ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಅಖಾಡಕ್ಕೆ ಎಲ್‌ಜೆಪಿ
ನವದೆಹಲಿ, ಅಕ್ಟೋಬರ್ 17: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಲೋಕ ಜನಶಕ್ತಿ ಪಕ್ಷವು (ಎಲ್‌ಜೆಪಿ) ಸ್ಪರ್ಧಿಸಲಿದೆ ಎಂದು ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಘೋಷಿಸಿದ್ದಾರೆ.
ಎರಡು ರಾಜ್ಯಗಳಲ್ಲಿ ಸ್ಪರ್ಧಿಸುವ ಸ್ಥಾನಗಳ ಬಗ್ಗೆ ಪಕ್ಷವು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಪಾಸ್ವಾನ್ ಹೇಳಿದರು. ಈ ಸಂಬಂಧ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದ ನಂತರ ಬಿಜೆಪಿ ಆಡಳಿತದ ಎರಡು ರಾಜ್ಯಗಳಲ್ಲಿ ಚುನಾವಣಾ ಕಣಕ್ಕೆ ಸೇರುವ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
''ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಲೋಕ ಜನಶಕ್ತಿ ಪಕ್ಷವು ನಿರ್ಧರಿಸಿದೆ. ಗುಜರಾತ್‌ನಲ್ಲಿ ಪಕ್ಷವು ಸ್ಪರ್ಧಿಸುವ ಸ್ಥಾನಗಳ ಸಂಖ್ಯೆ ಮತ್ತು ಅಭ್ಯರ್ಥಿಗಳ ಪಟ್ಟಿಯ ಕುರಿತು ನಾವು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಪಾಸ್ವಾನ್ ಹೇಳಿದ್ದಾರೆ.

ಹಿಮಾಚಲ ಪ್ರದೇಶ ಉಸ್ತುವಾರಿದಲ್ಲಿ ಉಸ್ತುವಾರಿ ನೇಮಕ:
ಲೋಕ ಜನಶಕ್ತಿ ಪಕ್ಷವು ಹಿಮಾಚಲ ಪ್ರದೇಶದಲ್ಲಿ ಮೊದಲು ಉಸ್ತುವಾರಿಯನ್ನು ನೇಮಿಸುತ್ತದೆ. ತದನಂತರದಲ್ಲಿ ಅಭ್ಯರ್ಥಿಗಳ ಪಟ್ಟಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪಾಸ್ವಾನ್ ಮಾಹಿತಿ ನೀಡಿದರು.
ಹಿಮಾಚಲ ಪ್ರದೇಶದಲ್ಲಿ ಯಾವಾಗ ಮತದಾನ?:
ಹಿಮಾಚಲ ಪ್ರದೇಶ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್ 12ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 8ರಂದು ಮತಗಳ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್ 27 ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ವಾಪಸ್ ಪಡೆಯುವುದಕ್ಕೆ ಅಕ್ಟೋಬರ್ 29 ಕೊನೆಯ ದಿನವಾಗಿದೆ.












Click it and Unblock the Notifications