ಸರ್ಕಾರಿ ಶಾಲೆಗಳಲ್ಲಿ ಸಚಿವರ ಮಕ್ಕಳು ಓದಲಿ; ಆಗ ನೋಡಿ ಶಾಲೆಗಳ ಸ್ಥಿತಿ ಹೇಗೆ ಬದಲಾಗುತ್ತೆ: ಅಭಿಜೀತ್ ದಿಪ್ಕೆ

ನವದೆಹಲಿ: ಮಂತ್ರಿಗಳು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸಿದರೆ, ಶಾಲೆಗಳ ಸ್ಥಿತಿ ಪವಾಡಸದೃಶವಾಗಿ ಸುಧಾರಿಸುತ್ತದೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಹೇಳಿದ್ದಾರೆ. ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸಬೇಕಾದರೆ ಶಿಕ್ಷಣ ಇಲಾಖೆಯ ಸಚಿವರು, ಅಧಿಕಾರಿಗಳು ಸೇರಿದಂತೆ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲೇ ದಾಖಲಿಸಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಆಗ್ರಹಿಸಿದ್ದಾರೆ.

ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ದಿಪ್ಕೆ, "ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುವ ಸಚಿವರು, ಅಧಿಕಾರಿಗಳು, ಪ್ರಾಂಶುಪಾಲರು ಮತ್ತು ಶಿಕ್ಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು. ನಂತರ ಸರ್ಕಾರಿ ಶಾಲೆಗಳು ಎಷ್ಟು ವೇಗವಾಗಿ ಸುಧಾರಿಸುತ್ತವೆ ಎಂಬುದನ್ನು ನೋಡಿ" ಎಂದು ಹೇಳಿದ್ದಾರೆ.

Let Ministers Children Study in Government Schools Abhijeet Dipke Takes a Dig at Education System

ಸರ್ಕಾರಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ಏಕೆ ದಾಖಲಿಸುವುದಿಲ್ಲ ಎಂದು ಪ್ರಶ್ನಿಸಿರುವ ಅವರು, "ಅವರೆಲ್ಲರೂ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಏಕೆ ಕಳುಹಿಸುತ್ತಾರೆ? ತಮ್ಮದೇ ಕೆಲಸದ ಮೇಲೆ ಅವರಿಗೆ ನಂಬಿಕೆ ಇಲ್ಲವೇ?" ಎಂದು ವ್ಯಂಗ್ಯವಾಡಿದ್ದಾರೆ.

NEET-UG ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ದೆಹಲಿಯಲ್ಲಿ ನಡೆದ ಹಲವು ವಾರಗಳ ವಿದ್ಯಾರ್ಥಿ ಪ್ರತಿಭಟನೆಯನ್ನು ಇತ್ತೀಚೆಗೆ ಮುಕ್ತಾಯಗೊಳಿಸಿರುವ ದಿಪ್ಕೆ, ತಮ್ಮ CJP ಇನ್ನು ಮುಂದೆ ಒತ್ತಡ ಗುಂಪಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದ್ದರು. ಇದೀಗ ಅವರು 'ಸ್ಕೂಲ್ ಠೀಕ್ ಕರೋ' ಎಂಬ ಅಭಿಯಾನದ ಮೂಲಕ ಗ್ರಾಮೀಣ ಭಾಗಗಳ ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ಬೆಳಕಿಗೆ ತರುತ್ತಿದ್ದಾರೆ. ಆಗಸ್ಟ್ 15ರಂದು ಮಹಾರಾಷ್ಟ್ರದ ಹಿಂಗೋಳಿ ಜಿಲ್ಲೆಯ ತಮ್ಮ ಸ್ವಗ್ರಾಮ ಸಂತುಕ ಪಿಂಪ್ರಿಯ ಸರ್ಕಾರಿ ಶಾಲೆಗೆ ತೆರಳಿ ಮೊದಲ ಶಾಲಾ ಪರಿಶೀಲನೆ ನಡೆಸಿದ್ದರು.

