Get Updates
Get notified of breaking news, exclusive insights, and must-see stories!

Tirupati: ತಿರುಮಲ ತಿರುಪತಿಯಲ್ಲಿ ಚಿರತೆ, ಕರಡಿ: ಭಕ್ತರಿಗೆ ಎಚ್ಚರಿಕೆ!

ತಿರುಮಲ ತಿರುಪತಿಯಲ್ಲಿ ಮತ್ತೊಮ್ಮೆ ಚಿರತೆ ಕಾಣಿಸಿಕೊಂಡಿದ್ದು ಸಂಚಲನ ಮೂಡಿಸಿದೆ. ತಿರುಪತಿಯಿಂದ ತಿರುಮಲಕ್ಕೆ ಹೋಗುವ ಅಲಿಪಿರಿ ನಡಿಗೆ ಮಾರ್ಗದಲ್ಲಿ ಶ್ರೀಲಕ್ಷ್ಮೀನಾರಾಯಣ ಸ್ವಾಮಿ ದೇವಸ್ಥಾನದ ಮಧ್ಯ ಪ್ರದೇಶದಲ್ಲಿ ಚಿರತೆ ಮತ್ತು ಕರಡಿ ಸಂಚರಿಸುತ್ತಿರುವ ದೃಶ್ಯಗಳು ಟ್ರ್ಯಾಪ್ ಕ್ಯಾಮೆರಾದಲ್ಲಿ ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಭಕ್ತರನ್ನು ಎಚ್ಚರಿಸಿದೆ.

ಹೀಗಾಗಿ ಭಕ್ತರು ಎಚ್ಚರಿಕೆ ವಹಿಸಿ ಗುಂಪು ಗುಂಪಾಗಿ ತೆರಳುವಂತೆ ಸೂಚಿಸಲಾಗಿದೆ. ಮತ್ತೊಂದೆಡೆ ಟಿಟಿಡಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಮತ್ತು ಕರಡಿ ಹಿಡಿಯಲು ಕ್ರಮ ಕೈಗೊಂಡಿದ್ದಾರೆ. ಭಾಗಶಃ ಚಂದ್ರಗ್ರಹಣ ಇರುವುದರಿಂದಾಗಿ ಶ್ರೀವಾರಿ ದೇವಸ್ಥಾನದ ಬಾಗಿಲು 8 ಗಂಟೆಗಳ ಕಾಲ ಮುಚ್ಚಲಾಗಿದೆ. ಹೀಗಾಗಿ ಈ ಪ್ರದೇಶದಲ್ಲಿ ಭಕ್ತರ ಸಂಖ್ಯೆ ಕಡಿಮೆಯಾಗಿದ್ದು ಚಿರತೆ ಹಾಗೂ ಕರಡಿ ಸಿಸಿ ಕ್ಯಾಮರಾದಲ್ಲಿ ಕಾಣಿಸಿಕೊಂಡಿವೆ.

leopard-bear-in-tirumala-tirupati

ತಿರುಮಲಕ್ಕೆ ಹೋಗುವ ಅಲಿಪಿರಿ ನಡಿಗೆ ಮಾರ್ಗದಲ್ಲಿರುವ ಲಕ್ಷ್ಮೀ ನಾರಾಯಣಸ್ವಾಮಿ ದೇವಸ್ಥಾನದ ಕ್ಯಾಮೆರಾ ಟ್ರ್ಯಾಪ್‌ನಲ್ಲಿ ಅಕ್ಟೋಬರ್ 24 ಮತ್ತು 27 ರ ನಡುವೆ ಚಿರತೆ ಮತ್ತು ಕರಡಿಯ ಚಲನವಲನದ ದೃಶ್ಯಗಳು ದಾಖಲಾಗಿವೆ.

