Get Updates
Get notified of breaking news, exclusive insights, and must-see stories!

Bharat Ratna to LK Advani: ಎಲ್‌ಕೆ ಅಡ್ವಾಣಿಗೆ ಭಾರತ ರತ್ನ ಘೋಷಣೆ: ಪ್ರಧಾನಿ ಮೋದಿ ಟ್ವೀಟ್

ನವದೆಹಲಿ ಫೆಬ್ರವರಿ 3: ಭಾರತೀಯ ಜನತಾ ಪಕ್ಷದ ಧೀಮಂತ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕಿಶನ್ ಅಡ್ವಾಣಿ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ. ಇದನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಬಹಿರಂಗಪಡಿಸಿದ್ದಾರೆ.

ಎಲ್‌.ಕೆ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ದೇಶದ ಅಭಿವೃದ್ಧಿಗೆ ಎಲ್‌.ಕೆ ಅಡ್ವಾಣಿ ಅವರ ಕೊಡುಗೆ ಅಪಾರ ಎಂದು ಮೋದಿ ಅವರು ಟ್ವಿಟ್ಟರ್‌ನಲ್ಲಿ ಬರೆದಿದ್ದಾರೆ. ಜೊತೆಗೆ ಅಡ್ವಾಣಿ ಕೊಡುಗೆಯನ್ನು ಮೋದಿ ಅವರು ಶ್ಲಾಘಿಸಿದ್ದಾರೆ. ಈ ವಿಷಯ ಹಂಚಿಕೊಳ್ಳಲು ನನಗೆ ಖುಷಿ ಆಗಿದೆ. ಅವರೊಂದಿಗೆ ಅಭಿನಂದನೆ ಹಂಚಿಕೊಂಡಿದ್ದೇನೆ ಎಂದು ಮೋದಿ ಅವರು ಬರೆದಿದ್ದಾರೆ.

ದೇಶದ ರಾಜಕಾರಣದಲ್ಲಿ ಅಡ್ವಾಣಿ ಅವರ ಪ್ರಭಾವ ಸಾಕಷ್ಟಿದೆ ಎಂದು ಮೋದಿ ಹೇಳಿದ್ದಾರೆ. ಭಾರತದ ಅಭಿವೃದ್ಧಿಗೆ ಅಡ್ವಾಣಿ ಅವರ ಕೊಡುಗೆ ಸ್ಮರಣಿಯವಾದದ್ದು, ಅಡ್ವಾಣಿ ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

LK Advani Ji will be conferred the Bharat Ratna- PM Modi Tweet

''ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮಾರಕವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು. ಅವರು ನಮ್ಮ ಗೃಹ ಮಂತ್ರಿ ಮತ್ತು I&B ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ'' ಎಂದು ಪ್ರಧಾನಿ ಮೋದಿ ಅವರು ತಮ್ಮ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ಅಡ್ವಾಣಿ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು. ದೇಶದ ಅಭಿವೃದ್ಧಿಗೆ ಅಡ್ವಾಣಿ ನೀಡಿದ ಕೊಡುಗೆ ಸ್ಮರಣೀಯ ಎಂದು ಮೋದಿ ಶ್ಲಾಘಿಸಿದರು. ಅತ್ಯಂತ ಕೆಳಹಂತದಿಂದ ಬೆಳೆದು ದೇಶದ ಉಪಪ್ರಧಾನಿಯಾಗಿ ದೇಶಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ ಎಂದರು.

ಇಲ್ಲಿಯವರೆಗೆ ಕೇಂದ್ರ ಸರ್ಕಾರವು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಿದೆ. ಇದೀಗ ಈ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಅಡ್ವಾಣಿ ಅವರ ಹೆಸರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿಯ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರಿಗೂ ಈ ಪ್ರಶಸ್ತಿ ನೀಡಲಾಗಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಅಡ್ವಾಣಿ ಇಡೀ ದೇಶವನ್ನು ಜಾಗೃತಗೊಳಿಸಿದ್ದಾರೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ದೇಶಾದ್ಯಂತ ರಥಯಾತ್ರೆಯನ್ನು ಆಯೋಜಿಸಲಾಗಿತ್ತು. ಎಲ್ಲಾ ಹಿಂದೂಗಳನ್ನು ಒಟ್ಟಿಗೆ ಸೇರಿಸಲಾಯಿತು. ದೇಶದಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸಲು ಅವರು ಅಪಾರ ಶ್ರಮಿಸಿದ್ದಾರೆ ಎಂದರು.

ಅತ್ಯುತ್ತಮ ಸಂಸದೀಯ ಪ್ರಶಸ್ತಿ ಪಡೆದವರಲ್ಲಿ ಅಡ್ವಾಣಿ ಕೂಡ ಒಬ್ಬರು. ಗುಜರಾತ್‌ನ ರಾಜಧಾನಿ ಗಾಂಧಿನಗರದ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಗೆದ್ದಿದ್ದಾರೆ. 1991ರಲ್ಲಿ ಮೊದಲ ಬಾರಿಗೆ ಇಲ್ಲಿಂದ ಗೆದ್ದಿದ್ದರು. ಆ ಬಳಿಕ 1998ರಿಂದ 2014ರವರೆಗೆ ಲೋಕಸಭೆಗೆ ಸೋಲದೇ ಆಯ್ಕೆಯಾಗಿದ್ದರು. ಸದ್ಯ ಅವರು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+