ಲಾಲ್ ಕೃಷ್ಣ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು
ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಬುಧವಾರ ಮತ್ತೆ ಏರು ಪೇರು ಕಾಣಿಸಿಕೊಂಡಿದೆ. ಲಾಲ್ ಕೃಷ್ಣ ಅಡ್ವಾಣಿ ಅವರನ್ನು ತಕ್ಷಣವೇ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೇ ವೇಳೆ ಲಾಲ್ ಕೃಷ್ಣ ಅಡ್ವಾಣಿ ಅವರ ಕಚೇರಿ ನೀಡಿರುವ ಮಾಹಿತಿಯಲ್ಲಿ ನಿತ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಈ ಹಿಂದೆ ಜೂನ್ 27 ರಂದು ಕೂಡ ಎಲ್ ಕೆ ಅಡ್ವಾಣಿ ಆರೋಗ್ಯ ಹದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಡಾ.ವಿನೀತ್ ಪುರಿ ಅವರು ಅಪೋಲೋ ಆಸ್ಪತ್ರೆಯಲ್ಲಿ ಎಲ್‌ಕೆ ಅಡ್ವಾಣಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಬಿಜೆಪಿ ನಾಯಕನ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದರು.

ಕಳೆದ ವಾರವೂ ಭಾರತದ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಜೂನ್ 26 ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಯೋ ಸಹಜ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದರಿಂದ ದಾಖಲಿಸಲಾಗಿದೆ ಎಂದು ಆಗ ಕುಟುಂಬದ ಮೂಲಗಳು ತಿಳಿಸಿದ್ದವು. ಅಲ್ಲದೆ ದಾಖಲಾದ ಮರು ದಿನವೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
ದೇಶದ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (96) ಅವರನ್ನು ಜೂನ್ 26 ರ ತಡರಾತ್ರಿ ದೆಹಲಿಯ ಏಮ್ಸ್‌ಗೆ ದಾಖಲಿಸಲಾಯಿತು. ಆ ವೇಳೆ ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ. ಆದರೆ, ಮರುದಿನವೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
ಅಡ್ವಾಣಿ ಅವರು ದೀರ್ಘಕಾಲದವರೆಗೆ ವಯೋ ಸಹಜ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿಯೇ ಅವರು ಕಾಲಕಾಲಕ್ಕೆ ತಪಾಸಣೆಗೆ ಒಳಪಡುತ್ತಿದ್ದಾರೆ. ಬಿಜೆಪಿಯ ಹಿರಿಯ ಮುಖಂಡ ಎಲ್‌ಕೆ ಅಡ್ವಾನಿ ಅವರಿಗೆ 2024ರ ಮಾರ್ಚ್ 30 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದರು. ಲಾಲ್ ಕೃಷ್ಣ ಅಡ್ವಾಣಿ ಅವರು ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ವಿಭೂಷಣವನ್ನು ಸಹ ಪಡೆದರು.












Click it and Unblock the Notifications