ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ಕಾನೂನು: 18ರ ವಯಸ್ಸಿನಲ್ಲೇ ಯುವತಿಯರ ಮದುವೆಗಿಲ್ಲ ಅನುಮತಿ!

|
Google Oneindia Kannada News

ನವದೆಹಲಿ, ಜೂನ್.14: ಭಾರತದಲ್ಲಿ ಹೆಣ್ಣುಮಕ್ಕಳು ಮದುವೆಯಾಗಲು ಕನಿಷ್ಠ 18 ವರ್ಷ ಆಗಿರಬೇಕು. ಈ ಕಾನೂನು ಪರಿಷ್ಕರಿಸಲು ಕೇಂದ್ರ ಸರ್ಕಾರವು ಮುಂದಾಗಿದೆ. ದೇಶದಲ್ಲಿ ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 18ರಿಂದ 21ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರವು ಚಿಂತನೆ ನಡೆಸಿದೆ.

ಕೇಂದ್ರ ಸರ್ಕಾರವು ಈ ಸಂಬಂಧ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 18 ರಿಂದ 21ಕ್ಕೆ ಏರಿಕೆ ಮಾಡುವ ಬಗ್ಗೆ ಜುಲೈ.31ರೊಳಗೆ ಶಿಫಾರಸ್ಸುಗಳನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಮದುವೆ ಆಮಂತ್ರಣ ಪತ್ರಿಕೆ ಕೊಡ್ತಿವಿ ಆದ್ರೆ ಮದುವೆಗೆ ಬರಬೇಡಿಮದುವೆ ಆಮಂತ್ರಣ ಪತ್ರಿಕೆ ಕೊಡ್ತಿವಿ ಆದ್ರೆ ಮದುವೆಗೆ ಬರಬೇಡಿ

ಶಾರದಾ ಕಾಯ್ದೆ-1929 ಅಡಿಯಲ್ಲಿ 1978ಕ್ಕೂ ಮೊದಲು ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 15ರಿಂದ 18ಕ್ಕೆ ಹೆಚ್ಚಿಸಲಾಗಿತ್ತು. ಹೆಣ್ಣು ಮಕ್ಕಳಿಗೆ 18 ಹಾಗೂ ಗಂಡು ಮಕ್ಕಳಿಗೆ ಮದುವೆ ವಯಸ್ಸನ್ನು 21ಕ್ಕೆ ನಿಗದಿಗೊಳಿಸಲಾಗಿತ್ತು. ಇದೀಗ ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು ಕೂಡಾ 21ಕ್ಕೆ ಹೆಚ್ಚಿಸಲು ಸರ್ಕಾರವು ತೀರ್ಮಾನಿಸಿದೆ.

ಕೇಂದ್ರ ಸರ್ಕಾರದಿಂದ ಕಾರ್ಯಪಡೆ ರಚನೆ

ಕೇಂದ್ರ ಸರ್ಕಾರದಿಂದ ಕಾರ್ಯಪಡೆ ರಚನೆ

ಮದುವೆ ವಯಸ್ಸನ್ನು ತೀರ್ಮಾನಿಸುವ ಬಗ್ಗೆ ಶಿಫಾರಸ್ಸು ಸಲ್ಲಿಸಲು ಕೇಂದ್ರ ಸರ್ಕಾರವು ವಿಶೇಷ ಕಾರ್ಯಪಡೆಯನ್ನು ರಚಿಸಿದೆ. ನಿಗದಿತ ವಯಸ್ಸಿಗಿಂತಲೂ ಮೊದಲು ಮದುವೆಯಾಗುವುದರಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸುವುದು. ತಾಯಿ ಮತ್ತು ಮಗುವಿನ ವಯಸ್ಸಿನ ಅಂತರ ಹಾಗೂ ಮರಣ ಪ್ರಮಾಣ ಹೀಗೆ ಎಲ್ಲ ಅಂಶಗಳ ಬಗ್ಗೆ ಶಿಫಾರಸ್ಸು ಸಲ್ಲಿಸುವಂತೆ ಕಾರ್ಯಪಡೆಗೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ.

10 ಸದಸ್ಯರನ್ನೊಳಗೊಂಡ ವಿಶೇಷ ಕಾರ್ಯಪಡೆ

10 ಸದಸ್ಯರನ್ನೊಳಗೊಂಡ ವಿಶೇಷ ಕಾರ್ಯಪಡೆ

ಸಮತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ನೇತೃತ್ವದಲ್ಲಿ 10 ಸದಸ್ಯರನ್ನೊಳಗೊಂಡ ವಿಶೇಷ ಕಾರ್ಯಪಡೆಯನ್ನು ಅದಕ್ಕಾಗಿ ರಚಿಸಲಾಗಿದೆ. ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್, ಆರೋಗ್ಯ ಕಾರ್ಯದರ್ಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾನೂನು ಮತ್ತು ಶಿಕ್ಷಣ ಇಲಾಖೆ ಸದಸ್ಯರನ್ನು ಒಳಗೊಂಡಿರುತ್ತದೆ. ಇದರ ಜೊತೆಗೆ ಮೂವರು ಸ್ವತಂತ್ರ ಸದಸ್ಯರಾದ ನವದೆಹಲಿಯ ನಜ್ಮಾ ಅಖ್ತರ್, ಮಹಾರಾಷ್ಟ್ರದ ವಸುಂದರಾ ಕಾಮಂತ್, ಗುಜರಾತ್ ನ ದೀಪ್ತಿ ಶಾ ಎಂಬುವವರು ವಿಶೇಷ ಕಾರ್ಯಪಡೆಯಲ್ಲಿದ್ದಾರೆ.

