ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೋಹಿತ್ ಚಕ್ರತೀರ್ಥ ವಿರುದ್ದ ದೂರು: ಸಮಾಜಘಾತಕರನ್ನು ಬಂಧಿಸುವಂತೆ ಮನವಿ

|
Google Oneindia Kannada News

ಬೆಂಗಳೂರು, ಮೇ 26: ಕರ್ನಾಟಕ ಪಠ್ಯಪುಸ್ತಕ ವಿವಾದದ ಕೇಂದ್ರ ಬಿಂದು ರೋಹಿತ್ ಚಕ್ರತೀರ್ಥ. ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಹಲವರು ಗೊಂದಲಗಳು ಉಂಟಾಗಿದ್ದು, ಸಾಹಿತಿಗಳ ಆಕ್ರೋಶಕ್ಕೂ ಗುರಿಯಾಗಿದೆ. ಇನ್ನು ರೋಹಿತ್ ಚಕ್ರತೀರ್ಥ ಕುವೆಂಪು ಮತ್ತು ನಾಡಗೀತೆಗೆ ಅವಮಾನಿಸಿದ್ದ ಎಂಬುದರ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಪಠ್ಯಪುಸ್ತಕ ಮರು ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹಾಗೂ ಲಕ್ಷ್ಮಣ ಅಕಾಶೆ ಕಾರ್ಕಳ ವಿರುದ್ಧ ವಕೀಲ ಎ.ಪಿ.ರಂಗನಾಥ್ ಅವರ ನೇತೃತ್ವದಲ್ಲಿ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಲಾಗಿದೆ.

ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯವರಿಗೆ ರೋಹಿತ್‌ ಚಕ್ರತೀರ್ಥ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆದು ಸಾಮಾಜಿಕ ಜಾಲಾತಾಣದಲ್ಲಿ ಹಾಕಿದ್ದರು. ಅಲ್ಲದೆ ನಾಡಗೀತೆಗೂ ಅಪಮಾನ ಮಾಡಿದ್ದಾರೆ. ಲಕ್ಷ್ಮಣ ಅಕಾಶೆ ಕಾರ್ಕಳ ಎಂಬ ವ್ಯಕ್ತಿಯು ಕುವೆಂಪು ಬಗ್ಗೆ ಕೆಟ್ಟ ಪದಗಳಿಂದ ನಿಂದನೆ ಮಾಡಿದ್ದಾರೆ. ಇವರಿಬ್ಬರ ವಿರುದ್ಧ ಸಮಾಜ ಸ್ವಾಸ್ಥ್ಯ ಕದಡುವ ಪ್ರಕರಣದ ಅಡಿಯಲ್ಲಿ ಕ್ರಮಕೈಗೊಳ್ಳಬೇಕು ಎಂದು ದೂರು ಸಲ್ಲಿಸಲಾಗಿದೆ.

Lawyer AP Ranganath file complaint againest Rohit Chakrathirtha

ದೂರಿನಲ್ಲಿ ಉಲ್ಲೇಖಿಸಿರುವ ಅಂಶಗಳೇನು..?

ಇಲ್ಲಿ ಸಹಿ ಹಾಕಿರುವ ನಾವು ಕನ್ನಡ ನಾಡು ನುಡಿ, ಕಲೆ ಸಾಹಿತ್ಯ ಸಂಸ್ಕೃತಿಗಳ ಬಗ್ಗೆ ಕಾಳಜಿ ಇರುವ ನಾಡ ಪ್ರೇಮಿಗಳು. 2017ರಲ್ಲಿ ರೋಹಿತ್ ಚಕ್ರತೀರ್ಥ ಎಂಬುವ ವ್ಯಕ್ತಿಯು ಕನ್ನಡ ನಾಡಿನ ಹೃದಯಗೀತೆ ಗೇಲಿ ಮಾಡಿ ವಿಕೃತಗೊಳಿಸಿ ನಾಡಗೀತೆಗೆ ಅಪಾರವಾದ ಅವಮಾನವನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ನಾಲ್ಕನೇ ತರಗತಿಯ ಪಠ್ಯ ಪುಸ್ತಕದಲ್ಲಿ ರಾಷ್ಟ್ರ ಕವಿ ಕುವೆಂಪು ಅವರ ಪರಿಚಯವನ್ನು ಅವಮಾನಕಾರಿ ರೀತಿಯಲ್ಲಿ ಪ್ರಕಟಿಸಿರುವುದು ನಾಡಿನ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ 2017 ರಲ್ಲಿ ನಾಡಗೀತೆಯನ್ನು ಅವಮಾನಿಸಿದ ರೋಹಿತ್ ಚಕ್ರತೀರ್ಥರ ಈ ವಿಕೃತ ಬರಹವನ್ನು ಸಾಮಾಜಿಕ ಜಾಲತಾಣವಲ್ಲದೆ ಇತರೆ ಮಾಧ್ಯಮಗಳಲ್ಲೂ ಈಗ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು ಇದು ಕುವೆಂಪು ಅವರ ಗೌರವಕ್ಕೆ ಧಕ್ಕೆ ತರುವ ಜೊತೆಗೆ ಅವರ ಅಪಾರ ಅಭಿಮಾನಿ ವರ್ಗದ ಭಾವನೆಗಳಿಗೆ ನೋವುಂಟು ಮಾಡಿದೆ. ಜಯಭಾರತ ಜನನಿಯ ತನುಜಾತೆ ಎಂದು ಆರಂಭವಾಗುವ ನಾಡಗೀತೆಯನ್ನು ಬರೆದವರು ರಾಷ್ಟ್ರ ಕವಿ ಕುವೆಂಪುರವರು ಈ ಗೀತೆಯನ್ನು ಕರ್ನಾಟಕ ಸರ್ಕಾರ ನಾಡಗೀತೆಯಾಗಿ ಅಂಗೀಕರಿಸಿದೆ. ನಾಡಗೀತೆಗೆ ಸಕಲರೂ ಗೌರವವನ್ನು ಸಲ್ಲಿಸಬೇಕು. ಇಂತಹ ನಾಡಗೀತೆಗೆ ರೋಹಿತ್ ಚಕ್ರತೀರ್ಥ ಅವಮಾನ, ಅಸಡ್ಡೆ,ಗೇಲಿ ಮಾಡಿದ್ದಾನೆ.

