Tirupati: 2023ನೇ ವರ್ಷದ ಕೊನೆಯ ಚಂದ್ರಗ್ರಹಣ: ಈ ಸಮಯದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ರದ್ದು
ಚಂದ್ರಗ್ರಹಣ ಇರುವುದರಿಂದ ತಿರುಪತಿ ತಿಮ್ಮಪ್ಪನ ದರ್ಶನವನ್ನು 8 ಗಂಟೆಗಳ ಕಾಲ ರದ್ದು ಮಾಡಲಾಗಿದೆ. ಈ ಸಮಯದಲ್ಲಿ ದೇವಾಲಯಗಳನ್ನು ಮುಚ್ಚಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಘೋಷಿಸಿದೆ. ಗ್ರಹಣದ ಬಳಿಕ ದೇವಸ್ಥಾನವನ್ನು ಸ್ವಚ್ಚಗೊಳಿಸಲಾಗುತ್ತದೆ. ನಂತರ ಭಕ್ತರು ದೇವರ ದರ್ಶನ ಮಾಡಬಹುದಾಗಿದೆ.
ನಿತ್ಯ ಲಕ್ಷಾಂತರ ಭಕ್ತರು ದೂರದೂರುಗಳಿಂದ ತಿರುಪತಿಗೆ ಭೇಟಿ ನೀಡುತ್ತಾರೆ. ತಿಮ್ಮಪ್ಪನ ದರ್ಶನ ಪಡೆದು ಹಿಂದಿರುಗುತ್ತಾರೆ. ಆದರೆ ಚಂದ್ರಗ್ರಹಣದ ಈ ಸಮಯದಲ್ಲಿ ದೇವಸ್ಥಾನವನ್ನು ಮುಚ್ಚಲಾಗುತ್ತದೆ. ಹೀಗಾಗಿ ಭಕ್ತರು ಈ ಸಮಯದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡುವುದನ್ನು ತಪ್ಪಿಸಬೇಕು ಎಂದು ಸೂಚನೆ ನೀಡಲಾಗಿದೆ. ಅಕ್ಟೋಬರ್ 28ರ ಸಂಜೆ 7ರಿಂದ ಅಕ್ಟೋಬರ್ 29 ಬೆಳಗಿನ ಜಾವ 3.15ರವರೆಗೆ ದೇವಸ್ಥಾನದಲ್ಲಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ.

ಈ ಬಾರಿ ಅಕ್ಟೋಬರ್ 28ರಂದು ವರ್ಷದ ಎರಡನೇ ಹಾಗೂ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಈ ಚಂದ್ರಗ್ರಹಣ ಭಾರತದಲ್ಲೂ ಗೋಚರಿಸಲಿದೆ. ಭಾರತದಲ್ಲಿ ಚಂದ್ರಗ್ರಹಣವನ್ನು ಸ್ಪಷ್ಟವಾಗಿ ನೋಡಬಹುದು. ಜೊತೆಗೆ ಇಲ್ಲಿ ಗ್ರಹಣದ ಸೂತಕದ ಅವಧಿಯನ್ನು ಪಾಲಿಸಲಾಗುತ್ತದೆ. ಈ ಸಮಯದಲ್ಲಿ ದೇವಾಲಯಗಳನ್ನು ಮುಚ್ಚಲಾಗುತ್ತದೆ. ತಿರುಪತಿ ತಿಮ್ಮಪ್ಪನ ದೇವಾಲಯವು ಚಂದ್ರನ ಸ್ಥಳ ಎಂದು ಹೇಳಲಾಗುತ್ತದೆ. ಹೀಗಾಗಿ ಚಂದ್ರಗ್ರಹಣದ ಸಮಯದಲ್ಲಿ ದೇವಾಲಯ 8 ಗಂಟೆಗಳಿಗೂ ಹೆಚ್ಚು ಕಾಲ ಮುಚ್ಚಿರುತ್ತದೆ.