ಅಕ್ಟೋಬರ್ 29 ರಂದು ಭಾಗಶಃ ಚಂದ್ರಗ್ರಹಣ ಇರುವುದರಿಂದ ಅಕ್ಟೋಬರ್ 28 ರಂದು ರಾತ್ರಿ 7.05 ಕ್ಕೆ ಶ್ರೀವಾರಿ ದೇವಸ್ಥಾನದ ಬಾಗಿಲು ಮುಚ್ಚಲಾಗುವುದು ಮತ್ತು ಅಕ್ಟೋಬರ್ 29 ರಂದು ಬೆಳಿಗ್ಗೆ 3.15 ಕ್ಕೆ ತೆರೆಯಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಸುಮಾರು ಎಂಟು ಗಂಟೆಗಳ ಕಾಲ ದೇವಾಲಯದ ಬಾಗಿಲು ಮುಚ್ಚಿರುತ್ತದೆ. ಅಕ್ಟೋಬರ್ 29 ರಂದು ಮುಂಜಾನೆ 1.05 ರಿಂದ 2.22 ರವರೆಗೆ ಭಾಗಶಃ ಚಂದ್ರಗ್ರಹಣ ಪೂರ್ಣಗೊಳ್ಳುತ್ತದೆ.

leopard-bear-in-tirumala-tirupati

ಇದರಿಂದಾಗಿ ಅಕ್ಟೋಬರ್ 28 ರಂದು ಸಂಜೆ 6 ಗಂಟೆಗೆ ತರಿಗೊಂಡ ಅನ್ನಪ್ರಸಾದ ಭವನವನ್ನು ಮುಚ್ಚಲಾಗಿದ್ದು, ಅಕ್ಟೋಬರ್ 29 ರಂದು ಬೆಳಿಗ್ಗೆ 9 ಗಂಟೆಗೆ ತೆರೆಯಲಾಗುವುದು. ಈ ಸಮಯದಲ್ಲಿ ಆಹಾರ ವಿತರಣೆ ಇರುವುದಿಲ್ಲ. ಅದೇ ರೀತಿ ಅಕ್ಟೋಬರ್ 28ರಂದು ಸಹಸ್ರದೀಪಾಲಂಕರಸೇವೆ, ವಿಕಲಚೇತನರು ಹಾಗೂ ವಯೋವೃದ್ಧರ ದರ್ಶನವನ್ನು ಟಿಟಿಡಿ ರದ್ದುಗೊಳಿಸಿದೆ. ಭಕ್ತರು ಈ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ತಿರುಮಲಕ್ಕೆ ಯಾವುದೇ ಅನಾನುಕೂಲತೆಯಾಗದಂತೆ ತಮ್ಮ ಪ್ರವಾಸವನ್ನು ಯೋಜಿಸಲು ವಿನಂತಿಸಲಾಗಿದೆ.

ಹೀಗಾಗಿ ಈ ವಾರಾಂತ್ಯಕ್ಕೆ ಭಕ್ತರ ಸಂಖ್ಯೆ ಇಲ್ಲಿ ತುಂಬಾ ಕಡಿಮೆಯಾಗಿದೆ. ಈ ಸಂದರ್ಭದಲ್ಲಿ ಕಾಡು ಪ್ರಾಣಿಗಳು ಇಲ್ಲಿ ಕಾಣಿಸಿಕೊಂಡಿದ್ದು ಆತಂಕ ಮೂಡಿಸಿದೆ. ಈ ವಿಚಾರವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ದೇವಸ್ಥಾನ ಹಾಗೂ ಭಕ್ತರು ದೇವಸ್ಥಾನಕ್ಕೆ ಸಾಗುವ ಮಾರ್ಗದಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.

