ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ 2.0 ಪ್ರಮಾಣ ವಚನ ಸಮಾರಂಭಕ್ಕೆ ಗೈರಾದವರು ಯಾರು?

|
Google Oneindia Kannada News

Recommended Video

ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರಾದವರು ಯಾರ್ ಯಾರು? | Oneindia Kannada

ನವದೆಹಲಿ, ಮೇ 31: ಲೋಕಸಭೆ ಚುನಾವಣೆ 2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅದ್ಭುತ ಪ್ರದರ್ಶನದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. ಮೋದಿ ಅವರು ಪ್ರಧಾನಿಯಾಗಿ ಗುರುವಾರ(ಮೇ 30)ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿ, ಹೊಸ ಸರ್ಕಾರ ಸ್ಥಾಪಿಸಿದರು

ಮೇ 30ರಂದು ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್ ನಲ್ಲಿ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಬಾರಿ 8 ಸಾವಿರಕ್ಕೂ ಹೆಚ್ಚು ಆಹ್ವಾನಿತ ಅತಿಥಿಗಳು ಭಾಗವಹಿಸಲಿದ್ದಾರೆ.

2014ರಲ್ಲಿ ನರೇಂದ್ರ ಮೋದಿ ಪ್ರಮಾಣ ವಚನ ಹೇಗಿತ್ತು? 2019ರಲ್ಲಿ ಹೇಗಾಯಿತು? 2014ರಲ್ಲಿ ನರೇಂದ್ರ ಮೋದಿ ಪ್ರಮಾಣ ವಚನ ಹೇಗಿತ್ತು? 2019ರಲ್ಲಿ ಹೇಗಾಯಿತು?

ಹಲವು ರಾಜ್ಯಗಳ ಮುಖ್ಯಮಂತ್ರಿಗಲು, ಮಾಜಿ ಪ್ರಧಾನಿ, ಸಾಂವಿಧಾನಿಕ ಸಂಸ್ಥೆಗಳ ಅಧಿಕಾರಿಗಳು, ರಾಜತಾಂತ್ರಿಕರು, ಹಿರಿಯ ರಾಜಕೀಯ ನಾಯಕರು, ಕಲಾವಿದರು, ಕ್ರೀಡಾಪಟುಗಳು, ಮಾಧ್ಯಮದವರು, ಸ್ವಾಮೀಜಿಗಳು ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.

List of leaders who are not attending Modis swearing-in

ಕಳೆದ ಬಾರಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಮಾಣ ವಚನ ಬೋಧಿಸಿದ್ದರು. ನಾಲ್ಕು ಸಾವಿರ ಮಂದಿ ಆಹ್ವಾನಿತರು ಆಗಮಿಸಿದ್ದರು, ಕೆಲವರಿಗೆ ಅನಿವಾರ್ಯದಿಂದ ಗೈರಾಗಿದ್ದರೆ, ಮತ್ತೆ ಕೆಲವರು ನಿರೀಕ್ಷಿತವಾಗಿ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.

2014ರಲ್ಲಿ ಸಿದ್ದರಾಮಯ್ಯ, ಜಯಲಲಿತಾ, ಮಮತಾ ಬ್ಯಾನರ್ಜಿ ಅವರು ಗೈರು ಹಾಜರಾಗಿದ್ದರು. ಜೆ ಜಯಲಲಿತಾ ಅವರು ನಿಧನರಾಗಿದ್ದಾರೆ, ಮಾಜಿ ಸಿಎಂ ಆಗಿರುವ ಸಿದ್ದರಾಮಯ್ಯ, ಪಶ್ಚಿಮ ಬಂಗಾಳ ಸಿಎಂ ಮಮತಾ ಈ ಸಲ ಕೂಡಾ ಗೈರು ಹಾಜರಾಗಿದ್ದಾರೆ.

ಮೋದಿ ಸರ್ಕಾರ್ 2 : ಕೇಂದ್ರ ಸಚಿವ ಸಂಪುಟದ ನೂತನ ಸದಸ್ಯರು ಮೋದಿ ಸರ್ಕಾರ್ 2 : ಕೇಂದ್ರ ಸಚಿವ ಸಂಪುಟದ ನೂತನ ಸದಸ್ಯರು

* ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ.
* ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ.
* ತೆಲಂಗಾಣದ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್.
* ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ.
* ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್.
* ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್.
* ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್.
* ಪಂಜಾಬ್ ಮುಖ್ಯಮಂತ್ರಿ ಕ್ಯಾ. ಅಮರೀಂದರ್ ಸಿಂಗ್.
* ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಭಘೇಲ್.
* ಮಿಜೋರಾಂ ಮುಖ್ಯಮಂತ್ರಿ ಜೂಮರ್ ತಾಂಗ.

English summary
Capping a landslide election victory, Modi will take oath along with his new council of ministers at 7 pm. Prominent personalities from the world of politics, entertainment and sports, among others are expected to attend the ceremony. However, there are some leaders who have decided to give the event a miss.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X