Rahul Gandhi: ನಮ್ಮ ಸಂಸದರನ್ನು ನೋಯಿಸಲು ಕುಂಗ್ ಫೂ ಕಲಿತಿದ್ದೀರಾ?- ರಾಹುಲ್ ಗಾಂಧಿಗೆ ಬಿಜೆಪಿ ಪ್ರಶ್ನೆ
ನವದೆಹಲಿ, ಡಿಸೆಂಬರ್ 19: ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕ ನಡುವೆ ಅಂಬೇಡ್ಕರ್ ವಿಷಯದಲ್ಲಿ ಗದ್ದಲ ಉಂಟಾಗಿ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರ ತಲೆಗೆ ಗಾಯವಾಗಿದೆ ಎಂದು ವರದಿಯಾಗಿದೆ.
ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಂಬೇಡ್ಕರ್ ವಿಷಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಸಂಸತ್ತಿನ ಮಕರ ದ್ವಾರದ ಮುಂದೆ ಪ್ರತಿಭಟನಾನಿರತ ವಿಪಕ್ಷಗಳು ಮತ್ತು ಬಿಜೆಪಿ ಸಂಸದರು ಮುಖಾಮುಖಿಯಾದಾಗ ಗದ್ದಲ ಉಂಟಾಗಿದೆ. ಸಂಸದರನ್ನು ನೋಯಿಸಲು ಕುಂಗ್ ಫೂ ಕಲಿತಿದ್ದೀರಾ? ಸಂಸದ ರಾಹುಲ್ ಗಾಂಧಿ ಎಂದು ಬಿಜೆಪಿ ಆರೋಪಿಸಿದೆ.

ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಂಬೇಡ್ಕರ್ ವಿಷಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಸಂಸತ್ತಿನ ಮಕರ ದ್ವಾರದ ಮುಂದೆ ಪ್ರತಿಭಟನಾನಿರತ ವಿಪಕ್ಷಗಳು ಮತ್ತು ಬಿಜೆಪಿ ಸಂಸದರು ಮುಖಾಮುಖಿಯಾದಾಗ ಗದ್ದಲ ಉಂಟಾಗಿದೆ. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರು ಕೆಳಗೆ ಬಿದ್ದು ತಲೆಗೆ ಸಣ್ಣ ಗಾಯವಾಗಿದೆ ಎಂದು ವರದಿಯಾಗಿದೆ. ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರು ಕಾಂಗ್ರೆಸ್ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೇಲೆ ಗಂಭೀರ ಆರೋಪ ಮಾಡಿದ್ದು, ನಂತರ ಸಂಸದ ಪ್ರತಾಪ್ ಸಾರಂಗಿ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ನನ್ನನ್ನು ತಳ್ಳಿದ್ದರಿಂದ ಕೆಳಗೆ ಬಿದ್ದು ಗಾಯವಾಗಿದೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಆರೋಪಿಸಿದ್ದಾರೆ.
ಈ ಘಟನೆ ನಡೆದ ಸ್ಥಳದಲ್ಲೇ ಮಾಧ್ಯಮಗಳ ಜೊತೆಗೆ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರು ಮಾತನಾಡಿ, ನಾನು ಮೆಟ್ಟಿಲ ಬಳಿ ನಿಂತಿದ್ದಾಗ ರಾಹುಲ್ ಗಾಂಧಿ ಒಬ್ಬ ಸಂಸದರನ್ನು ತಳ್ಳಿದರು. ಆ ಸಂಸದ ನನ್ನ ಮೇಲೆ ಬಿದ್ದು ನಾನು ಕೆಳಗೆ ಬಿದ್ದೆ, ಆಗ ನನ್ನ ತಲೆಗೆ ಗಾಯವಾಯಿತು ಎಂದು ಆರೋಪಿಸಿದ್ದಾರೆ. ಫರೂಕಾಬಾದ್ ಬಿಜೆಪಿ ಸಂಸದ ಮುಖೇಶ್ ರಜಪೂತ್ ಕೂಡ ರಾಹುಲ್ ಗಾಂಧಿ ಅವರನ್ನು ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಕಿರಣ್ ರಿಜಿಜು, ಸಂಸತ್ತು ಕುಸ್ತಿ ವೇದಿಕೆಯಲ್ಲ. ನಮ್ಮ ಸಂಸದರ ವಿರುದ್ಧ ರಾಹುಲ್ ಗಾಂಧಿ ತಮ್ಮ ಶಕ್ತಿ ಪ್ರದರ್ಶನ ಮಾಡಬಾರದು ಎಂದು ಹೇಳಿದ್ದಾರೆ. ಪ್ರತಾಪ್ ಸಾರಂಗಿ ಪ್ರಕರಣದಲ್ಲಿ ಬಿಜೆಪಿ ಪ್ರತಿಭಟನೆಯ ವಿಡಿಯೋಗಳನ್ನು ಪರಿಶೀಲಿಸುತ್ತಿದ್ದು, ತಳ್ಳಿದ ಆರೋಪವನ್ನು ಖಚಿತಪಡಿಸಲು ರಾಹುಲ್ ಗಾಂಧಿ ಬಿಜೆಪಿ ಸಂಸದರನ್ನು ತಳ್ಳುತ್ತಿರುವ ವಿಡಿಯೋ ಕಂಡುಬಂದರೆ, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಎಫ್‌ಐಆರ್ ದಾಖಲಿಸಬಹುದು ಎಂದು ಮೂಲಗಳು ಹೇಳಿವೆ.
ಬಿಜೆಪಿ ಸಂಸದರ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಲ್ಲವೂ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾನು ಸಂಸತ್ತಿಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಬಿಜೆಪಿ ಸಂಸದರು ನನ್ನನ್ನು ಒಳಗೆ ಹೋಗಲು ಬಿಡದೆ ತಳ್ಳಿದರು, ಅಷ್ಟೇ ಅಲ್ಲ ನನಗೆ ಬೆದರಿಕೆ ಹಾಕಿದರು. ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರನ್ನೂ ತಳ್ಳಿದರು. ತಳ್ಳುವುದು ಮತ್ತು ನೂಕುವುದರಿಂದ ನಮಗೆ ಏನೂ ಆಗುವುದಿಲ್ಲ. ನಾವು ಸಂಸತ್ತಿಗೆ ಹೋಗುವುದನ್ನು ಬಿಜೆಪಿ ಸಂಸದರು ತಡೆಯಲು ಸಾಧ್ಯವಿಲ್ಲ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಖಡಕ್ ಉತ್ತರವನ್ನ ನೀಡಿದ್ದಾರೆ.












Click it and Unblock the Notifications