• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಿಹಿಸುದ್ದಿ: 8 ತಿಂಗಳಿನಲ್ಲೇ ಮೊದಲ ಬಾರಿಗೆ ಕೊರೊನಾವೈರಸ್ ದಾಖಲೆ!

|
Google Oneindia Kannada News

ನವದೆಹಲಿ, ಜನವರಿ.26: ಭಾರತದಲ್ಲಿ ಸಾಂಕ್ರಾಮಿಕ ಪಿಡುಗು ಕೊರೊನಾವೈರಸ್ ಸೋಂಕಿನ ಅಟ್ಟಹಾಸ ತಗ್ಗಿರುವುದು ಹೊಸ ದಾಖಲೆಯಾಗಿದೆ. ಕಳೆದ ಎಂಟು ತಿಂಗಳಿನಲ್ಲಿ ಮೊದಲ ಬಾರಿಗೆ ಅತಿ ಕಡಿಮೆ ಕೊವಿಡ್-19 ಪ್ರಕರಣಗಳು ಪತ್ತೆಯಾಗಿರುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೇವಲ 9102 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಎಂಟು ತಿಂಗಳ ನಂತರ ದೇಶದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆಯು 10 ಸಾವಿರಕ್ಕಿಂತ ಕಡಿಮೆ ದಾಖಲಾಗಿದೆ.

ಸುಮ್ನಿರಿ ಸಾರ್; ಕೊರೊನಾ ಲಸಿಕೆ ಬಗ್ಗೆ ಸುಳ್ ಹೇಳಿದ್ರೆ ಶಿಕ್ಷೆ ಪಕ್ಕಾ ಸುಮ್ನಿರಿ ಸಾರ್; ಕೊರೊನಾ ಲಸಿಕೆ ಬಗ್ಗೆ ಸುಳ್ ಹೇಳಿದ್ರೆ ಶಿಕ್ಷೆ ಪಕ್ಕಾ

ಒಂದು ದಿನದಲ್ಲಿ 117 ಮಂದಿ ಕೊವಿಡ್-19 ಸೋಂಕಿನಿಂದ ಮೃತಪಟ್ಟಿದ್ದು, ಈ ಸಂಖ್ಯೆ ಕೂಡಾ 8 ತಿಂಗಳಿನಲ್ಲಿ ಇದೇ ಮೊದಲಾಗಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,06,76,838ಕ್ಕೆ ಏರಿಕೆಯಾಗಿದ್ದು, ಮಹಾಮಾರಿಗೆ ಇದುವರೆಗೂ 1,53,587 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.


ಭಾರತದಲ್ಲಿ ಶೇ.96.90ರಷ್ಟು ಸೋಂಕಿತರು ಗುಣಮುಖ:

ಮಂಗಳವಾರದ ಅಂಕಿ-ಅಂಶಕಗಳ ಪ್ರಕಾರ, 1,06,76,838 ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ 1,03,45,985 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಶೇ.96.90ರಷ್ಟು ಸೋಂಕಿತರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದು, ಸಾವಿನ ಶೇಕಡಾವಾರು ಪ್ರಮಾಣ 1.44ರಷ್ಟಿದೆ. 1,77,266 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ.

7,25,577 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 7,25,577 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿತ್ತು. ಇದುವರೆಗೂ 19,30,62,694 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

English summary
Less Than 10,000 Daily Coronavirus Cases Reported For First Time In 7 Months In India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X