Get Updates
Get notified of breaking news, exclusive insights, and must-see stories!

ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮನೆ ಮೇಲೆ ಇಡಿ ದಾಳಿ

ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (ಐಆರ್‌ಸಿಟಿಸಿ)ನಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯಗಳ 15 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ.

ನವದೆಹಲಿ, ಮಾರ್ಚ್‌ 10: ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ದೆಹಲಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. ನವದೆಹಲಿಯ ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿರುವ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ.

ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (ಐಆರ್‌ಸಿಟಿಸಿ)ನಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯಗಳ 15 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ಬಿಹಾರದ ಪಾಟ್ನಾದಲ್ಲಿರುವ ಆರ್‌ಜೆಡಿ ನಾಯಕ ಮತ್ತು ಲಾಲು ಪ್ರಸಾದ್ ಯಾದವ್ ಅವರ ಆಪ್ತ ಅಬು ದೋಜಾನಾ ಅವರ ಮನೆಯ ಮೇಲೂ ದಾಳಿ ನಡೆಯುತ್ತಿದೆ.

Land for Job scam: Bihar Deputy Chief Minister Tejashwi Yadavs house raid by ED

ಲಾಲು ಪ್ರಸಾದ್‌ ಯಾದವ್ ಮತ್ತು ಅವರ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ಆಸ್ತಿ ಸೇರಿದಂತೆ ಬಿಹಾರ, ಉತ್ತರ ಪ್ರದೇಶ ಮತ್ತು ಮುಂಬೈನಲ್ಲಿ ಇಡಿ ಶೋಧ ನಡೆಯುತ್ತಿದೆ. ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ಪ್ರಶ್ನಿಸಿದ ಕೆಲವು ದಿನಗಳ ನಂತರ ಈ ದಾಳಿಗಳು ನಡೆದಿವೆ.

ಈ ಪ್ರಕರಣವು ಯಾದವ್ ಕುಟುಂಬ ಮತ್ತು ಅದರ ಸಹಚರರಿಗೆ ಜಮೀನುಗಳನ್ನು ಉಡುಗೊರೆಯಾಗಿ ಅಥವಾ ಅಗ್ಗದ ದರದಲ್ಲಿ ಮಾರಾಟ ಮಾಡುವುದಕ್ಕೆ ಪ್ರತಿಯಾಗಿ ರೈಲ್ವೆಯಲ್ಲಿ ಉದ್ಯೋಗ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಲಾಲು ಪ್ರಸಾದ್ ಯಾದವ್‌ ಅವರ ಪತ್ನಿ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಇತರ 14 ಜನರ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸಿಬಿಐ ಆರೋಪಪಟ್ಟಿ ಸಲ್ಲಿಸಿದ್ದು, ಮಾರ್ಚ್ 15 ರಂದು ಎಲ್ಲಾ ಆರೋಪಿಗಳಿಗೆ ಸಮನ್ಸ್ ನೀಡಲಾಗಿದೆ.

Land for Job scam: Bihar Deputy Chief Minister Tejashwi Yadavs house raid by ED

2004-2009ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಯಾದವ್ ಅವರು ರೈಲ್ವೆಯ ವಿವಿಧ ವಲಯಗಳಲ್ಲಿ ಡಿ ದರ್ಜೆಯ ಹುದ್ದೆಗಳ ನೇಮಕಾತಿಗೆ ಪ್ರತಿಯಾಗಿ ತಮ್ಮ ಕುಟುಂಬ ಸದಸ್ಯರ ಹೆಸರಿಗೆ ಭೂ ಆಸ್ತಿಯನ್ನು ವರ್ಗಾಯಿಸುವ ರೂಪದಲ್ಲಿ ಹಣದ ಅನುಕೂಲಗಳನ್ನು ಪಡೆದಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾದ ಇಡಿ ಪ್ರಕರಣವು ಈ ಸಿಬಿಐ ದೂರಿನಿಂದ ಬಂದಿದೆ. ಕೇಂದ್ರ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕರು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಸಹಿ ಮಾಡಿದವರಲ್ಲಿ ತೇಜಸ್ವಿ ಯಾದವ್ ಕೂಡ ಸೇರಿದ್ದಾರೆ. ಕೇಂದ್ರ ಏಜೆನ್ಸಿಗಳಿಂದ ಗುರಿಯಾಗಿರುವ ವಿರೋಧ ಪಕ್ಷದ ನಾಯಕರಲ್ಲಿ ಲಾಲು ಯಾದವ್ ಅವರನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+