ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್ ಡೌನ್ 5.0; 9 ರಿಂದ 5 ಗಂಟೆ ತನಕ ದೇಶಾದ್ಯಂತ ಕರ್ಫ್ಯೂ

|
Google Oneindia Kannada News

ನವದೆಹಲಿ, ಮೇ 30 : ಕೊರೊನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ಲಾಕ್ ಡೌನ್‌ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಜೂನ್ 30ರ ತನಕ ದೇಶದಲ್ಲಿ 5ನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುತ್ತದೆ.

Recommended Video

ಕೊರೊನ ಸಂಟಷ್ಟದ ನಡುವೆ ಭಾರತಕ್ಕೆ ಒಂದು ಸಿಹಿ ಸುದ್ದಿ | Oneindia Kannada

ಶುಕ್ರವಾರ ಕೇಂದ್ರ ಗೃಹ ಸಚಿವಾಲಯ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇದರ ಜೊತೆಗೆ 5ನೇ ಹಂತದ ಲಾಕ್ ಡೌನ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿ ಹಲವಾರು ಅಂಶಗಳ ಕುರಿತು ಮಾಹಿತಿ ನೀಡಲಾಗಿದೆ.

ಬ್ರೇಕಿಂಗ್ ನ್ಯೂಸ್ ; ಒಂದು ತಿಂಗಳ ಕಾಲ ಲಾಕ್ ಡೌನ್ ವಿಸ್ತರಣೆ ಬ್ರೇಕಿಂಗ್ ನ್ಯೂಸ್ ; ಒಂದು ತಿಂಗಳ ಕಾಲ ಲಾಕ್ ಡೌನ್ ವಿಸ್ತರಣೆ

5ನೇ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ಇಡೀ ದೇಶದಲ್ಲಿ ರಾತ್ರಿ 9ರಿಂದ ಬೆಳಗ್ಗೆ 5 ಗಂಟೆ ತನಕ ಕರ್ಫ್ಯೂ ಜಾರಿಯಲ್ಲಿರಲಿದೆ. ಪ್ರಸ್ತುತ ವಿವಿಧ ರಾಜ್ಯ/ಕೇಂದ್ರಾಡಳಿತ ಪ್ರದೇಶದಲ್ಲಿ ಸಂಜೆ 7 ರಿಂದ ಬೆಳಗ್ಗೆ 7ರ ತನಕ ಕರ್ಫ್ಯೂ ಜಾರಿಯಲ್ಲಿದೆ.

ಕರ್ನಾಟಕ; ಸರ್ಕಾರಿ ಬಸ್‌ ಸಂಚಾರಕ್ಕೆ ಹೆಚ್ಚಿದ ಬೇಡಿಕೆ ಕರ್ನಾಟಕ; ಸರ್ಕಾರಿ ಬಸ್‌ ಸಂಚಾರಕ್ಕೆ ಹೆಚ್ಚಿದ ಬೇಡಿಕೆ

 Lockdown 5.0 Curfew In India From 9Pm To 5 Am

ಸ್ಥಳೀಯ ಸರ್ಕಾರಗಳು ಘೋಷಣೆ ಮಾಡಿರುವ ಕಂಟೈನ್ಮೆಂಟ್ ಝೋನ್‌ಗಳಲ್ಲಿ ಲಾಕ್ ಡೌನ್ ನಿಯಮಗಳ ವಿನಾಯಿತಿ ಅನ್ವಯ ಆಗುವುದಿಲ್ಲ ಎಂದು ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ. ಬಫರ್ ಝೋನ್‌ನಲ್ಲಿ ಪರಿಸ್ಥಿತಿ ನೋಡಿಕೊಂಡು ಸ್ಥಳೀಯ ಅಧಿಕಾರಿಗಳು ತೀರ್ಮಾನ ಕೈಗೊಳ್ಳಬೇಕು.

ಭಾನುವಾರ ಕರ್ಫ್ಯೂ ಇಲ್ಲ: ಬೆಳಗ್ಗೆ 7 ರಿಂದ ಸಂಜೆ 7 ರವರಿಗೆ ಮಾತ್ರ ವಿನಾಯಿತಿ.!ಭಾನುವಾರ ಕರ್ಫ್ಯೂ ಇಲ್ಲ: ಬೆಳಗ್ಗೆ 7 ರಿಂದ ಸಂಜೆ 7 ರವರಿಗೆ ಮಾತ್ರ ವಿನಾಯಿತಿ.!

ಅಂತರಾಜ್ಯಗಳ ನಡುವೆ ಜನರು, ಸಾಮಾಗ್ರಿಗಳನ್ನು ಹೊತ್ತ ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ ಮತ್ತು ಇದಕ್ಕೆ ಪ್ರತ್ಯೇಕವಾದ ಪಾಸುಗಳನ್ನು ಪಡೆಯುವ ಅಗತ್ಯವಿಲ್ಲ ಎಂದು ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ. ಆದರೆ, ಪರಿಸ್ಥಿತಿ ನೋಡಿಕೊಂಡು ರಾಜ್ಯಗಳು ನಿರ್ಬಂಧ ವಿಧಿಸಬಹುದು ಎಂದು ಹೇಳಿದೆ.

ಪ್ರಯಾಣಿಕ ರೈಲು ಸೇವೆ, ದೇಶಿಯ ವಿಮಾನ ಸೇವೆ ಇರಲಿದೆ. ಮೆಟ್ರೋ, ಅಂತರಾಷ್ಟ್ರೀಯ ವಿಮಾನ ಪ್ರಯಾಣದ ಕುರಿತು ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುತ್ತದೆ.

English summary
Union government on Friday ordered to extended lock down till June 30, 2020. Curfew will in effect from 9Pm To 5 Am in entire country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X