ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

24 ಗಂಟೆಗಳಲ್ಲಿ ಕೇರಳ, ತಮಿಳುನಾಡಿನಲ್ಲಿ ಮಳೆಯ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 13: ಮುಂದಿನ 24 ಗಂಟೆಗಳಲ್ಲಿ ಕೇರಳ ಹಾಗೂ ತಮಿಳುನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ವೆದರ್ ವರದಿ ಮಾಡಿದೆ.

ದಿನದಿಂದ ದಿನಕ್ಕೆ ಉಷ್ಣಾಂಶದಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಉಷ್ಣಾಂಶವು ಕೇರಳ ಹಾಗೂ ತಮಿಳುನಾಡಿನ ಕೆಲವು ಭಾಗಗಳಲ್ಲಿ 4-5 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಿದೆ. ಇದೀಗ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ತಲುಪಿದೆ.

ಅತಿ ಹೆಚ್ಚು ಚಳಿ ಇರುವ ದೇಶದ 10 ಪ್ರದೇಶಗಳುಅತಿ ಹೆಚ್ಚು ಚಳಿ ಇರುವ ದೇಶದ 10 ಪ್ರದೇಶಗಳು

ಮುಂದಿನ ಒಂದು ವಾರ ಇದೇ ವಾತಾವರಣ ಮುಂದುವರೆಯಲಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ ಬಿಸಿಲ ಬೇಗೆ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ.

Light Rain Likely In Some Parts Of Kerala And Tamil Nadu

ತಮಿಳುನಾಡಿನಲ್ಲಿ ಜನವರಿ ಮೊದಲ ವಾರದಲ್ಲಿ ಉತ್ತಮ ಮಳೆಯಾಗಿತ್ತು. ಎರಡನೇ ವಾರ ಉರಿ ಬಿಸಿಲು ಮುಂದುವರೆದಿತ್ತು. ರಾಜ್ಯದಲ್ಲಿ 8.7 ಮಿ.ಮೀ ಮಳೆಯಾಗಿದೆ . ಜನವರಿ 1ರಿಂದ ಫೆಬ್ರವರಿ 11 ವರೆಗೆ 19.5 ಮಿ.ಮೀನಷ್ಟು ಮಳೆಯಾಗಿತ್ತು.

ಬೆಂಗಳೂರು ನಗರದಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18.6 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 29.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17.9 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 29.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
The temperatures have been settling above normal by 3-4 degrees Celsius in parts of Kerala and Tamil Nadu for the past few days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X