ಜಮ್ಮು-ಕಾಶ್ಮೀರ: ಲಷ್ಕರ್-ಇ-ತೊಯ್ಬಾ ಉಗ್ರನ ಬಂಧನ
ಶ್ರೀನಗರ, ಜುಲೈ 26 : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕ ಸಿಕ್ಕಿಬಿದ್ದಿದ್ದಾನೆ.
ಸೊಪೋರ್ ನಲ್ಲಿರುವ ಮನೆಯೊಂದರಲ್ಲಿ ಭಯೋತ್ಪಾದಕ ಬಸಿತ್ ನಝರ್ ಅಡಗಿ ಕುಳಿತಿರುವ ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸಿಆರ್ ಪಿಎಫ್, ರಾಷ್ಟ್ರೀಯ ರೈಫಲ್ಸ್ ಮತ್ತು ವಿಶೇಷ ಕಾರ್ಯಾಚರಣಾ ದಳ ಜಂಟಿಯಾಗಿ ಕಾರ್ಯಾಚರಣೆಗಿಳಿದಿತ್ತು. ಕಾರ್ಯಾಚರಣೆ ವೇಳೆ ಬಸಿತ್ ನನ್ನು ಬಂಧನಕ್ಕೊಳಪಡಿಸುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆಂದು ವರದಿಗಳು ತಿಳಿಸಿವೆ.

ಆರೋಪಿಯಿಂದ ಶಸ್ತ್ರಾಸ್ತ್ರಗಳು, ಪಿಸ್ತೂಲ್ ಹಾಗೂ ಸ್ಫೋಟಕ ವಸ್ತುಗಳನ್ನು ಸೇನಾಪಡೆ ವಶಕ್ಕೆ ಪಡೆದುಕೊಂಡಿದೆ.












Click it and Unblock the Notifications