ಕಾರ್ಯಪಡೆ ಶಿಫಾರಸ್ಸು ಆಧರಿಸಿ ಕೇಂದ್ರದ ನಿರ್ಧಾರ

ಕಾರ್ಯಪಡೆ ಶಿಫಾರಸ್ಸು ಆಧರಿಸಿ ಕೇಂದ್ರದ ನಿರ್ಧಾರ

ಮಾತೃತ್ವದ ವಯಸ್ಸು, ತಾಯಿಯ ಮರಣ ಪ್ರಮಾಣ ಕಡಿಮೆಗೊಳಿಸುವುದು, ಪೌಷ್ಠಿಕಾಂಶದ ಮಟ್ಟ ಸುಧಾರಣೆ ಹಾಗೂ ಸಂಬಂಧಿತ ಸಮಸ್ಯೆಗಳನ್ನು ಪರೀಕ್ಷಿಸುತ್ತದೆ. ಈ ಕಾರ್ಯಪಡೆಯ ಶಿಫಾರಸ್ಸುಗಳನ್ನು ಆಧರಿಸಿ ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 18 ರಿಂದ 21ಕ್ಕೆ ಹೆಚ್ಚಿಸುವ ಸಾಧ್ಯತೆಗಳಿವೆ. 2020-21ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ವೇಳೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಸುಳಿವು ನೀಡಿದ್ದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ಕಳೆದ 1978ರಲ್ಲಿ ಶಾರದಾ ಕಾಯ್ದೆ-1929ರ ಅಡಿಯಲ್ಲಿ ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿಯನ್ನು 15ರಿಂದ 18ಕ್ಕೆ ಏರಿಕೆ ಮಾಡಲಾಗಿತ್ತು. ಆದರೆ ದೇಶವನ್ನು ಮತ್ತೊಂದು ಹೆಜ್ಜೆ ಮುಂದಕ್ಕೆ ತೆಗೆದುಕೊಂಡು ಹೋಗಬೇಕಿದೆ. ಈ ಹಿನ್ನೆಲೆಯಲ್ಲಿ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗಾಭಿವೃದ್ಧಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕಾಗುತ್ತದೆ. ತಾಯಿಯ ಮರಣ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಮಾತೃತ್ವದ ವಯೋಮಾನವನ್ನು ಗಮನದಲ್ಲಿ ಇಟ್ಟುಕೊಂಡು ಮದುವೆ ವಯಸ್ಸನ್ನು ನಿಗದಿಗೊಳಿಸಬೇಕಿದೆ. ಈ ಬಗ್ಗೆ ಅಧ್ಯಯನ ನಡೆಸಿ ಶಿಫಾರಸ್ಸುಗಳನ್ನು ಸಲ್ಲಿಸಲು ವಿಶೇಷ ಕಾರ್ಯಪಡೆಯನ್ನು ರಚಿಸಲಾಗುತ್ತದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು.

ನಿಗದಿತ ವಯಸ್ಸಿಗಿಂತ ಪೂರ್ವದಲ್ಲೇ ಮದುವೆ

ನಿಗದಿತ ವಯಸ್ಸಿಗಿಂತ ಪೂರ್ವದಲ್ಲೇ ಮದುವೆ

ಭಾರತದಲ್ಲಿ ಹೆಣ್ಣುಮಕ್ಕಳ ಮದುವೆ ವಯೋಮಿತಿಯನ್ನು 18 ವರ್ಷಕ್ಕೆ ನಿಗದಿಗೊಳಿಸಿದೆ. ಆದರೆ ದೇಶದಲ್ಲಿ ಶೇ.27ರಷ್ಟು ಯುವತಿಯರು 18 ವರ್ಷಕ್ಕಿಂತ ಪೂರ್ವದಲ್ಲೇ ವೈವಾಹಿಕ ಬದುಕಿಗೆ ಕಾಲಿರಿಸುತ್ತಿದ್ದು, ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮದುವೆ ವಯೋಮಿತಿಯನ್ನು ಕನಿಷ್ಠ 21 ವರ್ಷಕ್ಕೆ ಹೆಚ್ಚಿಸುವ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸುವ ಅಗತ್ಯವಿದೆ ಎಂದು ಯುನಿಸೆಫ್ ಅಧ್ಯಯನದಿಂದ ತಿಳಿದು ಬಂದಿದೆ.

English summary
Legally Womens Marriage Age Revise 18 To 21 In India. Central Government Form A Team For Recommendations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X