Lawyer AP Ranganath file complaint againest Rohit Chakrathirtha

ಲಕ್ಷ್ಮಣ ಆಕಾಶೆ ಕಾರ್ಕಳ ಎಂಬಾತನ ವಿರುದ್ದವೂ ದೂರು

ಲಕ್ಷ್ಮಣ ಆಕಾಶೆ ಕಾರ್ಕಳ ಎಂಬ ವ್ಯಕ್ತಿ ರಾಷ್ಟ್ರಕವಿ ಕುವೆಂಪು ಅವರನ್ನು ಅತ್ಯಂತ ಕೆಟ್ಟ ಭಾಷೆಯಲ್ಲಿ ನಿಂದಿಸಿದ್ದಾರೆ. ಈತನ ಬರಹಕ್ಕೆ ರೋಹಿತ್ ಚಕ್ರತೀರ್ಥರ ಕುಮ್ಮಕ್ಕು ಇದೆ. ರಾಷ್ಟ್ರಕವಿ ಕುವೆಂಪು ಅವರು ನಿಧನರಾದ ಬಳಿಕವೂ ಅವರ ಸಾಹಿತ್ಯವನ್ನು ಓದಿಕೊಂಡು ಬೆಳೆದ ನಾಡಿನ ಜನತೆಯ ಭಾವನೆಗಳಿಗೆ ಧಕ್ಕೆಯಾಗಿದೆ. ಅಲ್ಲದೇ, ನಾಡಿನ ಘನತೆ, ಗೌರವಕ್ಕೆ ಚ್ಯುತಿಯುಂಟಾಗಿದೆ.

Lawyer AP Ranganath file complaint againest Rohit Chakrathirtha

ಈ ಇಬ್ಬರೂ ಸಮಾಜಘಾತುಕರ ಮೇಲೆ ಕಾನೂನು ಕ್ರಮ ಕೈಗೊಂಡು ತಕ್ಷಣ ಬಂಧಿಸಬೇಕೆಂದು ಮನವಿ ಮಾಡುತ್ತೇವೆ. ಈ ಮೂಲಕ ನಾಡಿನ ನೆಮ್ಮದಿ ಕಾಪಾಡಬೇಕೆಂದು ಕೇಳಿಕೊಳ್ಳುತ್ತೇವೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

Lawyer AP Ranganath file complaint againest Rohit Chakrathirtha

ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್​ ರೆಡ್ಡಿ ಅವರಿಗೆ ದೂರು ಸಲ್ಲಿಸುವ ಸಂದರ್ಭದಲ್ಲಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ ರಂಗನಾಥ್, ಹಿರಿಯ ವಕೀಲ ಬಾಲನ್, ಕೆ.ಎನ್ ಜಗದೀಶ್ ಕುಮಾರ್, ಪ್ರದೀಪ್, ಸೂರ್ಯ ಮುಕುಂದರಾಜ್ ಹಾಜರಿದ್ದರು.

English summary
A complaint has been lodged with the Bangalore Police Commissioner against Rohit Chakrathirtha. Advocates led by former president of the Lawyers Association, AP Ranganath, have lodged a complaint because they were insulted to Kuvempu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X