ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ಲಾಲು ಪ್ರಸಾದ್ ಯಾದವ್ ಕುಟುಂಬದ 6 ಕೋಟಿ ಮೌಲ್ಯದ ಆಸ್ತಿ ವಶ

ಪಾಟ್ನಾ, ಜುಲೈ. 31: ಭ್ರಷ್ಟಾಚಾರ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬದ 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಕೇಂದ್ರ ತನಿಖಾ ಸಂಸ್ಥೆ ಸೋಮವಾರ ವಶಪಡಿಸಿಕೊಂಡಿದೆ. ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್ ಯಾದವ್ ಮತ್ತು ರಾಬ್ರಿ ದೇವಿ ಮತ್ತು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸೇರಿದಂತೆ ಅವರ ಕೆಲವು ಮಕ್ಕಳ ವಿರುದ್ಧ ಬಿಹಾರ ಉದ್ಯೋಗಕ್ಕಾಗಿ ಭೂಮಿ ಹಗರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಹಣಕಾಸು ಅಪರಾಧಗಳ ತನಿಖೆ ನಡೆಸುವ ಕೇಂದ್ರ ಸಂಸ್ಥೆಯಾದ ಜಾರಿ ನಿರ್ದೇಶನಾಲಯವು ಆಸ್ತಿಯನ್ನು ವಶಪಡಿಸಿಕೊಂಡಿದೆ. ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರು 2004 ರಿಂದ 2009 ರವರೆಗೆ ಕೇಂದ್ರ ರೈಲ್ವೇ ಸಚಿವರಾಗಿದ್ದ ಅವಧಿಯಲ್ಲಿ ಉದ್ಯೋಗಕ್ಕಾಗಿ ಭೂಮಿಯನ್ನು ಅಗ್ಗವಾಗಿ ಖರೀದಿಸಿದ್ದಾರೆ ಎಂದು ಆರೋಪಿಸಲಾಗಿದೆ.

Land for jobs scam: Assets worth rs 6 crore of Lalu Yadav and his family were seized

ಇದಕ್ಕೂ ಮುನ್ನ, ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಜುಲೈ 3 ರಂದು ಲಾಲು ಪ್ರಸಾದ್ ಪ್ರಸಾದ್, ಅವರ ಪತ್ನಿ ರಾಬ್ರಿ ದೇವಿ ಮತ್ತು ಪುತ್ರ ತೇಜಸ್ವಿ ಯಾದವ್ ವಿರುದ್ಧ ಆರೋಪಪಟ್ಟಿ ಹಗರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಿತ್ತು. ಯಾದವ್ ಕುಟುಂಬದ ಮೂವರು ಸದಸ್ಯರಲ್ಲದೆ, ಕೇಂದ್ರದ ತನಿಖಾ ಏಜೆನ್ಸಿಯು 14 ಇತರ ವ್ಯಕ್ತಿಗಳು ಮತ್ತು ಹಲವು ಇಲಾಖೆಗಳನ್ನು ಚಾರ್ಜ್ ಶೀಟ್‌ನಲ್ಲಿ ಹೆಸರಿಸಿದೆ.

ಆರೋಪಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಉಪಬಂಧಗಳ ಜೊತೆಗೆ ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಇತರರಿಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

Land for jobs scam: Assets worth rs 6 crore of Lalu Yadav and his family were seized

ಮಾರ್ಚ್‌ನಲ್ಲಿ ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ಪಾಟ್ನಾದ ಅವರ ನಿವಾಸದಲ್ಲಿ ವಿಚಾರಣೆ ನಡೆಸಿದ್ದರು. ಈ ವೇಳೆ ರಾಬ್ರಿ ದೇವಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದು, ಇದು ದಾಳಿ ಅಥವಾ ಶೋಧವಲ್ಲ ಎಂದು ಸಿಬಿಐ ಮೂಲಗಳು ತಿಳಿಸಿದ್ದವು. ಜೊತೆಗೆ ಇದಕ್ಕೆ ಅಲ್ಲದೆ ರಾಬ್ರಿ ದೇವಿ ಅವರ ಪೂರ್ವ ಅನುಮತಿಯನ್ನು ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+