ಕರ್ನಾಟಕಕ್ಕೆ ಬರಲಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಕರೆ

ಲಕ್ನೋ, ಏಪ್ರಿಲ್‌ 25: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಕರೆಯೊಂದು ಬಂದಿದೆ. ಈ ಹಿನ್ನೆಲೆಯಲ್ಲಿ ಲಕ್ನೋದಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ತುರ್ತು ಸೇವೆಗಳಿಗಾಗಿ ಪ್ರಾರಂಭಿಸಿರುವ ಸಂಖ್ಯೆ ಡಯಲ್ 112 ಸಂದೇಶದ ಮೂಲಕ ಬೆದರಿಕೆ ಕರೆ ಬಂದಿದೆ. ಅದರಲ್ಲಿ ವ್ಯಕ್ತಿಯೊಬ್ಬ ನಾನು ಸಿಎಂ ಯೋಗಿಯನ್ನು ಶೀಘ್ರದಲ್ಲೇ ಕೊಲ್ಲುತ್ತೇನೆ ಎಂದು ಆತ ಹೇಳಿದ್ದಾನೆ. ಬೆದರಿಕೆ ಬಂದ ನಂತರ, '112' ನ ಆಪರೇಷನ್ ಕಮಾಂಡರ್ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 Life threat call to Uttar Pradesh CM Yogi Adityanath

ಈ ಸಂಬಂಧ ಅಪರಿಚಿತ ಮೇಲೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 506, 507 ಮತ್ತು ಐಟಿ ಕಾಯ್ದೆ 66 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ 'ಡಯಲ್ 112' ಗೆ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪಿಎಸ್ ಸುಶಾಂತ್ ಗಾಲ್ಫ್ ಸಿಟಿಯಲ್ಲಿ 506 ಮತ್ತು 507 ಐಪಿಸಿ ಮತ್ತು 66 ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 24ರಂದು ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ. ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರವಷ್ಟೇ ಕೇರಳ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಕಳೆದ ವಾರ ಪತ್ರವೊಂದು ಬಂದಿತ್ತು ಎಂದು ಹೇಳಿದ್ದರು.

ಈ ಬಗ್ಗೆ ಮಾತನಾಡಿದ್ದ ಕೊಚ್ಚಿ ನಗರ ಪೊಲೀಸ್ ಕಮಿಷನರ್ ಕೆ.ಸೇತು ರಾಮನ್, 'ಪ್ರಧಾನಿ ವಿರುದ್ಧ ಬೆದರಿಕೆ ಪತ್ರ ಕಳುಹಿಸಿದ ಕ್ಸೇವಿಯರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ವೈಯಕ್ತಿಕ ದ್ವೇಷದಿಂದ ಪತ್ರ ಬರೆದಿದ್ದಾರೆ. ನಾವು ವಿಧಿವಿಜ್ಞಾನದ ಸಹಾಯದಿಂದ ಅವನನ್ನು ಪತ್ತೆಹಚ್ಚಿದೆವು ಎಂದರು.

ಕೊಚ್ಚಿಗೆ ಆಗಮಿಸುವ ಪ್ರಧಾನಿಗೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಇದಕ್ಕಾಗಿ 2060 ಪೊಲೀಸರನ್ನು ನೇಮಿಸಲಾಗಿದೆ. ಇದರ ಭಾಗವಾಗಿ ಮಧ್ಯಾಹ್ನ 2 ಗಂಟೆಯಿಂದ ಸಂಚಾರ ನಿಯಂತ್ರಣವನ್ನೂ ಹೇರಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+