Government Employee: ತಡವಾಗಿ ಕಛೇರಿಗೆ ಬರುವವರಿಗೆ ಖಡಕ್ ಎಚ್ಚರಿಕೆ
ಬೆಂಗಳೂರು, ಜೂನ್ 17: ಕೇಂದ್ರದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಸರ್ಕಾರ ಸರ್ಕಾರಿ ಉದ್ಯೋಗಿಗಳಿಗೆ ಖಡಕ್ ಸೂಚನೆಯೊಂದನ್ನು ನೀಡಿದೆ. ತಡವಾಗಿ ಕಛೇರಿಗೆ ಬರುವ ಮತ್ತು ಬೇಗ ತೆರಳುವ ಉದ್ಯೋಗಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದೆ.
ಹಲವು ಅಧಿಕಾರಿ/ ಸಿಬ್ಬಂದಿ ಬಯೊಮೆಟ್ರಿಕ್ ಹಾಜರಾತಿ (ಎಇಬಿಎಎಸ್) ವ್ಯವಸ್ಥೆಯ ಮೂಲಕ ಹಾಜರಾತಿ ದಾಖಲಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ, ಈ ಸೂಚನೆ ನೀಡಲಾಗಿದೆ. ಹಲವ ಉದ್ಯೋಗಿಗಳು ನಿಯಮಿತವಾಗಿ ತಡವಾಗಿ ಬರುತ್ತಿರುವುದನ್ನು ಗಮನಿಸಲಾಗಿದೆ.

ಸಂಬಂಧಿಸಿದ ಪ್ರಾಧಿಕಾರಗಳು ಅಧಿಕಾರಿ/ ಸಿಬ್ಬಂದಿಗಳು ಪ್ರತಿದಿನ ತಡವಾಗಿ ಬರುವುದು, ಕಛೇರಿಯಿಂದ ಬೇಗ ತೆರಳುವುದನ್ನು ಗಮನಿಸಿದೆ. ಆದ್ದರಿಂದ ಉದ್ಯೋಗಿಗಳಿಗೆ ಸರಿಯಾದ ಸಮಯದಲ್ಲಿ ಕಛೇರಿಯಲ್ಲಿ ಇರಬೇಕು ಎಂದು ಸೂಚನೆ ನೀಡಲಾಗಿದೆ.
ಹಾಜರಾತಿ ಹಾಕುವ ವಿವರ: ಮೊಬೈಲ್ ಅಪ್ಲಿಕೇಶನ್ ಆಧಾರಿತ ಹಾಜರಾತಿ ವ್ಯವಸ್ಥೆಯಲ್ಲಿ ಉದ್ಯೋಗಿಗಳು ಹಾಜರಾತಿ ಹಾಕಿದ ಲೋಕೇಶನ್ ಅನ್ನು ಪತ್ತೆ ಹಚ್ಚಬಹುದು. ಇದರಲ್ಲಿ ಹಲವಾರು ಉದ್ಯೋಗಿಗಳು ನಿರಂತರವಾಗಿ ತಡವಾಗಿ ಬರುತ್ತಿದ್ದಾರೆ ಎಂಬುದು ತಿಳಿದುಬಂದಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸಚಿವಾಲಯ/ ಇಲಾಖೆ/ ಸಂಸ್ಥೆಗಳು ಬಯೊಮೆಟ್ರಿಕ್ ಹಾಜರಾತಿ (ಎಇಬಿಎಎಸ್) ವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಬೇಕು. ನಿಯಮಿತವಾಗಿ ಅದನ್ನು ಪರಿಶೀಲಿಸಬೇಕು, ಉದ್ಯೋಗಿಗಳು ತಡವಾಗಿ ಬರದಂತೆ ಸೂಚಿಸಬೇಕು ಎಂದು ಹೇಳಿದೆ.
ನಿರಂತರವಾಗಿ ಕಛೇರಿಗೆ ತಡವಾಗಿ ಬರುವ, ಬೇಗನೆ ಕಛೇರಿಯಿಂದ ತೆರಳುವ ಉದ್ಯೋಗಿಗಳ ಹಾಜರಾತಿಯನ್ನು ಸಂಬಂಧಿಸಿದ ಪ್ರಾಧಿಕಾರ ಗಮನಿಸುತ್ತಿದೆ. ಇಂಥವರ ವಿರುದ್ಧ ನಿಯಮಗಳ ಅನ್ವಯ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದೆ.
