ಮುಕೇಶ್ ಅಂಬಾನಿಗೆ ಮತ್ತೆ ಜೀವ ಬೆದರಿಕೆ ಇಮೇಲ್: 400 ಕೋಟಿಗೆ ಡಿಮ್ಯಾಂಡ್
ನವದೆಹಲಿ, ನವೆಂಬರ್ 4: ದೇಶದ ಶ್ರೀಮಂತ ವ್ಯಕ್ತಿ, ಉದ್ಯಮಿ ಮುಕೇಶ್ ಅಂಬಾನಿಗೆ ಮತ್ತೆ ಎರಡು ಜೀವ ಬೆದರಿಕೆ ಇಮೇಲ್‌ಗಳು ಬಂದಿದೆ. ಈ ಬಾರಿ ಅವರಿಗೆ 400 ಕೋಟಿ ರೂಪಾಯಿ ನೀಡುವಂತೆ ಧಮ್ಕಿ ಹಾಕಲಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಹೊಸ ಬೆದರಿಕೆ ಇಮೇಲ್‌ಗಳು ಬಂದಿದ್ದು, ಇದರಲ್ಲಿ 400 ಕೋಟಿ ರೂಪಾಯಿಗಳ ಬೇಡಿಕೆ ಇಡಲಾಗಿದೆ. ಈ ಇಮೇಲ್‌ಗಳನ್ನು ನಿರ್ಲಕ್ಷಿಸಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಪೊಲೀಸರ ಪ್ರಕಾರ, ಹಿಂದೆ ಅಕ್ಟೋಬರ್ 31 ಮತ್ತು ನವೆಂಬರ್ ನಡುವೆ ಎರಡು ಬೆದರಿಕೆ ಇಮೇಲ್‌ಗಳು ಬಂದಿವೆ ಮತ್ತು ಕಳುಹಿಸಿದವನು ತನ್ನನ್ನು ಶಾದಾಬ್ ಖಾನ್ ಎಂದು ಪರಿಚಯಿಸಿಕೊಂಡಿದ್ದನು ಎಂದು ತಿಳಿಸಿದ್ದಾರೆ.

"ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರಿಗೆ ಅಕ್ಟೋಬರ್ 31 ಮತ್ತು ನವೆಂಬರ್ 1 ರ ನಡುವೆ ಮತ್ತೊಮ್ಮೆ ಎರಡು ಬೆದರಿಕೆ ಇಮೇಲ್‌ಗಳು ಬಂದಿವೆ. ಹಿಂದಿನ ಇಮೇಲ್‌ಗಳನ್ನು ನಿರ್ಲಕ್ಷಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ. ಅದರಲ್ಲಿ ವ್ಯಕ್ತಿ (ಮೇಲ್ ಕಳುಹಿಸುವವರು) ರೂ 400 ಕೋಟಿಗೆ ಬೇಡಿಕೆಯಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿಂದೆ ಅಂಬಾನಿ ಅವರಿಗೆ ಇಮೇಲ್ ಮೂಲಕ 200 ಕೋಟಿ ರೂಪಾಯಿ ನೀಡಲು ವಿಫಲವಾದರೆ ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಪ್ರತಿ ಬಾರಿ ಹೊಸ ಇಮೇಲ್ ಕಳುಹಿಸಿದಾಗ 200 ಕೋಟಿ ಮತ್ತು 400 ಕೋಟಿ ರೂ. ಕೊಡುವಂತೆ ಬೆದರಿಕೆ ಹಾಕಲಾಗುತ್ತಿದೆ. ಕಳುಹಿಸುವವರು ಹಿಂದಿನ ಇಮೇಲ್‌ಗೆ ಪ್ರತಿಕ್ರಿಯೆ ನೀಡಿದ್ದು, ಹಣದ ಮೊತ್ತ ಹೆಚ್ಚಿಸಿದ್ದಾರೆ. ಅಕ್ಟೋಬರ್ 28 ರಂದು ಮೊದಲ ಬೆದರಿಕೆ ಮೇಲ್ ಕಳುಹಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.
ಇಮೇಲ್ ಸ್ವೀಕರಿಸಿದ ನಂತರ, ಮುಖೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ದೂರಿನ ಆಧಾರದ ಮೇಲೆ ಮುಂಬೈನ ಗಾಮ್‌ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 387 ರ ಅಡಿಯಲ್ಲಿ (ಒಬ್ಬ ವ್ಯಕ್ತಿಯನ್ನು ಸಾವಿನ ಭಯ ಅಥವಾ ಸುಲಿಗೆ ಮಾಡುವ ಸಲುವಾಗಿ ತೀವ್ರವಾಗಿ ಗಾಯಗೊಳಿಸುವುದು) ಮತ್ತು ಭಾರತೀಯ ದಂಡ ಸಂಹಿತೆಯ (IPC) 506 (2) (ಕ್ರಿಮಿನಲ್ ಬೆದರಿಕೆ) ಪ್ರಕರಣವನ್ನು ದಾಖಲಿಸಿದ್ದಾರೆ












Click it and Unblock the Notifications