ಸನಾತನ ಧರ್ಮದ ಕುರಿತು ಹೇಳಿಕೆ: ಉದಯನಿಧಿ ಸ್ಟಾಲಿನ್ ಬಂಧಿಸಲು ಆರ್‌ಎಸ್‌ಎಸ್‌ ಕಾನೂನು ಘಟಕದಿಂದ ಚೆನ್ನೈ ಪೊಲೀಸರಿಗೆ ನೋಟಿಸ್

ಚೆನ್ನೈ, ಸೆಪ್ಟೆಂಬರ್‌ 04: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸುವಂತೆ ಚೆನ್ನೈ ಪೊಲೀಸರಿಗೆ ಒತ್ತಾಯಿಸಲಾಗಿದೆ. ಚೆನ್ನೈ ಪೊಲೀಸ್ ಕಮಿಷನರ್‌ಗೆ ಕಾನೂನು ಘಟಕವು ನೊಟೀಸ್ ಕಳುಹಿಸಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹೇಳಿದೆ.

ತಮಿಳುನಾಡು ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಅವರು ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಯು ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ಉದಯನಿಧಿ ಅವರನ್ನು ಬಂಧಿಸುವಂತೆ ಕೋರಿ ಆರ್‌ಎಸ್‌ಎಸ್‌ ಪರ ವಕೀಲ ಉಮೇಶ್ ಶರ್ಮಾ ಲೀಗಲ್ ನೋಟಿಸ್ ನೀಡಿದ್ದಾರೆ ಎಂದು ಆರ್‌ಎಸ್‌ಎಸ್‌ ಹೇಳಿಕೊಂಡಿದೆ.

arrest-of-udhayanidhi-stalin

'ವಕೀಲ ಉಮೇಶ್ ಶರ್ಮಾ ಅವರು ಎಫ್‌ಐಆರ್ ದಾಖಲಿಸಲು ಒತ್ತಾಯಿಸಿದ್ದಾರೆ. ಸನಾತನ ಧರ್ಮದ ಕುರಿತ ಹೇಳಿಕೆಗಾಗಿ ಉದಯನಿಧಿಯನ್ನು ಬಂಧಿಸುವಂತೆ ಚೆನ್ನೈ ಪೊಲೀಸರಿಗೆ ನೋಟಿಸ್ ನೀಡಿದ್ದಾರೆ. 7 ದಿನಗಳ ಒಳಗೆ ಉದಯನಿಧಿ ವಿರುದ್ಧ ಕ್ರಮಕೈಗೊಳ್ಳಲು ಪೋಲಿಸ್ ಕಮಿಷನರ್‌ಗೆ ನೋಟಿಸ್ ನೀಡಲಾಗಿದೆ. 153A/B, 295A, 298, 505 ಅಡಿಯಲ್ಲಿ ಕ್ರಮವನ್ನು ತೆಗೆದುಕೊಳ್ಳಬೇಕು. ಒಂದು ವೇಳೆ, ಪೊಲೀಸರು ವಿಫಲವಾದರೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯನ್ನು ಸಲ್ಲಿಸಲಾಗುವುದು' ಎಂದು ಅವರು ತಿಳಿಸಿದ್ದಾರೆ.

ಚೆನ್ನೈನಲ್ಲಿ ನಡೆದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿರುವ ಉದಯನಿಧಿ ಸ್ಟಾಲಿನ್‌ ಅವರು, 'ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು. ಇದು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ' ಎಂದು ಹೇಳಿದ್ದಾರೆ.

ಸನಾತನ ಧರ್ಮವು ಮಲೇರಿಯಾ, ಕೊರೊನಾ, ಡೆಂಗಿ ಇದ್ದಂತೆ. ಇದನ್ನು ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್‌ ತಿಳಿಸಿದ್ದಾರೆ.

arrest-of-udhayanidhi-stalin

ಈ ಹೇಳಿಕೆಯಿಂದ ಕೆರಳಿಸಿರುವ ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಉದಯನಿಧಿ ಸ್ಟಾಲಿನ್‌ ವಿರುದ್ಧ ಹರಿಹಾಯ್ದಿವೆ.

ಉದಯನಿಧಿ ಅವರು ಹಿಂದೂಗಳ ನರಮೇದಕ್ಕೆ ಕರೆ ನೀಡಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಉದಯನಿಧಿ, 'ದೇವರನ್ನು ಪೂಜಿಸಬಾರದು ಎಂದು ನಾವು ಎಂದಿಗೂ ಹೇಳಿಲ್ಲ. ಜಾತಿ ಭೇದವಿಲ್ಲದೆ ಎಲ್ಲರನ್ನೂ ದೇವಸ್ಥಾನಕ್ಕೆ ಬಿಟ್ಟಿದ್ದೀರಾ? ಈ ಕಾರಣಕ್ಕಾಗಿ ಡಿಎಂಕೆ ಕಾನೂನು ಹೋರಾಟ ನಡೆಸಿದೆ. ಎಲ್ಲ ಜಾತಿಯವರೂ ಅರ್ಚಕರಾಗಬಹುದು ಎಂದು ಎಂದಾದರೂ ಯೋಚಿಸಿದ್ದೀರಾ? ನಾವು ಸಮಾನತೆ ತರಲು ಕಾನೂನು ರೂಪಿಸಿದ್ದೇವೆ. ಸನಾತನ ಧರ್ಮವನ್ನು ತೊಲಗಿಸಬೇಕು ಎಂದು ನಾನು ಹೇಳಿದ್ದೇನೆ. ಈಗ ಹಿಂದೆಂದಿಗಿಂತಲೂ ಹೆಚ್ಚು ದೃಢಸಂಕಲ್ಪ ಮಾಡಿದ್ದೇನೆ. ಕಾನೂನು ಹೋರಾಟ ಎದುರಿಸಲು ಸಿದ್ಧನಿದ್ದೇನೆ' ಎಂದು ಹೇಳಿದ್ದಾರೆ.

ಬಿಜೆಪಿಯವರು ಸುಳ್ಳು ಸುದ್ದಿಗಳನ್ನು ಹರಡುತ್ತಾರೆ. ನಾನು ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿದೆ. ನಾನು ನರಮೇಧ ಎಂಬ ಶಬ್ದವನ್ನೇ ಬಳಸಿಲ್ಲ ಎಂದು ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+