ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ ಲಾಕ್ ಡೌನ್ 4.O ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ!

|
Google Oneindia Kannada News

ನವದೆಹಲಿ, ಮೇ.17: ನೊವೆಲ್ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ನಾಲ್ಕನೇ ಅವಧಿಗೆ ಭಾರತ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರವು 4.O ಲಾಕ್ ಡೌನ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಿನ ನಿಯಮ ಪಾಲನೆಗೆ ಸೂಚನೆ ನೀಡಿದೆ.

ಮೊದಲ ಹಂತದಲ್ಲಿ ಮಾರ್ಚ್.25 ರಿಂದ ಏಪ್ರಿಲ್.14ರವರೆಗೂ 21 ದಿನ ಭಾರತ ಲಾಕ್ ಡೌನ್ ಘೋಷಿಸಲಾಯಿತು. ಏಪ್ರಿಲ್.15 ರಿಂದ ಮೇ.03ರವರೆಗೂ ಎರಡನೇ ಹಂತ, ಹಾಗೂ ಮೇ.04ರಿಂದ ಮೇ.17ರವೆಗೂ ಮೂರನೇ ಹಂತದ ಲಾಕ್ ಡೌನ್ ವಿಸ್ತರಣೆ ಮಾಡಲಾಗಿತ್ತು. ಇದೀಗ ಮೇ.31ರವರೆಗೂ ನಾಲ್ಕನೇ ಹಂತದ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.

ಮೇ 31ರ ತನಕ ಲಾಕ್ಡೌನ್ ವಿಸ್ತರಣೆ ಮಾಡಿದ ಗೃಹ ಇಲಾಖೆಮೇ 31ರ ತನಕ ಲಾಕ್ಡೌನ್ ವಿಸ್ತರಣೆ ಮಾಡಿದ ಗೃಹ ಇಲಾಖೆ

ಕೇಂದ್ರ ಸರ್ಕಾರದ ಬದಲು ಕೆಂಪು, ಕಿತ್ತಳೆ, ಹಸಿರು ವಲಯಗಳನ್ನು ತೀರ್ಮಾನಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ನೀಡಲಾಗಿದೆ. ಸಾರ್ವಜನಿಕ ಸಭೆ, ಸಮಾರಂಭ, ಕಾರ್ಯಕ್ರಮಗಳಿಗೆ ನಿರ್ಬಂಧ ಎಂದಿನಂದೆ ಮುಂದುವರಿಸಲಾಗಿದೆ.

India Lockdown 4.O: Three Sort Of Central Government Guidelines

ಕಂಟೇನ್ಮೆಂಟ್ ನಲ್ಲಿ ಕಟ್ಟುನಿಟ್ಟಿನ ಕ್ರಮ:

ನೊವೆಲ್ ಕೊರೊನಾ ವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆಯಲ್ಲಿ ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಾರ್ಯ ಚಟುವಟಿಕೆಗಳ ಬಗ್ಗೆ ಜಿಲ್ಲಾಡಳಿತವೇ ತೀರ್ಮಾನ ತೆಗೆದುಕೊಳ್ಳಲು ಅನುಮತಿ ನೀಡಲಾಗಿದೆ.

3 ವರ್ಗಗಳನ್ನಾಗಿ ವಿಂಗಡಿಸಿದ ಕೇಂದ್ರ ಸರ್ಕಾರ:

ಕೇಂದ್ರ ಸರ್ಕಾರವು ಮಾರ್ಗಸೂಚಿಯಲ್ಲಿ ಮೂರು ವಿಧಗಳನ್ನು ವಿಂಗಡಿಸಲಾಗಿದೆ. ಮೊದಲೇ ವರ್ಗದಲ್ಲಿ 10 ವರ್ಷದೊಳಗಿನ ಮಕ್ಕಳಿದ್ದು, ಎರಡನೇ ವರ್ಗದಲ್ಲಿ 60 ವರ್ಷದ ಮೇಲ್ಪಟ್ಟ ವೃದ್ಧರು ಹಾಗೂ ಮೂರನೇ ವರ್ಗದಲ್ಲಿ ಅನಾರೋಗ್ಯಕ್ಕೆ ತುತ್ತಾದವರನ್ನು ಗುರುತಿಸಲಾಗಿದೆ. ಈ ಮೂರು ವರ್ಗದ ಜನರು ಮನೆಗಳಿಂದ ಹೊರ ಬರದಂತೆ ಎಚ್ಚರಿಕೆ ನೀಡಲಾಗಿದೆ.

English summary
India Lockdown 4.O: Three Sort Of Central Government Guidelines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X