Liquor sales banned: ನಾಲ್ಕು ದಿನ ಮದ್ಯ ಮಾರಾಟ ನಿಷೇಧ: ಎಲ್ಲಿ, ಯಾಕೆ ಇಲ್ಲಿದೆ ಮಾಹಿತಿ!
ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಹಾಗೂ ಮತದಾನ ಪ್ರಕ್ರಿಯೆ ಮುಗಿದಿದೆ. ಇದೀಗ ಚುನಾವಣೆ ಫಲಿತಾಂಶ ಪ್ರಕಟವಾಗುವುದೊಂದೇ ಬಾಕಿ ಇದೆ. ಚುನಾವಣೆಯ ಫಲಿತಾಂಶ ಏನಾಗುತ್ತೋ ಎನ್ನುವ ಆತಂಕದಲ್ಲಿ ಇದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿತ್ತು. ಇದೀಗ ಮತ್ತೆ ನಾಲ್ಕು ದಿನ ಮದ್ಯ ಮಾರಾಟ ನಿಷೇಧವಾಗುವ ಸುದ್ದಿ ಬಂದಿದೆ. ಮದ್ಯ ಪ್ರಿಯರು ಟೆಂಕ್ಷನ್ ಆಗ್ಬೇಕಿಲ್ಲ. ಮದ್ಯ ಮಾರಾಟ ನಿಷೇಧ ನಮ್ಮಲ್ಲಿ ಅಲ್ಲ!. ಹೌದು ಮಹಾರಾಷ್ಟ್ರ ಚುನಾವಣೆಯಲ್ಲಿ ನಾಲ್ಕು ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಇದೇ 20ರಂದು ಒಂದೇ ಹಂತದಲ್ಲಿ 288 ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗುತ್ತಿದೆ. ಮಹಾರಾಷ್ಟ್ರ ರಾಜಧಾನಿ ಹಾಗೂ ದೇಶದ ಆರ್ಥಿಕ ಖಜಾನೆ ಅಂತಲೇ ಕರೆಯುವ ಮುಂಬೈನಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಮಹಾರಾಷ್ಟ್ರ ಚುನಾವಣೆ ಸುಗಮವಾಗಿ ನಡೆಸುವ ಉದ್ದೇಶದಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದ ವಿವಿಧ ಪ್ರಮುಖ ನಗರಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ. ಸಾಮಾನ್ಯವಾಗಿ ಮದ್ಯ ಮಾರಾಟ ನಿಷೇಧ ದಿನವನ್ನು ಡ್ರೈ ಡೇ ಎನ್ನಲಾಗುತ್ತದೆ. ಚುನಾವಣೆ ನಡೆಯುವ ದಿನ ಹಾಗೂ ಮತ ಎಣಿಕೆಯ ದಿನ ಹಾಗೂ ವಿವಿಧ ಧಾರ್ಮಿಕ ಸಮಾರಂಭಗಳು ನಡೆಯುವ ಸಂದರ್ಭದಲ್ಲಿ ಮದ್ಯ ಮಾರಾಟ ನಿಷೇಧ ಮಾಡುವುದು ಇದೆ.
ಚುನಾವಣೆ ನಡೆಯುವಾಗ ಯಾವುದೇ ಗೊಂದಲ ಸೃಷ್ಟಿಯಾಗಬಾರದು ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಅಡಚಣೆಯಾಗಬಾರದು ಎನ್ನುವುದು ಇದರ ಉದ್ದೇಶವಾಗಿದೆ. ಇನ್ನು ಕಾರ್ತಿಕ ಏಕಾದಶಿ ಹಿನ್ನೆಲೆಯಲ್ಲಿ ನವೆಂಬರ್ 12ರಂದು ಸಹ ಮಹಾರಾಷ್ಟ್ರದ ಮುಂಬೈ ಥಾಣೆ ಮತ್ತು ಪುಣೆ ಸೇರಿದಂತೆ ವಿವಿಧ ನಗರಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿತ್ತು.
ನಾಲ್ಕು ದಿನ ಮದ್ಯ ಮಾರಾಟ ನಿಷೇಧ: ಇನ್ನು ಮಹಾರಾಷ್ಟ್ರದಲ್ಲಿ ನಾಳೆಯಿಂದ ಅಂದರೆ ನವೆಂಬರ್ 18ರಿಂದ ನಾಲ್ಕು ದಿನಗಳ ಕಾಲ ನವೆಂಬರ್ 23ರ ವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ನವೆಂಬರ್ 18ರ ಸಂಜೆ 6 ಗಂಟೆಯಿಂದ ಮದ್ಯ ಮಾರಾಟ ಬಂದ್ ಆಗಲಿದೆ. ನವೆಂಬರ್ 20ಕ್ಕೆ ವಿಧಾನಸಭೆ ಚುನಾವಣೆ ನಡೆಯಲಿದೆ. ನವೆಂಬರ್ 23ಕ್ಕೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಭಾರತೀಯ ಚುನಾವಣೆ ಆಯೋಗ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ - 2024ರ ಫಲಿತಾಂಶವನ್ನು ಪ್ರಕಟಿಸುವ ವರೆಗೂ ಮದ್ಯ ಮಾರಾಟ ನಿಷೇಧ ಇರಲಿದೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಜಿದ್ದಾಜಿದ್ದಿನ ಕಣ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಈ ಬಾರಿ ಚಕ್ರವ್ಯೂಹದಂತಿದ್ದು. ಜಿದ್ದಾಜಿದ್ದಿನ ಕಣವಾಗಿ ಬದಲಾಗಿದೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಈ ಬಾರಿ ದೊಡ್ಡ ಪಕ್ಷಗಳಿಗಿಂತಲೂ ಸಣ್ಣ ಪಕ್ಷಗಳ ಹವಾ ದೊಡ್ಡ ಮಟ್ಟದಲ್ಲಿ ಇದೆ. 10ಕ್ಕೂ ಹೆಚ್ಚು ಸಣ್ಣ ಪಕ್ಷಗಳು ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಬಲ ಪೈಪೋಟಿಯನ್ನು ನೀಡುತ್ತಿವೆ. ಅಲ್ಲದೇ ಮೊದಲ ಬಾರಿ ಪಕ್ಷ ವಿಭಜನೆಯ ನಂತರ ಮತದಾರರ ಮುಂದೆ ಹೋಗುತ್ತಿವೆ. ಹೀಗಾಗಿ, ಈ ಬಾರಿ ಹೈಡ್ರಾಮಾಗೆ ಜನ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎನ್ನುವ ಕುತೂಹಲ ಈಗ ಹೆಚ್ಚಾಗಿದೆ.












Click it and Unblock the Notifications