಅದಕ್ಕೆ ಶೀಘ್ರವೇ ಅನುಮೋದನೆ ಸಿಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮಕ್ಕಳಿಗೂ ಲಸಿಕೆ ಅಭಿಯಾನ ಆರಂಭಿಸಲು ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದೆ.

ಇನ್ನು 60 ವರ್ಷದ ದಾಟಿದವರು ಈಗಾಗಲೇ ಎರಡೂ ಡೋಸ್‌ ಪಡೆದುಕೊಂಡು 6-9 ತಿಂಗಳು ತುಂಬುತ್ತಾ ಇರುವ ಹಿನ್ನೆಲೆಯಲ್ಲಿ ಅವರಿಗೆ ಬೂಸ್ಟರ್‌ ಡೋಸ್‌ ನೀಡಬೇಕಾ ಎಂಬ ಚಿಂತನೆ ಸರ್ಕಾರದ ಮಟ್ಟದಲ್ಲಿದೆ. ಈ ಬಗ್ಗೆಯೂ ತಾಂತ್ರಿಕ ಸಲಹಾ ಸಮಿತಿ ತನ್ನ ಶಿಫಾರಸು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

   ಪುನೀತ್ ರಾಜ್‍ಕುಮಾರ್ ರನ್ನು ಪಕ್ಷಕ್ಕೆ ಕರೆತರಲು BJP ಮಾಡಿದ ಪ್ರಯತ್ನ ಒಂದಾ ಎರಡಾ? | Oneindia Kannada
   English summary
   Two doses of Covaxin are 50 percent effective against symptomatic disease, according to the first real-world assessment of India's indigenous COVID-19 vaccine published in The Lancet Infectious Diseases journal.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X