ಸುಪ್ರೀಂ ಆದೇಶ: ಮುರಳಿ ಭೇಟಿ ಮಾಡಿದ ಆಡ್ವಾಣಿ

Posted By:
Subscribe to Oneindia Kannada

ನವದೆಹಲಿ, ಏಪ್ರಿಲ್ 19: ಬಾಬ್ರಿ ಮಸೀದಿ ಕೆಡವಿದ ಪ್ರಕರಣದಲ್ಲಿ ತಮ್ಮ ವಿರುದ್ಧ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕ ಬುಧವಾರ ಬಿಜೆಪಿಯ ಧುರೀಣ ಲಾಲ್ ಕೃಷ್ಣ ಆಡ್ವಾಣಿ, ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.

1992ರಲ್ಲಿ ಅಯೋಧ್ಯೆಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಧ್ವಂಸಕ್ಕೆ ಆಡ್ವಾಣಿಯವರ ಪ್ರಚೋದನಾಕಾರಿ ಭಾಷಣಗಳೇ ಕಾರಣ ಎಂಬ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಇದೀಗ ಅವರ ವಿರುದ್ಧ ವಿಚಾರಣೆಗೆ ಆದೇಶ ನೀಡಿದೆ.

LK Advani Meets Murli Manohar Joshi After Supreme Court Setback

ಈ ಪ್ರಕರಣದಲ್ಲಿ, ಕೇಂದ್ರದ ಸಚಿವೆ ಉಮಾಭಾರತಿ, ಬಿಜೆಪಿಯ ಹಿರಿಯ ನಾಯಕ ವಿನಯ್ ಕಟಿಯಾರ್ ವಿರುದ್ಧವೂ ವಿಚಾರಣೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ನೀಡಿದೆ.

ಸುಪ್ರೀಂ ಕೋರ್ಟ್ ನ ಈ ಆದೇಶ ಹೊರಬೀಳುತ್ತಿದ್ದಂತೆ, ಈ ಇಬ್ಬರೂ ನಾಯಕರು ಪರಸ್ಪರ ಭೇಟಿಯಾಗಿ ಚರ್ಚಿಸಿದರು. ಮಾತುಕತೆ ವಿವರಗಳು ಲಭ್ಯವಾಗಿಲ್ಲ.

ಏತನ್ಮಧ್ಯೆ, ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಪಕ್ಷವು ಆಡ್ವಾಣಿಯವರನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Veteran BJP leaders LK Advani and Murli Manohar Joshi met this evening, hours after the Supreme Court ruled that they will be tried on conspiracy charges for their alleged role in the demolition of the Babri Masjid mosque in 1992 in Ayodhya.
Please Wait while comments are loading...