ಲಾಕ್ ಡೌನ್ ವೇಳೆ ರಸ್ತೆ ಅಪಘಾತ; 196 ವಲಸೆ ಕಾರ್ಮಿಕರು ಸಾವು
ನವದೆಹಲಿ, ಮೇ 26 : ಭಾರತದ ವಿವಿಧ ರಾಜ್ಯಗಳಲ್ಲಿ ಲಾಕ್ ಡೌನ್ ಅವಧಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ 196 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಅಗತ್ಯ ವಸ್ತುಗಳನ್ನು ಸರಬರಾಜು ಮಾಡುವ ವಾಹನಗಳು ಮಾತ್ರ ಸಂಚಾರ ನಡೆಸುತ್ತಿದ್ದವು.
ಸೇವ್ ಲೈಫ್ ಫೌಂಡೇಷನ್ ಮಾರ್ಚ್ 25ರಿಂದ ದೇಶದಲ್ಲಿ ನಡೆದ ರಸ್ತೆ ಅಪಘಾತಗಳ ಸಮೀಕ್ಷೆಯನ್ನು ನಡೆಸಿದೆ. 1346 ಅಪಘಾತಗಳು ನಡೆದಿದ್ದು, 601 ಜನರು ಮೃತಪಟ್ಟಿದ್ದಾರೆ. 1161 ಜನರು ಗಾಯಗೊಂಡಿದ್ದಾರೆ ಎಂದು ಸಮೀಕ್ಷೆ ಹೇಳಿದೆ.
ಒಟ್ಟು 196 ವಲಸೆ ಕಾರ್ಮಿಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರೆ. 866 ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ. ಲಾಕ್ ಡೌನ್ ಪರಿಣಾಮ ವಾಹನಗಳ ಸಂಚಾರ ಕಡಿಮೆ ಇತ್ತು. ಅಗತ್ಯ ವಸ್ತು ಸರಬರಾಜು ಮಾಡುವ ವಾಹನ ಮಾತ್ರ ಸಂಚಾರ ನಡೆಸುತ್ತಿತ್ತು.

ವಲಸೆ ಕಾರ್ಮಿಕರು ಒಂದು ಕಡೆಯಾದರೆ 35 ಕೊರೊನಾ ವಾರಿಯರ್ಸ್ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. 31 ಜನರು ಗಾಯಗೊಂಡಿದ್ದಾರೆ. ಭಾರತದ ರಸ್ತೆಗಳು ಎಷ್ಟು ಅಪಾಯಕಾರಿ ಎಂದು ಸಮೀಕ್ಷೆ ವಿವರಿಸಿದೆ.
ಲಾಕ್ ಡೌನ್ ಅವಧಿಯಲ್ಲಿ ರಸ್ತೆಗಳನ್ನು ರಿಪೇರಿ ಮಾಡಲು ಅವಕಾಶವಿತ್ತು. ರಸ್ತೆ ಸುರಕ್ಷತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಪಟ್ಟಿ ಮಾಡಿ ಸಮೀಕ್ಷೆಯ ಜೊತೆ ನೀಡಲಾಗಿದ್ದು, ಕೇಂದ್ರ ಭೂ ಸಾರಿಗೆ ನಿರ್ದೇಶನಾಲಯಕ್ಕೂ ಸಲ್ಲಿಕೆ ಮಾಡಲಾಗಿದೆ.
38 ಕಾರ್ಮಿಕರಿಗೆ ಗಾಯ: ಮಂಗಳವಾರ ಸಂಜೆ ಜಾರ್ಖಂಡ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ 38 ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ. ಕೋಲ್ಕತ್ತಾದಿಂದ ಕಾರ್ಮಿಕರು ಬರುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಅಪಘಾತ ಸಂಭವಿಸಿದೆ.












Click it and Unblock the Notifications