ಗ್ರಹಣ ಸಮಯಕ್ಕೆ 6 ಗಂಟೆ ಮುಂಚಿತವಾಗಿ ದೇವಸ್ಥಾನದ ಬಾಗಿಲು ಮುಚ್ಚುವ ವಾಡಿಕೆ ಇರುವುದರಿಂದ ಅಕ್ಟೋಬರ್ 28ರ ಸಂಜೆ 7ರಿಂದ ಅಕ್ಟೋಬರ್ 29 ಬೆಳಗಿನ ಜಾವ 3.15ರವರೆಗೆ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತದೆ. ಅಕ್ಟೋಬರ್ 29 ರಂದು ಬೆಳಿಗ್ಗೆ 1:05 ರಿಂದ ಬೆಳಿಗ್ಗೆ 2:22ರ ನಡುವೆ ಭಾಗಶಃ ಚಂದ್ರಗ್ರಹಣ ಪೂರ್ಣಗೊಳ್ಳುತ್ತದೆ. ಅಕ್ಟೋಬರ್ 29ರ ಮುಂಜಾನೆ ಸಮಯದಲ್ಲಿ ದೇವಸ್ಥಾನವನ್ನು ಸ್ವಚ್ಚಗೊಳಿಸುವ ಮೂಲಕ ಮತ್ತೆ ತೆರೆಯಲಾಗುತ್ತದೆ.
ಆ.29ರಂದು ಮುಂಜಾನೆ 3.15ಕ್ಕೆ ದೇವಸ್ಥಾನವನ್ನು ತೆರೆದು ಸ್ವಚ್ಛಗೊಳಿಸಿ ಗ್ರಹಣ ನಿವಾರಣಾ ಪೂಜೆ, ಸುಬ್ರಪಾದ ಸೇವೆ ನೆರವೇರಲಿದೆ. ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ದೇವಸ್ತಾನ ಆಡಳಿತ ಮಂಡಳಿ ತಿಳಿಸಿದೆ. ಚಂದ್ರಗ್ರಹಣ ನಿಮಿತ್ತ ನಾಳೆ ಸಹಸ್ರ ದೀಪ ಓರಣ ಸೇವೆ ಹಾಗೂ ಹಿರಿಯ ನಾಗರಿಕರ ವಿಶೇಷ ದರ್ಶನ ಸೇವೆ ರದ್ದಾಗಲಿದೆ. ಹೀಗಾಗಿ ಸ್ವಾಮಿಯ ದರ್ಶನಕ್ಕೆ ಬರುವ ಭಕ್ತರು ಸೂಕ್ತ ಯೋಜನೆ ರೂಪಿಸಿಕೊಳ್ಳುವುದು ಅವಶ್ಯಕ.
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ತಿರುಮಲ ತಿರುಪತಿ ದೇವಾಲಯವನ್ನು ಭೂಮಿಯ ಮೇಲಿರುವ ಪವಿತ್ರವಾದ ಸ್ಥಳವೆಂದು ಕರೆಯಲಾಗುತ್ತದೆ. ಹಿಂದೂ ಧರ್ಮಗ್ರಂಥಗಳಲ್ಲಿ ವಿಷ್ಣು ದೇವನು ಕಲಿಯುಗದಲ್ಲಿ ವಾಸಿಸುವ ಐಹಿಕ ಸ್ಥಳವೆಂದು ವೈಭಯಯುತವಾಗಿ ವಿವರಿಸಲಾಗಿದೆ. ತಿರುಪತಿ ಬಾಲಾಜಿ ಅಥವಾ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯವು ಹಿಂದೂ ಪುರಾದ ಅತ್ಯಂತ ಪ್ರಮುಖ ಹೆಗ್ಗುರುಗಳಲ್ಲಿ ಒಂದಾಗಿದೆ. ವರ್ಷದ ಯಾವುದೇ ದಿನ ಈ ದೇವಾಲಯಕ್ಕೆ ಭೇಟಿ ನೀಡಿದರೂ ಲಕ್ಷಾಂತರ ಭಕ್ತರ ಸಮೂಹವನ್ನು ಇಲ್ಲಿ ನೋಡಬಹುದು.
ಕೆಳ ದಿನಗಳ ಹಿಂದೆಯಷ್ಟೇ ನವರಾತ್ರಿ ಬ್ರಹ್ಮೋತ್ಸವದ ದಿನಗಳಲ್ಲಿ ಲಕ್ಷಾಂತರ ಭಕ್ತರು ತಿರುಮಲಕ್ಕೆ ಭೇಟಿ ನೀಡಿದ್ದರು. ನವರಾತ್ರಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗಿದೆ.












Click it and Unblock the Notifications