ತಿರುಮಲ ತಿರುಪತಿ ದೇವಾಲಯವನ್ನು ಹಿಂದೂ ಧರ್ಮ ಗ್ರಂಥಗಳಲ್ಲಿ ವಿಷ್ಣು ದೇವನು ಕಲಿಯುಗದಲ್ಲಿ ವಾಸಿಸುವ ಐಹಿಕ ಸ್ಥಳವೆಂದು ವಿವರಿಸಲಾಗಿದೆ. ತಿರುಪತಿ ಬಾಲಾಜಿ ಅಥವಾ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯವು ಹಿಂದೂ ಪುರಾಣದ ಅತ್ಯಂತ ಪ್ರಮುಖ ಹೆಗ್ಗುರುತುಗಳಲ್ಲಿ ಇಂದಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಾವು ಈ ಅದ್ಬುತವಾದ ಹಾಗೂ ಪ್ರಭಾವಶಾಲಿಯಾದ ದೇವಾಲಯವನ್ನು ನೋಡಬಹುದು.

ತಿರುಪತಿ ಬಾಲಾಜಿ ದೇವಾಲಯವು ಭೂಮಿಯ ಮೇಲಿನ ಅತ್ಯಂತ ಜನಪ್ರಿಯ ದೇವಾಲಯವಾಗಿದ್ದು, ವರ್ಷದ ಯಾವುದೇ ದಿನ ಈ ದೇವಾಲಯಕ್ಕೆ ಭೇಟಿ ನೀಡಬಹುದು. ಲಕ್ಷಾಂತರ ಜನ ನಿತ್ಯ ತಿರುಪತಿಗೆ ಭೇಟಿ ನೀಡುತ್ತಾರೆ. ಇಲ್ಲಿ ಭಕ್ತರು ತಮ್ಮೆಲ್ಲಾ ಇಚ್ಚೆಯನ್ನು ಈಡೇರಿಸುವಂತೆ ಭಗವಂತನಲ್ಲಿ ಬೇಡಿಕೊಳ್ಳುತ್ತಾರೆ.

leopard-bear-in-tirumala-tirupati

ತಿರುಪತಿ ಇತಿಹಾಸ

ವಿಜಯನಗರ ಸಾಮ್ರಾಜ್ಯದ ಅಂತ್ಯದ ನಂತರ, ದೇವಾಲಯವು ಜುಲೈ 1656 ರಲ್ಲಿ ಗೋಲ್ಕೊಂಡದ ಕೈಗೆ ಹೋಯಿತು. 19ನೇ ಶತಮಾನದ ಪೂರ್ವಾರ್ಧದಲ್ಲಿ ಬ್ರಿಟೀಷರು ದೇವಾಲಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದರು ಮತ್ತು ದೇವಾಲಯದ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಲಿಲ್ಲ. 1933 ರಲ್ಲಿ ಟಿಟಿಡಿ ಕಾಯಿದೆಯ ಪರಿಣಾಮವಾಗಿ ತಿರುಮಲ ತಿರುಪತಿ ದೇವಸ್ಥಾನಗಳ ರಚನೆಯಾಯಿತು.

ಇಲ್ಲಿನ ವೆಂಕಟೇಶ್ವರ ಸ್ವಾಮಿಯ ಮುಖ್ಯ ವಿಗ್ರಹವು ತುಂಬಾ ವಿಶಿಷ್ಟ ಮತ್ತು ಶಕ್ತಿಯುತವಾಗಿದೆ ಎಂದು ಹೇಳಲಾಗುತ್ತದೆ. ಆಕರ್ಷಕ ವಿಗ್ರಹವು ಹಲವಾರು ಪವಾಡದ ಲಕ್ಷಣಗಳನ್ನು ಹೊಂದಿದೆ. ಪ್ರತಿದಿನವೂ, ವಿಗ್ರಹವನ್ನು ಹೂವುಗಳಿಂದ, ಉಡುಪುಗಳಿಂದ ಮತ್ತು ಆಭರಣಗಳಿಂದಭವ್ಯವಾದ ಅಲಂಕರಿಸಲಾಗುತ್ತದೆ. ನಿತ್ಯ ವಿಶೇಷ ಪೂಜೆಗಳನ್ನು ಕೈಗೊಳ್ಳಲಾಗುತ್ತದೆ. ಇದರಿಂದಾಗಿ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯೂ ಅಧಿಕ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+