ಮೆಟ್ರೋ, ರೈಲ್ವೆ ನಿಲ್ದಾಣಗಳಲ್ಲೇ ಎಣ್ಣೆ ಮಾರಾಟಕ್ಕೆ ಅವಕಾಶ: ಈ ರಾಜ್ಯದ ಸಿಎಂ ವಿರುದ್ಧ ಭುಗಿಲೆದ್ದ ಆಕ್ರೋಶ
ಲಖನೌ, ಡಿಸೆಂಬರ್, 21: ಮೆಟ್ರೋ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳು ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಇದರ ವಿರುದ್ಧ ವಾಗ್ದಾಳಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
ಅಪರಾಧ ಕೃತ್ಯಗಳು ಮತ್ತು ಮದ್ಯ ಸೇವನೆ ನಡುವೆ ಆಳವಾದ ಸಂಬಂಧ ಇದೆ. ಮದ್ಯ ಸೇವನೆಯು ತುಂಬ ಒಳ್ಳೆಯದು ಎಂದು ಆಡಳಿತರೂಢ ಬಿಜೆಪಿ ನಂಬಿದ್ದರೆ, ಅದು ತನ್ನ ಪಕ್ಷದ ಕಚೇರಿಗಳಲ್ಲಿ ಮದ್ಯ ಮಾರಾಟ ಆರಂಭಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದಿದ್ದ ಸಂಪುಟ ಸಭೆಯಲ್ಲಿ, ವಿಮಾನ ನಿಲ್ದಾಣಗಳು, ಮೆಟ್ರೋ ರೈಲು ನಿಲ್ದಾಣಗಳು ಮತ್ತು ಕ್ರೂಸ್ ಹಡಗುಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಅಬಕಾರಿ ನೀತಿಗೆ (2024-25) ಒಪ್ಪಿಗೆ ನೀಡಲಾಗಿತ್ತು.

ಮೆಟ್ರೋ, ರೈಲ್ವೆ ನಿಲ್ದಾಣಗಳು ಮತ್ತು ಕ್ರೂಸ್ ಹಡಗುಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಮೂಲಕ ಉತ್ತರ ಪ್ರದೇಶ ಸರ್ಕಾರ 1 ಟ್ರಿಲಿಯನ್ ಡಾಲರ್ ಆರ್ಥಿಕತೆ ರಚಿಸಲು ಉದ್ದೇಶಿದೆಯೇ ಎಂದು ಅಖಿಲೇಶ್ ಯಾದವ್ ತಮ್ಮ ಟ್ವೀಟ್ ಮೂಲಕ ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಟ್ಯಾಂತರ ರೂಪಾಯಿ ಹೂಡಿಕೆಯ ಆರೋಪಗಳೆಲ್ಲವೂ ಸುಳ್ಳಾಗಿದೆ. ಇದಕ್ಕಾಗಿಯೇ ಸರ್ಕಾರ ಆದಾಯಗಳಿಸಲು ಅನೈತಿಕ ಮಾರ್ಗ ಅನುಸರಿಸುತ್ತಿದೆ ಎಂದೆನಿಸುತ್ತಿದೆ. ಇಂದು ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ, ನಾಳೆ ಇತರ ಅಮಲು ಪದಾರ್ಥಗಳನ್ನು ಸಾರ್ವಜನಿಕ ಸ್ಥಳಗಳನ್ನು ಮಾರಾಟ ಮಾಡಲೂ ಅವಕಾಶ ನೀಡಬಹುದು ಎಂದು ಆರೋಪ ಮಾಡುವ ಮೂಳಕ ಕಿಡಿಕಾರಿದರು.












Click it and Unblock the Notifications