ಎಲ್ಲಾ ಸಿಬ್ಬಂದಿ/ ಅಧಿಕಾರಿಗಳು ತಪ್ಪದೇ ಬಯೊಮೆಟ್ರಿಕ್ ಹಾಜರಾತಿ (ಎಇಬಿಎಎಸ್) ವ್ಯವಸ್ಥೆಯನ್ನು ಬಳಕೆ ಮಾಡಬೇಕಿದೆ. ಎಇಬಿಎಎಸ್ ಹಾಜರಾತಿ ವ್ಯವಸ್ಥೆಯಿಂದ ಯಾರೂ ಸಹ ಹೊರಗೆ ಉಳಿಯುವಂತಿಲ್ಲ. ಈ ಕುರಿತು ಸಚಿವಾಲಯಗಳು ಸಹ ಮಾಹಿತಿ ನೀಡಬೇಕು ಎಂದು ತಿಳಿಸಿದೆ.
ಸಚಿವಾಲಯ/ ಇಲಾಖೆ/ ಸಂಸ್ಥೆಗಳು ಮುಖ್ಯಸ್ಥರು ಎಇಬಿಎಎಸ್ ವ್ಯವಸ್ಥೆಯಲ್ಲಿ ಉದ್ಯೋಗಿಗಳ ಹಾಜರಾತಿ ವರದಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಉದ್ಯೋಗಿಗಳು ನಿರಂತರವಾಗಿ ತಡವಾಗಿ ಆಗಮಿಸುತ್ತಿದ್ದರೆ ಅರ್ಧ ದಿನದ ರಜೆ ಕಡಿತ ಮಾಡಬೇಕು ಎಂದು ಆದೇಶದಲ್ಲಿ ವಿವರಣೆ ನೀಡಲಾಗಿದೆ.
ಕಛೇರಿಯಿಂದ ಬೇಗ ನಿರ್ಗಮಿಸುವುದನ್ನು ಸಹ ತಡವಾಗಿ ಬರುವಂತೆಯೇ ಗಂಭೀರವಾಗಿ ಪರಿಗಣಿಸಲಾಗುತ್ತದೆ. ರಜೆಗಳ ಕಡಿತ ಸೇರಿದಂತೆ ಅನೇಕ ಕ್ರಮಗಳನ್ನು ಉದ್ಯೋಗಿಗಳ ವಿರುದ್ಧ ಇರುವ ನಿಯಮದಂತೆ ಕೈಗೊಳ್ಳಲಾಗುತ್ತದೆ ಎಂದು ಆದೇಶ ಎಚ್ಚರಿಸಿದೆ.
ಬಯೊಮೆಟ್ರಿಕ್ ಹಾಜರಾತಿ (ಎಇಬಿಎಎಸ್) ವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಹೊರತಂದಿರುವ ಮೊಬೈಲ್ ಅಪ್ಲಿಕೇಶನ್ ಆಧಾರಿತ ಹಾಜರಾತಿ ವ್ಯವಸ್ಥೆ ಮೂಲಕ ಉದ್ಯೋಗಿಗಳ ಕಚೇರಿಯ ಪ್ರವೇಶ, ನಿರ್ಗಮನ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದೆ.
ಜೂನ್ 23, 2023ರ ಆದೇಶದಲ್ಲಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳು ಮುಖ್ಯಸ್ಥರು ಎಇಬಿಎಎಸ್ ವ್ಯವಸ್ಥೆಯಲ್ಲಿ ಉದ್ಯೋಗಿಗಳು ಹಾಜರಾತಿ ದಾಖಲಿಸುವುದನ್ನು ಕಡ್ಡಾಯವಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ಸೂಚಿಸಲಾಗಿತ್ತು. ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸೂಚಿಸಲಾಗಿತ್ತು.
ಈಗ ತಡವಾಗಿ ಕಛೇರಿಗೆ ಬರುವ, ಬೇಗ ನಿರ್ಗಮಿಸುವ ಉದ್ಯೋಗಿಗಳ ಹಾಜರಾತಿ ವರದಿಯನ್ನು ನಿಯಮಿತವಾಗಿ ಪಡೆಯಿರಿ. ಅಂತಹ ಉದ್ಯೋಗಿಗಳಿಗೆ ಮೊದಲು ನೋಟಿಸ್ ನೀಡಿ ಎಂದು ಸಚಿವಾಲಯ/ ಇಲಾಖೆ/ ಸಂಸ್ಥೆಗಳು ಮುಖ್ಯಸ್ಥರುಗಳಿಗೆ ನಿರ್ದೇಶನ ನೀಡಲಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications