ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ ಗ್ರಾಮದಲ್ಲಿ ಜಮೀನು ವಿವಾದ: ಐವರು ಮಹಿಳೆಯರ ಮೇಲೆ ಗುಂಡಿನ ದಾಳಿ

|
Google Oneindia Kannada News

ಪಾಟ್ನಾ ಡಿಸೆಂಬರ್ 26: ಜಮೀನು ವಿವಾದದ ವೇಳೆ ಐವರು ಮಹಿಳೆಯರ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ಬಿಹಾರದ ಬೆಟ್ಟಿಯಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಎಲ್ಲರೂ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಓರ್ವನನ್ನು ಬಂಧಿಸಲಾಗಿದೆ. ಜಮೀನು ವಿಚಾರವಾಗಿ ಪಶ್ಚಿಮ ಚಂಪಾರಣ್ ಜಿಲ್ಲೆಯ ನಕ್ತಿ ಪಟ್ವಾರ ಗ್ರಾಮದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

1985ರಲ್ಲಿ ಸರ್ಕಾರದಿಂದ ಭೂರಹಿತ ಕೂಲಿಕಾರ್ಮಿಕರ ಅನುದಾನದ ಭಾಗವಾಗಿ ಭೂಮಿಯನ್ನು ನೀಡಲಾಯಿತು ಎಂದು ಗ್ರಾಮಸ್ಥರು ಹೇಳಿಕೊಳ್ಳುತ್ತಾರೆ. ನಿವೇಶನ ರಹಿತರು ಭೂಮಿ ತಮ್ಮದೆಂದು ವಾದಿಸುತ್ತಿದ್ದಾರೆ. ಈ ವಿಚಾರ ಸದ್ಯ ನ್ಯಾಯಾಲಯದಲ್ಲಿ 2004 ರಿಂದ ವಿಚಾರಣೆಯಲ್ಲಿದೆ.

ದಸರಾ ಆನೆ ಬಲರಾಮನಿಗೆ ಗುಂಡೇಟು: ಜಮೀನು ಮಾಲೀಕನ ಬಂಧನದಸರಾ ಆನೆ ಬಲರಾಮನಿಗೆ ಗುಂಡೇಟು: ಜಮೀನು ಮಾಲೀಕನ ಬಂಧನ

ಆದರೆ ಇಂದು ಬೆಳಗ್ಗೆ ಮಾಜಿ ಮಾಲೀಕ ಶಿಶಿರ್ ದುಬೆ ಟ್ರ್ಯಾಕ್ಟರ್ ತಂದು ಬಲವಂತವಾಗಿ ಹೊಲ ಉಳುಮೆಗೆ ಯತ್ನಿಸಿದ್ದಾರೆ. ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಲು ಬಂದಾಗ, ಅವರು ಬಂದೂಕನ್ನು ಹೊರತೆಗೆದು ಗುಂಡು ಹಾರಿಸಿದ್ದಾರೆ. ಇವರಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Land dispute in Bihar village: Five women shot dead

ಘಟನೆಯ ಬಗ್ಗೆ ಮಾಹಿತಿ ಪಡೆದ ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣ ಪ್ರದೇಶವನ್ನು ತಲುಪಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಘಟನೆಯ ಬಳಿಕ ಸ್ಥಳದಲ್ಲಿ ತಂಡಗಳನ್ನು ನಿಯೋಜಿಸಲಾಗಿದೆ. ನಂತರ ಆರೋಪಿಯನ್ನು ಬಂಧಿಸಲಾಯಿತು. ಜತೆಗೆ ತನಿಖೆಯೂ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Land dispute in Bihar village: Five women shot dead

"ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ. ಅಂತಿಮವಾಗಿ, ಇದು ಯಾರ ಜಮೀನು? ಎಂದು ತಿಳಿಯಲು ವಿಚಾರಣೆ ನಡೆಸಲಾಗುತ್ತಿದೆ. ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಗುಂಡಿನ ದಾಳಿಗೆ ಬಳಸಿದ ಬಂದೂಕನ್ನು ವಿಧಿವಿಜ್ಞಾನ ಇಲಾಖೆ ಪರಿಶೀಲನೆ ನಡೆಸಿ, ಫಲಿತಾಂಶದ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು" ಪೊಲೀಸ್ ವರಿಷ್ಠಾಧಿಕಾರಿ ಉಪೇಂದ್ರನಾಥ್ ವರ್ಮಾ ಹೇಳಿದ್ದಾರೆ. ಬೆಟ್ಟಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ.

English summary
An incident in which five women were shot during a land dispute took place in a village in Bettia district of Bihar. It is learned that all are fighting for life and death in the hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X