ಲೋಕ ಸಮರ : 7 ಹಂತದಲ್ಲಿ ಮತದಾನ, ಮೇ 23ರಂದು ಫಲಿತಾಂಶ
Recommended Video

ನವದೆಹಲಿ, ಮಾರ್ಚ್ 10: ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ಭಾನುವಾರದ ಸಂಜೆ 5 ಗಂಟೆಗೆ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರು ಲೋಕಸಭೆ ಚುನಾವಣೆ 2019 ವೇಳಾಪಟ್ಟಿಯನ್ನು ಘೋಷಿಸಿದರು.
ಲೋಕಸಭಾ ಚುನಾವಣೆ ವೇಳಾಪಟ್ಟಿ ಜೊತೆಗೆ ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗಳಿಗೆ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆಯಿತ್ತು. ಆದರೆ, ಈ ಬಗ್ಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುವುದು ಎಂದರು.
ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ 2 ಹಂತದ ಮತದಾನ
ಚುನಾವಣಾ ದಿನಾಂಕ ಘೋಷಿಸಿರುವುದರಿಂದ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಇವಿಎಂ, ವಿವಿಪ್ಯಾಟ್ ಹಾಗೂ ಚುನಾವಣಾ ಪ್ರಕ್ರಿಯೆಗೆ ಬೇಕಾದ ಸಾಧನಗಳು ಸಿದ್ಧವಾಗಿದ್ದು, ಸಂಚಾರ ಕಾರ್ಯ ಸಂಪೂರ್ಣಗೊಂಡಿದ್ದು, ಒಟ್ಟು 543 ಲೋಕಸಭಾ ಕ್ಷೇತ್ರಗಳಲ್ಲಿ 10 ಲಕ್ಷ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ವಿಸರ್ಜನೆಗೊಂಡಿರುವುದರಿಂದ ಆರು ತಿಂಗಳ ಒಳಗೆ ಅಲ್ಲಿಯೂ ಹೊಸದಾಗಿ ಚುನಾವಣೆ ನಡೆಸಬೇಕಿದೆ. ನವೆಂಬರ್ 2018ರಂದು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯನ್ನು ವಿಸರ್ಜನೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಇದರ ಗರಿಷ್ಠ ಅವಧಿಯ ಮಿತಿ ಮುಗಿಯಲಿದೆ.
ಜಮ್ಮು ಮತ್ತು ಕಾಶ್ಮೀರದ 6 ವರ್ಷದ ಅವಧಿ ಮಾರ್ಚ್ 16, 2021ಕ್ಕೆ ಮುಕ್ತಾಯಗೊಳ್ಳಲಿದೆ.ಪಿಡಿಪಿ ಹಾಗೂ ಬಿಜೆಪಿ ನಡುವಿನ ಸಖ್ಯ ಅಂತ್ಯಗೊಂಡಿದ್ದರಿಂದ ಸರ್ಕಾರ ಮುರಿದು ಬಿದ್ದಿದೆ.













Click it and Unblock the Notifications