ಈ ವೇಳೆ ಶಾಲೆಯಲ್ಲಿ ಸಮರ್ಪಕ ನೀರಿನ ವ್ಯವಸ್ಥೆ ಇಲ್ಲದಿರುವುದು, ಕುಡಿಯುವ ನೀರಿನ ಕೊರತೆ, ಬೆಂಚ್‌ಗಳ ಅಭಾವ, ಕೊಳಕು ಶೌಚಾಲಯಗಳು ಹಾಗೂ ಒಡೆದ ಕಿಟಕಿಗಳು ಸೇರಿದಂತೆ ಹಲವು ಸಮಸ್ಯೆಗಳನ್ನು ಅವರು ಪಟ್ಟಿ ಮಾಡಿದ್ದಾರೆ. ಒಂದು ಪೋಸ್ಟ್‌ನಲ್ಲಿ ಸರ್ಕಾರಿ ಶಾಲೆಯ ಒಡೆದ ಕಿಟಕಿಗಳ ವಿಡಿಯೋ ಹಂಚಿಕೊಂಡಿರುವ ದಿಪ್ಕೆ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಯ ಬ್ಯಾನರ್‌ಗಳಿಂದ ಒಡೆದ ಕಿಟಕಿಗಳನ್ನು ಮುಚ್ಚಲಾಗಿದೆ ಎಂದು ಆರೋಪಿಸಿದ್ದಾರೆ. ಮತ್ತೊಂದು ವಿಡಿಯೋದಲ್ಲಿ ಮುಚ್ಚಿಹೋಗಿದ್ದ ಶೌಚಾಲಯಗಳ ಸ್ಥಿತಿಯನ್ನೂ ತೋರಿಸಿದ್ದಾರೆ.

ದೇಶಾದ್ಯಂತ ಸರ್ಕಾರಿ ಶಾಲೆಗಳ ಸಮೀಕ್ಷೆ

ಚೆಕ್‌ಲಿಸ್ಟ್ ಆಧಾರಿತ ಫಾರ್ಮ್ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳ ಸ್ಥಿತಿ, ಕುಡಿಯುವ ನೀರು, ಶೌಚಾಲಯ, ತರಗತಿ ಕೊಠಡಿಗಳು ಸೇರಿದಂತೆ ಅಗತ್ಯ ಸೌಲಭ್ಯಗಳಿವೆಯೇ ಎಂಬುದನ್ನು ದಾಖಲಿಸಲಾಗುವುದು ಎಂದು ದಿಪ್ಕೆ ಹೇಳಿದ್ದಾರೆ. ಮಹಾರಾಷ್ಟ್ರದ ವಿವಿಧ ಶಾಲೆಗಳ ಜೊತೆಗೆ ದೇಶದ ಇತರ ಭಾಗಗಳ ಸರ್ಕಾರಿ ಶಾಲೆಗಳ ಮಾಹಿತಿಯನ್ನೂ ಸಂಗ್ರಹಿಸಿ, ಬಳಿಕ ಅವುಗಳನ್ನು ವಿಶ್ಲೇಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ತಮ್ಮ ವಿದ್ಯಾರ್ಹತೆ ಬಗ್ಗೆ ಸ್ಪಷ್ಟನೆ

ಶಿಕ್ಷಣ ಮತ್ತು ಪರೀಕ್ಷಾ ಸುಧಾರಣೆ ವಿಚಾರವಾಗಿ ಸರ್ಕಾರವನ್ನು ಟೀಕಿಸುತ್ತಿರುವ ದಿಪ್ಕೆ, ತಮ್ಮ ವಿದ್ಯಾರ್ಹತೆಯನ್ನು ಪ್ರಶ್ನಿಸುತ್ತಿರುವವರಿಗೂ ಪ್ರತಿಕ್ರಿಯಿಸಿದ್ದಾರೆ. ತಾವು ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿರುವುದಕ್ಕೆ ಸಂಬಂಧಿಸಿದ ಪದವಿ ಪ್ರಮಾಣಪತ್ರ ಹಾಗೂ ದಾಖಲೆಗಳನ್ನು ತೋರಿಸಲು ಸಿದ್ಧ ಎಂದು ಅವರು ಹೇಳಿದ್ದಾರೆ. ಬೋಸ್ಟನ್ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಯಾಗಿರುವುದಕ್ಕೆ ಸಂಬಂಧಿಸಿದಂತೆ ಆ ಸಂಸ್ಥೆಯೇ ತಮ್ಮ ಬಗ್ಗೆ ಲೇಖನ ಪ್ರಕಟಿಸಿದೆ ಎಂದೂ ದಿಪ್ಕೆ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+