ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

List of BJP ruled states in India in 2022; ದೇಶದಲ್ಲಿ ಬಿಜೆಪಿ ಆಡಳಿತದ ರಾಜ್ಯಗಳ ಪಟ್ಟಿ ಇಲ್ಲಿವೆ

|
Google Oneindia Kannada News

ನವದೆಹಲಿ, ಡಿ. 08: ಗುರುವಾರ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೆ ಬಿಜೆಪಿ ಭಾರತೀಯ ರಾಜಕೀಯದಲ್ಲಿ ಪ್ರಬಲ ಶಕ್ತಿಯಾಗಿ ಮುಂದುವರೆದಿದೆ. ಹಾಗಾದರೆ ದೇಶದಲ್ಲಿ ಯಾವ್ಯಾವ ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ ಎಂಬ ಬಗ್ಗೆ ಈ ವರದಿಯಲ್ಲಿ ತಿಳಿಯೋಣ.

ಪ್ರಸ್ತುತ ದೇಶದಲ್ಲಿ ಬಿಜೆಪಿ ಸ್ವತಂತ್ರವಾಗಿ ಮತ್ತು ಸಮ್ಮಿಶ್ರ ಸರ್ಕಾರ ರಚಿಸಿ ಹಲವು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ. ಗುಜರಾತ್ ರಾಜ್ಯದಲ್ಲಿ ಅಭೂತಪೂರ್ವ ಜಯ ಗಳಿಸಿದ್ದು, ಹಿಮಾಚಲ ಪ್ರದೇಶದಲ್ಲಿ ಸೋಲು ಕಂಡಿದೆ. ಆದರೂ ಬಿಜೆಪಿ ದೇಶದಲ್ಲಿ ಪ್ರಬಲ ರಾಜಕೀಯ ಪಕ್ಷವಾಗಿ ಮುಂದುವರೆಯುತ್ತಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಸಂಖ್ಯೆ ಎಷ್ಟು ಎಂಬುದನ್ನು ಇಲ್ಲಿ ಗಮನಿಸಬಹುದು.

ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳುಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳು

17 ರಾಜ್ಯಗಳಲ್ಲಿ ಪ್ರಸ್ತುತ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಅಧಿಕಾರ ನಡೆಸುತ್ತಿವೆ. ಅವುಗಳೆಂದರೆ, ಅರುಣಾಚಲ ಪ್ರದೇಶ, ಅಸ್ಸಾಂ, ಗೋವಾ, ಗುಜರಾತ್, ಹರ್ಯಾಣ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪಾಂಡಿಚೇರಿ, ತ್ರಿಪುರಾ, ಸಿಕ್ಕಿಂ, ಉತ್ತರ ಪ್ರದೇಶ, ಉತ್ತರಖಾಂಡಗಳಲ್ಲಿ ಬಿಜೆಪಿ ಮತ್ತು ಬಿಜೆಪಿ ಪ್ರತಿಪಕ್ಷಗಳು ಅಧಿಕಾರದಲ್ಲಿವೆ.

List of BJP ruled states in India in 2022 after Gujarat And HP Election Results 2022

ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಮೈತ್ರಿಯ ಮಹಾಘಟಬಂಧನ್ ಸಮ್ಮಿಶ್ರ ಸರ್ಕಾರವನ್ನು ಶಿವಸೇನೆಯ ಬಂಡಾಯ ಸಚಿವರು ಉರುಳಿಸಿದ್ದರು. ಬಳಿಕ ಬಿಜೆಪಿ ಜೊತೆಗೆ ಸೇರಿ ಶಿವಸೇನೆಯ ಬಂಡಾಯಗಾರರು ಸರ್ಕಾರ ರಚಿಸಿದ್ದಾರೆ.

ಇತ್ತ, ಬಿಹಾರದಲ್ಲಿ ಜೆಡಿಯು ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು. ಆದರೆ, ಬಿಹಾರ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್ ಆರ್‌ಜೆಡಿ ಜೊತೆಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದಾರೆ.. ಹೀಗಾಗಿ ಇಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ.

List of BJP ruled states in India in 2022 after Gujarat And HP Election Results 2022

2022ರ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ಚುನಾವಣೆಯಲ್ಲಿ ಜಯ ಸಾಧಿಸಿದೆ.

English summary
List of BJP ruled states in India in 2022 after Gujarat And HP Election Results 2022. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X